Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅದಕ್ಕೆ ಯೇಸು, “ಈ ಹೊತ್ತೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಅವನಿಗೆ ಯೇಸು, “ಇಂದೇ ನೀನು ನನ್ನೊಡನೆ ಪರಂಧಾಮದಲ್ಲಿರುವೆ ಎಂದು ನಿಶ್ಚಯವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಅದಕ್ಕೆ ಯೇಸು - ಈಹೊತ್ತೇ ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಆಗ ಯೇಸು ಅವನಿಗೆ, “ಕೇಳು! ನಾನು ಸತ್ಯವನ್ನೇ ಹೇಳುತ್ತೇನೆ. ಈ ದಿನವೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಆಗ ಯೇಸು ಅವನಿಗೆ, “ಈ ದಿನವೇ ನೀನು ನನ್ನ ಸಂಗಡ ಪರದೈಸಿನಲ್ಲಿರುವೆ ಎಂದು ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಜೆಜುನ್ ತೆಕಾ “ಮಿಯಾ ತುಕಾ ಖರೆಚ್ ಸಾಂಗ್ತಾ ಆಜುಚ್ ತಿಯಾ ಮಾಜೆ ವಾಂಗ್ಡಾ, ವೈಕುಂಟಾತ್ ರ್‍ಹಾತೆ!” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:43
22 ತಿಳಿವುಗಳ ಹೋಲಿಕೆ  

ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು.


ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ಮನುಷ್ಯಕುಮಾರನು ದಾರಿತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು” ಎಂದು ಹೇಳಿದನು.


ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. ಸೆಲಾ


ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು.


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು, ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.


ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ, ಇಲ್ಲಿಂದ ಹೊರಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬುದೇ ನನ್ನ ಅಭಿಲಾಷೆ, ಅದು ಅತ್ಯುತ್ತಮವಾಗಿದೆ.


ಇದನ್ನು ಕುರಿತು ಆಲೋಚಿಸಿ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿ ಇರುವುದೇ ಉತ್ತಮವೆಂದು ಎಣಿಸುವವರಾಗಿದ್ದೇವೆ.


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.


ಆಗ ಅವರು ಬೇಡುವುದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.


ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.


“ಯೇಸುವೇ ನೀನು ನಿನ್ನ ರಾಜ್ಯವನ್ನು ಪಡೆದವನಾಗಿ ಬರುವಾಗ ನನ್ನನ್ನು ನೆನಪಿಸಿಕೋ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು