Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆತನು ಅವರನ್ನು, “ಯಾವ ಸಂಗತಿಗಳು” ಎಂದು ಕೇಳಿದನು. ಅದಕ್ಕೆ ಅವರು, “ನಜರೇತಿನವನಾದ ಯೇಸುವಿನ ಸಂಗತಿಗಳೇ. ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಉನ್ನತನಾದ ಪ್ರವಾದಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಏನು ನಡೆಯಿತು?” ಎಂದು ಯೇಸು ಪುನಃ ಕೇಳಿದಾಗ ಆ ಶಿಷ್ಯರಿಬ್ಬರು, “ಇವು ನಜರೇತಿನ ಯೇಸುವಿಗೆ ಸಂಭವಿಸಿದ ಘಟನೆಗಳು. ಅವರು ನಡೆಯಲ್ಲೂ ನುಡಿಯಲ್ಲೂ ದೇವರ ಹಾಗೂ ಸಕಲ ಮಾನವರ ದೃಷ್ಟಿಯಲ್ಲಿ ಪ್ರವಾದಿಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆತನು ಅವರನ್ನು - ಯಾವ ಸಂಗತಿಗಳು ಎಂದು ಕೇಳಿದನು. ಅದಕ್ಕೆ ಅವರು - ನಜರೇತಿನವನಾದ ಯೇಸುವಿನ ಸಂಗತಿಗಳೇ; ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಸಮರ್ಥನಾದ ಪ್ರವಾದಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೇಸು ಅವರಿಗೆ, “ನೀವು ಯಾವುದರ ಬಗ್ಗೆ ಮಾತಾಡುತ್ತಿದ್ದೀರಿ?” ಎಂದು ಕೇಳಿದನು. ಅವರು ಆತನಿಗೆ, “ನಜರೇತಿನ ಯೇಸುವಿನ ಬಗ್ಗೆ. ಆತನು ದೇವರ ಮತ್ತು ಮನುಷ್ಯರ ದೃಷ್ಟಿಯಲ್ಲಿ ಮಹಾಪ್ರವಾದಿಯಾಗಿದ್ದನು. ಆತನು ಅನೇಕ ಸಂಗತಿಗಳನ್ನು ಹೇಳಿದನು ಮತ್ತು ಅದ್ಭುತಕಾರ್ಯಗಳನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅದಕ್ಕೆ ಯೇಸು ಅವರಿಗೆ, “ಯಾವ ಘಟನೆ?” ಎಂದು ಕೇಳಲು, ಅವರು ಯೇಸುವಿಗೆ, “ನಜರೇತಿನ ಯೇಸುವಿನ ವಿಷಯಗಳೇ, ಅವರು ಕೃತ್ಯಗಳಲ್ಲಿಯೂ ಮಾತುಗಳಲ್ಲಿಯೂ ದೇವರ ದೃಷ್ಟಿಯಲ್ಲಿಯೂ ಜನರೆಲ್ಲರ ದೃಷ್ಟಿಯಲ್ಲಿಯೂ ಬಹುಶಕ್ತಿವಂತರಾಗಿದ್ದ ಪ್ರವಾದಿಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತನ್ನಾ ತೆನಿ,“ ಕಾಯ್ ಹೊಲೆ?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ “ನಜರೆತಾಚ್ಯಾ ಜೆಜುಕ್ ಹೊಲ್ಲೆ.” ಮನುನ್ ಜಬಾಬ್ ದಿಲ್ಯಾನಿ. “ದೆವಾನ್ ಅನಿ ಮಾನ್ಸಾನಿ ಹ್ಯೊ ಮಾನುಸ್ ಎಕ್ ಪ್ರವಾದಿ ಮನುನ್ ಮಾನಲ್ಲೊ ಹೊತ್ತೊ, ಸಗ್ಳ್ಯಾ ರಿತಿನ್ ತೆಕಾ ಸಗ್ಳೊ ಬಳ್ ಹೊತ್ತೊ, ತೆನಿ ಅಪ್ನಿ ಸಾಂಗ್ಲ್ಯಾನ್ ಅನಿ ತಸೆಚ್ ಕರುನ್ ದಾಕ್ವುಲ್ಯಾನ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:19
13 ತಿಳಿವುಗಳ ಹೋಲಿಕೆ  

ಅದಕ್ಕೆ ಆ ಗುಂಪಿನ ಜನರು, “ಈತನು ಗಲಿಲಾಯದ ನಜರೇತಿನ ಪ್ರವಾದಿಯಾದ ಯೇಸು” ಅಂದರು.


ಮೋಶೆಯು ಐಗುಪ್ತದೇಶದವರ ಸರ್ವವಿದ್ಯೆಗಳಲ್ಲಿಯೂ ತಿಳಿವಳಿಕೆಯುಳ್ಳವನಾಗಿ ಮಾತುಗಳಲ್ಲಿಯೂ, ಕಾರ್ಯಗಳಲ್ಲಿಯೂ ಸಮರ್ಥನಾದನು.


“ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.


ಆತನು ಮಾಡಿದ ಈ ಸೂಚಕಕಾರ್ಯವನ್ನು ಆ ಜನರು ನೋಡಿ, “ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಈತನೇ” ಎಂದು ಹೇಳಿಕೊಂಡರು.


ಆ ಸ್ತ್ರೀ ಆತನಿಗೆ, “ಅಯ್ಯಾ, ನೀನು ಒಬ್ಬ ಪ್ರವಾದಿ ಎಂದು ನನಗೆ ಕಾಣುತ್ತದೆ.


ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, “ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಆಗದು” ಎಂದು ಹೇಳಿದನು.


ಎಲ್ಲರು ಭಯಹಿಡಿದವರಾಗಿ, “ಮಹಾಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರನ್ನು ಸಂದರ್ಶಿಸಲು ಬಂದಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.


ಅವರು ಅವನಿಗೆ “ನೀನು ಸಹ ಗಲಿಲಾಯದವನೋ? ನೀನೇ ಪರಿಶೋಧಿಸಿ ನೋಡು ಗಲಿಲಾಯದಿಂದ ಪ್ರವಾದಿಯು ಬರುವುದಿಲ್ಲ,” ಎಂದರು.


ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು.


ನಿಮ್ಮ ದೇವರಾದ ಯೆಹೋವನು ನಿಮ್ಮ ಸಹೋದರರಲ್ಲಿ ನನ್ನಂಥ ಪ್ರವಾದಿಯನ್ನು ನಿಮಗೆ ಏರ್ಪಡಿಸುವನು; ಅವನಿಗೆ ನೀವು ಕಿವಿಗೊಡಬೇಕು.


ಅವರಲ್ಲಿ ಕ್ಲೆಯೋಫನೆಂಬವನು ಆತನಿಗೆ, “ಯೆರೂಸಲೇಮಿಗೆ ಬಂದ ಪರಸ್ಥಳದವರೆಲ್ಲರಿಗೂ ಈ ದಿನಗಳಲ್ಲಿ ನಡೆದಿರುವ ಸಂಗತಿಗಳು ಗೊತ್ತಿರಲಾಗಿ ನಿನಗೆ ಮಾತ್ರ ಗೊತ್ತಿಲ್ಲವೋ?” ಎಂದು ಕೇಳಲು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು