Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೇಸು ಅವರಿಗೆ, “ಎಲಾ ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬದ ಮಂದ ಹೃದಯವುಳ್ಳವರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆಗ ಯೇಸು, “ಎಂಥ ಮತಿಹೀನರು ನೀವು! ಪ್ರವಾದಿಗಳು ಹೇಳಿರುವುದೆಲ್ಲವನ್ನು ನಂಬುವುದರಲ್ಲಿ ಎಷ್ಟು ಮಂದಮತಿಗಳು ನೀವು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆತನು ಅವರಿಗೆ - ಎಲಾ, ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆಗ ಯೇಸು ಅವರಿಗೆ, “ನೀವು ಬುದ್ಧಿಹೀನರು ಮತ್ತು ಸತ್ಯವನ್ನು ಗ್ರಹಿಸುವುದರಲ್ಲಿ ಮಂದಗತಿಗಳು! ಪ್ರವಾದಿಗಳು ಹೇಳಿದ ಪ್ರತಿಯೊಂದನ್ನೂ ನೀವು ನಂಬಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಯೇಸು ಅವರಿಗೆ, “ಎಂಥ ಬುದ್ಧಿಹೀನರು ನೀವು, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬುವುದರಲ್ಲಿ ಮಂದ ಹೃದಯದವರೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತನ್ನಾ ಜೆಜುನ್ ತೆಂಕಾ. “ತುಮಿ ಕವ್ಡೆ ಪಿಶೆ ಹಾಸಿ ಪ್ರವಾದ್ಯಾನಿ ಸಾಂಗಟಲ್ಲ್ಯಾ ವರ್‍ತಿ ವಿಶ್ವಾಸ್ ಕರ್‍ತಲ್ಯಾತ್ ತುಮಿ ಲೈ ಸಾವ್ಕಾಸ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:25
9 ತಿಳಿವುಗಳ ಹೋಲಿಕೆ  

ಅದಕ್ಕಾತನು, “ಎಲಾ, ಅಪನಂಬಿಕೆಯುಳ್ಳಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ! ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ” ಅಂದನು.


ಆತನು ಅವರಿಗೆ, “ನಿಮಗೆ ಇನ್ನೂ ತಿಳಿವಳಿಕೆಯಿಲ್ಲವೇ? ಹೊರಗಿನಿಂದ ಮನುಷ್ಯನೊಳಗೆ ಹೋಗುವಂಥದು,


ಅನಂತರ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.


ಮನುಷ್ಯಕುಮಾರನು ಆತನ ವಿಷಯವಾಗಿ ಬರೆದಿರುವ ಹಾಗೆ ಹೊರಟುಹೋಗುತ್ತಾನೆ; ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ಗತಿಯನ್ನು ಏನೆಂದು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು” ಅಂದನು.


ನಮ್ಮ ಸಂಗಡ ಇದ್ದವರಲ್ಲಿ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದ ಪ್ರಕಾರವೇ ಕಂಡರು. ಆತನನ್ನು ಮಾತ್ರ ಕಾಣಲಿಲ್ಲ” ಎಂದು ಹೇಳಿದರು.


ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ.


ನಾನು ಸಹ ಕಲಿತುಕೊಂಡ ಮೊದಲನೆಯ ಸಂಗತಿಗಳೊಳಗೆ ಪ್ರಮುಖವಾದ ಸಂಗತಿಯನ್ನೇ ನಿಮಗೆ ತಿಳಿಸಿದ್ದೇನೆ ಅದೇನೆಂದರೆ ಧರ್ಮಶಾಸ್ತ್ರದಲ್ಲಿ ತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು