Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಕ್ರಿಸ್ತನು ಇಂಥ ಶ್ರಮೆಗಳನ್ನು ಅನುಭವಿಸಿ ತನ್ನ ಮಹಿಮಾಪದವಿಗೆ ಸೇರುವುದು ಅಗತ್ಯವಾಗಿತ್ತಲ್ಲವೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಕ್ರಿಸ್ತನು ಇಂತಹ ಸಂಕಷ್ಟಗಳನ್ನು ಅನುಭವಿಸಿ ತನ್ನ ಮಹಿಮಾಸಿದ್ಧಿಯನ್ನು ಪಡೆಯಬೇಕಿತ್ತು ಅಲ್ಲವೇ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಕ್ರಿಸ್ತನು ಇಂಥ ಶ್ರಮಗಳನ್ನು ಅನುಭವಿಸಿ ತನ್ನ ಮಹಾಪದವಿಗೆ ಸೇರುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಕ್ರಿಸ್ತನು ತನ್ನ ಮಹಿಮೆಯನ್ನು ಪ್ರವೇಶಿಸುವ ಮೊದಲು ಇಂಥ ಶ್ರಮೆಗಳನ್ನು ಅನುಭವಿಸಬೇಕು ಎಂದು ಪ್ರವಾದಿಗಳು ಹೇಳಿದ್ದಾರೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಶ್ರಮೆಗಳನ್ನು ಅನುಭವಿಸಿದ ಮೇಲೆ ಕ್ರಿಸ್ತನು ಮಹಿಮೆಯಲ್ಲಿ ಪ್ರವೇಶಿಸುವುದು ಅಗತ್ಯವಾಗಿತ್ತಲ್ಲವೇ?” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಮೆಸ್ಸಿಯಾಕ್ ಅಪ್ನಾಚ್ಯಾ ಮಹಿಮೆತ್ ಜಾವ್ಚ್ಯಾ ಅದ್ದಿ ಹ್ಯೊ ಸಗ್ಳೊ ಕಸ್ಟ್ ಸೊಸ್ತಲೊ ಗರ್ಜೆಚೊ ನ್ಹಯ್ ಕಾಯ್?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:26
18 ತಿಳಿವುಗಳ ಹೋಲಿಕೆ  

ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಆಯಾ ವಾಕ್ಯಗಳ ಅರ್ಥವನ್ನು ವಿವರಿಸಿ; ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತು, ಎದ್ದು ಬರುವುದು ಅಗತ್ಯವೆಂತಲೂ “ನಾನು ನಿಮಗೆ ಪ್ರಸಿದ್ಧಿಪಡಿಸುವ ಯೇಸುವೇ ಆ ಕ್ರಿಸ್ತನೆಂತಲೂ” ಸ್ಥಿರಪಡಿಸಿದನು.


ಅನಂತರ, “ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ,


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,


ತರುವಾಯ ಯೇಸು, “ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?” ಅಂದನು.


ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.


ಆದುದರಿಂದ ಆತನು ಸತ್ತವರೊಳಗಿಂದ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನೂ, ಮತ್ತು ಯೇಸು ತಮಗೆ ಹೇಳಿದ ಮಾತನ್ನೂ ಅವರು ನಂಬಿದರು.


ಆತನು ಸತ್ತ ಮೇಲೆ ಜೀವದಿಂದೆದ್ದು ಬರಬೇಕೆಂಬುದಾಗಿ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ಅವರಿಗೆ ಇನ್ನೂ ತಿಳಿದಿರಲಿಲ್ಲ.


ಆನಂತರ ಅಬ್ರಹಾಮನು ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ, ತನ್ನ ಕೈಯಲ್ಲೇ ಬೆಂಕಿಯನ್ನೂ ಕತ್ತಿಯನ್ನೂ ತೆಗೆದುಕೊಂಡ ನಂತರ ಅವರಿಬ್ಬರೂ ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು