Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆತನು ಅವರ ಸಂಗಡ ಊಟಕ್ಕೆ ಕುಳಿತುಕೊಂಡಾಗ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ, ಮುರಿದು ಅವರಿಗೆ ಕೊಡುತ್ತಿರಲಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅವರ ಸಂಗಡ ಊಟಕ್ಕೆ ಕುಳಿತಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು, ದೇವರಿಗೆ ಕೃತಜ್ಞತಾಸ್ತೋತ್ರ ಸಲ್ಲಿಸಿ, ಅದನ್ನು ಮುರಿದು ಅವರಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆತನು ಅವರ ಸಂಗಡ ಊಟಕ್ಕೆ ಕೂತುಕೊಂಡಾಗ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಮುರಿದು ಅವರಿಗೆ ಕೊಡುತ್ತಿರಲಾಗಿ ಅವರ ಕಣ್ಣುಗಳು ತೆರೆದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯೇಸು ಅವರ ಸಂಗಡ ಕುಳಿತುಕೊಂಡು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡನು. ಆತನು ಆಹಾರಕ್ಕಾಗಿ ದೇವರಿಗೆ ಸೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಯೇಸು ಆ ಇಬ್ಬರು ಶಿಷ್ಯರೊಂದಿಗೆ ಊಟಕ್ಕೆ ಕುಳಿತುಕೊಂಡಿರಲು ರೊಟ್ಟಿಯನ್ನು ತೆಗೆದುಕೊಂಡು ಆಶೀರ್ವದಿಸಿ, ಮುರಿದು ಅವರಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತೊ ತೆಂಚ್ಯಾ ವಾಂಗ್ಡಾ ಜೆವ್ನಾಕ್ ಬಸ್ಲೊ, ಅನಿ ಭಾಕ್ರಿ ಘೆಟ್ಲ್ಯಾನ್, ಅನಿ ಧನ್ಯವಾದ್ ದಿವ್ನ್ ಮೊಡ್ಲ್ಯಾನ್, ಅನಿ ತೆಂಕಾ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:30
14 ತಿಳಿವುಗಳ ಹೋಲಿಕೆ  

ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಕೊಟ್ಟರು.


ಆಗ ಅವರಿಬ್ಬರು ದಾರಿಯಲ್ಲಿ ನಡೆದ ಸಂಗತಿಯನ್ನೂ ರೊಟ್ಟಿ ಮುರಿಯುವುದರಲ್ಲಿ ತಾವು ಆತನ ಗುರುತು ಹಿಡಿದೆವೆಂಬುದನ್ನೂ ವಿವರಿಸಿದರು.


ಆ ಮೇಲೆ ಯೇಸುವು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ, ಮುರಿದು ಶಿಷ್ಯರ ಕೈಗೆ ಕೊಟ್ಟು, ಇದನ್ನು ಜನರ ಗುಂಪಿಗೆ ಹಂಚಿರಿ ಅಂದನು.


ಆತನು ಆ ಏಳು ರೊಟ್ಟಿಗಳನ್ನೂ ಆ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಮಾಡಿ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಹಂಚಿಕೊಟ್ಟರು.


ರೊಟ್ಟಿಯನ್ನು ತೆಗೆದುಕೊಂಡು, ಎಲ್ಲರ ಮುಂದೆ ದೇವರ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವುದಕ್ಕೆ ಪ್ರಾರಂಭಿಸಿದನು.


ಆಮೇಲೆ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಹಂಚಿದನು. ಅದೇ ರೀತಿ ಮೀನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದನು.


ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು.


ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಮುರಿದು ಶಿಷ್ಯರಿಗೆ ಕೊಡುತ್ತಾ “ಇದನ್ನು ತೆಗೆದುಕೊಳ್ಳಿರಿ, ಇದು ನನ್ನ ದೇಹ” ಎಂದನು.


ಆಗ ಯೇಸು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟು, ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ ಅವುಗಳನ್ನು ಮುರಿದು ಜನರಿಗೆ ಹಂಚಲು ತನ್ನ ಶಿಷ್ಯರ ಕೈಗೆ ಕೊಟ್ಟನು; ಅವರು ಗುಂಪಿನವರಿಗೆ ಹಂಚಿಕೊಟ್ಟರು.


ಆ ಮೇಲೆ ಆತನು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ ದೇವರಿಗೆ ಸ್ತೋತ್ರಮಾಡಿ ಆ ರೊಟ್ಟಿಗಳನ್ನು ಮುರಿದು ಇದನ್ನು ನೀವು ಜನರಿಗೆ ಹಂಚಿರಿ ಎಂದು ಶಿಷ್ಯರ ಕೈಗೆ ಕೊಟ್ಟನು, ಅದೇ ರೀತಿಯಲ್ಲಿ ಆ ಎರಡು ಮೀನುಗಳನ್ನೂ ಆತನು ಎಲ್ಲರಿಗೂ ಹಂಚಿಸಿದನು.


ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ” ಅಂದನು.


ಆದರೆ ಅವರು, “ನಮ್ಮ ಸಂಗಡ ಇರು. ಸಂಜೆಯಾಯಿತು, ಹೊತ್ತು ಇಳಿಯುತ್ತಾ ಬಂದಿತು” ಎಂದು ಆತನಿಗೆ ಹೇಳಿ ಬಲವಂತ ಮಾಡಲು, ಆತನು ಅವರ ಕೂಡ ಇರುವುದಕ್ಕೆ ಹೋದನು.


ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.


ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು