Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಈ ವಿಷಯವಾಗಿ ಅವರಿಗೆ ಗಲಿಬಿಲಿ ಉಂಟಾದಾಗ ಹೊಳೆಯುವ ಉಡುಪನ್ನು ಧರಿಸಿದ್ದ ಇಬ್ಬರು ಪುರುಷರು ಫಕ್ಕನೆ ಅವರ ಬಳಿಯಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರು ತಬ್ಬಿಬ್ಬಾಗಿ ಅಲ್ಲೇ ನಿಂತರು. ಆಗ ತೇಜೋಮಯವಾದ ಉಡುಪನ್ನು ಧರಿಸಿದ್ದ ಇಬ್ಬರು ವ್ಯಕ್ತಿಗಳು ಫಕ್ಕನೆ ಅಲ್ಲೇ ಕಾಣಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಈ ವಿಷಯದಲ್ಲಿ ಅವರಿಗೆ ಗಲಿಬಿಲಿ ಉಂಟಾದಾಗ ಹೊಳೆಯುವ ಉಡುಪನ್ನು ಧರಿಸಿದ್ದ ಇಬ್ಬರು ಪುರುಷರು ಅಕಸ್ಮಾತ್ತಾಗಿ ಅವರ ಬಳಿಯಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸ್ತ್ರೀಯರಿಗೆ ಇದು ಅರ್ಥವಾಗದೆ ಆಶ್ಚರ್ಯಪಡುತ್ತಿರಲು, ಹೊಳೆಯುವ ಉಡುಪುಗಳನ್ನು ಧರಿಸಿಕೊಂಡಿದ್ದ ಇಬ್ಬರು (ದೇವದೂತರು) ಅವರ ಬಳಿಯಲ್ಲಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಬಹಳವಾಗಿ ಗಲಿಬಿಲಿಗೊಂಡರು. ಆಗ ಮಿಂಚಿನಂತೆ ಹೊಳೆಯುವ ವಸ್ತ್ರಗಳನ್ನು ಧರಿಸಿದ್ದ ಇಬ್ಬರು ಪುರುಷರು ಫಕ್ಕನೆ ಅವರ ಬಳಿ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಹೆ, ಬಗುನ್ ತೆನಿ ಅಜಾಪ್ ಹೊಲ್ಯಾನಿ, ತನ್ನಾ ದೊನ್ ಮಾನ್ಸಾ, ಎಗ್ದಮ್ ಝಳ್-ಝಳ್ತಲೆ ಕಪ್ಡೆ ನೆಸುನ್ ತೆಂಚ್ಯಾ ಇದ್ರಾಕ್ ಇಬೆ ರ್‍ಹಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:4
9 ತಿಳಿವುಗಳ ಹೋಲಿಕೆ  

ಅವರು ಸಮಾಧಿಯೊಳಗೆ ಹೋಗಿ, ಒಬ್ಬ ಯೌವನಸ್ಥನು ಬಿಳಿ ನಿಲುವಂಗಿಯನ್ನು ಧರಿಸಿಕೊಂಡು ಬಲ ಭಾಗದಲ್ಲಿ ಕುಳಿತಿರುವುದನ್ನು ಕಂಡು ಬೆಚ್ಚಿಬೆರಗಾದರು.


ಆತನು ಹೋಗುತ್ತಿರುವಾಗ ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಾ ಇರಲಾಗಿ ಶುಭ್ರ ವಸ್ತ್ರಧಾರಿಗಳಾದ ಇಬ್ಬರು ಪುರುಷರು ಫಕ್ಕನೆ ಅವರ ಹತ್ತಿರ ನಿಂತುಕೊಂಡರು.


ಹೇಗೆಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನೆದುರಿನಲ್ಲಿ ಮೂವರು ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವುದಕ್ಕೆ ಅವನು ಗುಡಾರದ ಬಾಗಿಲಿನಿಂದ ಓಡಿ ಹೋಗಿ ತಲೆಬಾಗಿ ನಮಸ್ಕರಿಸಿ.


ಕರ್ತನ ದೂತನೊಬ್ಬನು ಬಂದು ಅವರ ಎದುರಿನಲ್ಲಿ ನಿಂತನು. ಕರ್ತನ ಪ್ರಭೆಯು ಅವರ ಸುತ್ತಲು ಪ್ರಕಾಶಿಸಿತು; ಅವರು ಬಹಳವಾಗಿ ಹೆದರಿದರು.


ಆ ಸ್ತ್ರೀಯರು ಭಯಹಿಡಿದವರಾಗಿ ತಲೆ ತಗ್ಗಿಸಿಕೊಂಡು ನಿಂತಿರುವಾಗ ಆ ಪುರುಷರು ಅವರಿಗೆ, “ಸತ್ತವರೊಳಗೆ ಬದುಕಿರುವವನನ್ನು ಹುಡುಕುವುದೇನು?


ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು; ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನ ಪಕ್ಕೆಯನ್ನು ತಟ್ಟಿ ಎಬ್ಬಿಸಿ; “ತಟ್ಟನೆ ಏಳು” ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು