Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಆ ಮೇಲೆ ಅವರು ಶಾಸ್ತ್ರ ವಚನಗಳನ್ನು ತಿಳಿದುಕೊಳ್ಳುವಂತೆ ಆತನು ಅವರ ಮನಸ್ಸುಗಳನ್ನು ತೆರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಆಮೇಲೆ, ಪವಿತ್ರಗ್ರಂಥವನ್ನು ಅವರು ಅರ್ಥಮಾಡಿಕೊಳ್ಳುವಂತೆ ಅವರ ಬುದ್ಧಿಯನ್ನು ವಿಕಾಸಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಆಮೇಲೆ ಅವರು ಶಾಸ್ತ್ರವಚನಗಳನ್ನು ತಿಳುಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಬಳಿಕ ಯೇಸು ಪವಿತ್ರ ಗ್ರಂಥವನ್ನು ತನ್ನ ಶಿಷ್ಯರಿಗೆ ವಿವರಿಸಿದನು. ತನ್ನ ಬಗ್ಗೆ ಬರೆದಿರುವ ಸಂಗತಿಗಳನ್ನು ಅರ್ಥಮಾಡಿಕೊಳ್ಳಲು ಅವರಿಗೆ ಸಹಾಯ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ತರುವಾಯ ಅವರು ಪವಿತ್ರ ವೇದಗಳನ್ನು ಅರ್ಥಮಾಡಿಕೊಳ್ಳುವಂತೆ ಯೇಸು ಅವರ ಬುದ್ಧಿಯನ್ನು ತೆರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ಮಾನಾ ತೆನಿ ಪವಿತ್ರ್ ಪುಸ್ತಕಾಚ್ಯಾ ವಿಶಯಾತ್ ಕಳ್ವುನ್ ಘೆವ್‍ಸಾಟ್ನಿ ತೆಂಚಿ ಮನಾ ಉಗಡ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:45
13 ತಿಳಿವುಗಳ ಹೋಲಿಕೆ  

ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಥುವತೈರ ಎಂಬ ಊರಿನವಳೂ, ದೈವಭಕ್ತಳೂ ಆಗಿದ್ದಳು. ಪೌಲನು ಹೇಳುವ ಮಾತುಗಳಿಗೆ ಗಮನಕೊಡುವುದಕ್ಕಾಗಿ ಕರ್ತನು ಆಕೆಯ ಹೃದಯವನ್ನು ತೆರೆದನು.


ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.


ನನ್ನ ಕಣ್ಣುಗಳನ್ನು ತೆರೆ, ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು.


ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.


ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ.


ಆಗ ಅವರು ಒಬ್ಬರಿಗೊಬ್ಬರು, “ಆತನು ದಾರಿಯಲ್ಲಿ ನಮ್ಮ ಸಂಗಡ ಮಾತನಾಡಿದಾಗಲೂ, ಗ್ರಂಥಗಳ ಅರ್ಥವನ್ನು ನಮಗೆ ಬಿಡಿಸಿ ಹೇಳಿದಾಗಲೂ, ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ?” ಎಂದು ಹೇಳಿಕೊಂಡು,


ಅದಕ್ಕೆ ಯೆಹೋವನು ಅವನಿಗೆ, “ಮನುಷ್ಯರಿಗೆ ಬಾಯಿಕೊಟ್ಟವನು ಯಾರು? ಒಬ್ಬನನ್ನು ಮೂಕನಾಗಿ, ಕಿವುಡನಾಗಿ, ದೃಷ್ಠಿಯುಳ್ಳವನಾಗಿ ಹಾಗೂ ಕುರುಡನಾಗಿ ಉಂಟುಮಾಡಿದವನಾರು? ಯೆಹೋವನಾದ ನಾನೇ ಅಲ್ಲವೇ?


ಅವರ ಕಿವಿಗಳನ್ನು ತೆರೆದು, ಅವರಿಗೆ ಶಿಕ್ಷಾವಚನವನ್ನು ಉಪದೇಶಿಸಿ ಅದಕ್ಕೆ ಮುದ್ರೆ ಹಾಕುವನು.


“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ, ಪರಿಶುದ್ಧನೂ, ಸತ್ಯವಂತನೂ, ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ, ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು