Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅನ್ನನು ಮತ್ತು ಕಾಯಫನೂ ಮಹಾಯಾಜಕರಾಗಿದ್ದ ಕಾಲದಲ್ಲಿ ಜಕರೀಯನ ಮಗನಾದ ಯೋಹಾನನಿಗೆ ಮರುಭೂಮಿಯಲ್ಲಿ ದೇವರ ವಾಕ್ಯವು ಪ್ರಕಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅನ್ನನು ಮತ್ತು ಕಾಯಫನು ಅಂದಿನ ಪ್ರಧಾನ ಯಾಜಕರು. ಆಗ ಬೆಂಗಾಡಿನಲ್ಲಿ ಜಕರೀಯನ ಮಗ ಯೊವಾನ್ನನಿಗೆ ದೇವರ ಸಂದೇಶದ ಬೋಧೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅನ್ನನೂ ಕಾಯಫನೂ ಮಹಾಯಾಜಕರಾಗಿದ್ದ ಕಾಲದಲ್ಲಿ ಜಕರೀಯನ ಮಗನಾದ ಯೋಹಾನನಿಗೆ ಅಡವಿಯಲ್ಲಿ ದೇವರ ವಾಕ್ಯವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅನ್ನನು ಮತ್ತು ಕಾಯಫನು ಮಹಾಯಾಜಕರಾಗಿದ್ದರು. ಆ ಸಮಯದಲ್ಲಿ ಜಕರೀಯನ ಮಗನಾದ ಯೋಹಾನನಿಗೆ ದೇವರಿಂದ ಆಜ್ಞೆಯೊಂದು ಬಂತು. ಯೋಹಾನನು ಗುಡ್ಡಗಾಡಿನಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅನ್ನನು ಮತ್ತು ಕಾಯಫನು ಮಹಾಯಾಜಕರು ಆಗಿದ್ದ ಸಮಯದಲ್ಲಿ, ಅರಣ್ಯದಲ್ಲಿದ್ದ ಜಕರೀಯನ ಮಗ ಯೋಹಾನನಿಗೆ ದೇವರ ವಾಕ್ಯವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅನ್ನಾಸ್ ಅನಿ ಕಾಯಿಫಾಸ್ ಮನ್ತಲೆ ತನ್ನಾ ಮೊಟೆ ಯಾಜಕ್ ಹೊವ್ನ್ ಹೊತ್ತೆ. ಹ್ಯಾ ಎಳಾರ್ ಎಕ್ ಹಾಳ್ ಪಡಲ್ಲ್ಯಾ ಡಂಗ್ಳಿತ್ ಜೆಕರಿಯಾಚ್ಯಾ ಲೆಕಾಕ್, ಜುವಾಂವಾಕ್, ಎಕ್ ದೆವಾಚಿ ಗೊಸ್ಟ್ ಗಾವ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:2
21 ತಿಳಿವುಗಳ ಹೋಲಿಕೆ  

ಅವರೊಂದಿಗೆ ಅನ್ನನೆಂಬ ಮಹಾಯಾಜಕನೂ, ಕಾಯಫನೂ, ಯೋಹಾನನೂ, ಅಲೆಕ್ಸಾಂದ್ರನೂ, ಮಹಾಯಾಜಕನ ಸಂಬಂಧಿಕರೆಲ್ಲರೂ ಇದ್ದರು.


ಆಗ ಅನ್ನನು ಆತನನ್ನು ಇನ್ನೂ ಕಟ್ಟಿರಲಾಗಿ ಮಹಾಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.


ಆ ಬಾಲಕನು ಬೆಳೆದು ಆತ್ಮದಲ್ಲಿ ಬಲವುಳ್ಳವನಾದನು. ಮತ್ತು ಇಸ್ರಾಯೇಲ್ ಜನರಿಗೆ ತನ್ನನ್ನು ತೋರ್ಪಡಿಸಿಕೊಳ್ಳುವ ದಿನದವರೆಗೂ ಮರುಭೂಮಿಯ ಪ್ರದೇಶಗಳಲ್ಲಿ ಇದ್ದನು.


ಯೆಹೋವನು ಅಮಿತ್ತೈಯನ ಮಗನಾದ ಯೋನನಿಗೆ ಹೇಳಿದ್ದೇನೆಂದರೆ,


ಅದಕ್ಕೆ ಯೋಹಾನನು, “ಪ್ರವಾದಿಯಾದ ಯೆಶಾಯನು ಹೇಳಿದಂತೆ, ‘ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಧ್ವನಿಯೇ ನಾನು’” ಎಂದು ಉತ್ತರ ಕೊಟ್ಟನು.


ಆ ಕಾಲದಲ್ಲಿ ಮುಖ್ಯಯಾಜಕರೂ, ಜನರ ಹಿರಿಯರೂ ಕಾಯಫನೆಂಬ ಮಹಾಯಾಜಕನ ಭವನದಲ್ಲಿ ಕೂಡಿಬಂದು


ಇಗೋ ಒಂದು ವಾಣಿ! “ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ, ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಿಪಡಿಸಿರಿ”


ಅವರು ಹೊರಟು ಹೋಗುತ್ತಿರಲು ಯೇಸು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, “ನೀವು ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?


ಆಮೋನನ ಮಗನೂ, ಯೆಹೂದದ ಅರಸನಾದ ಯೋಷೀಯನ ಕಾಲದಲ್ಲಿ ಕೂಷಿಯನ ಮಗನೂ, ಗೆದಲ್ಯನ ಮೊಮ್ಮಗನೂ, ಹಿಜ್ಕೀಯನಿಗೆ ಹುಟ್ಟಿದ ಅಮರ್ಯನ ಮರಿಮಗನೂ ಆದ ಚೆಫನ್ಯನಿಗೆ ಯೆಹೋವನು ದಯಪಾಲಿಸಿದ ವಾಕ್ಯ.


ಯೆಹೂದದ ಅರಸನಾದ ಯೋಥಾಮ, ಆಹಾಜ ಮತ್ತು ಹಿಜ್ಕೀಯ ಇವರ ಕಾಲದಲ್ಲಿ ಸಮಾರ್ಯದ ಮತ್ತು ಯೆರೂಸಲೇಮಿನ ವಿಷಯವಾಗಿ ಮೋರೆಷೆತ್ ಊರಿನವನಾದ ಮೀಕನಿಗೆ ಕೇಳಿ ಬಂದ ಯೆಹೋವನ ವಾಕ್ಯ.


ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


ಯೆಹೂದದ ಅರಸನೂ, ಆಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವನಿಂದ ಈ ವಾಕ್ಯವನ್ನು ಹೊಂದಿದನು.


ಯೆಹೋವನ ವಾಕ್ಯವು ಕಸ್ದೀಯ ದೇಶದೊಳಗೆ ಕೆಬಾರ್ ನದಿಯ ಹತ್ತಿರ ಬೂಜಿಯ ಮಗನೂ, ಯಾಜಕನೂ ಆದ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಕೇಳಿಸಿತು; ಅಲ್ಲಿ ಯೆಹೋವನ ಹಸ್ತಸ್ಪರ್ಶದಿಂದ ಅವನು ಪರವಶನಾದನು.


ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಬರೆದಿರುವ ಪ್ರಕಾರ, “ಇಗೋ, ನಾನು ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ; ಅವನು ನಿನ್ನ ದಾರಿಯನ್ನು ಸಿದ್ಧಮಾಡುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು