Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈಗಾಗಲೇ ಮರದ ಬುಡಕ್ಕೆ ಕೊಡಲಿ ಬಿದ್ದಿದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮರಗಳನ್ನು ಕಡಿಯುವುದಕ್ಕೆ ಕೊಡಲಿಯು ಸಿದ್ಧವಾಗಿದೆ. ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನು ಕತ್ತರಿಸಿ ಬೆಂಕಿಯಲ್ಲಿ ಹಾಕಲಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಮರಗಳ ಬೇರಿಗೆ ಈಗಾಗಲೇ ಕೊಡಲಿ ಬಿದ್ದಿದೆ, ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕಲಾಗುವುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಝಾಡಾ ಮುಳಾತ್ನಾಚ್ ತೊಡುಕ್ ಮನುನ್ ಕುರಾಡ್ ತಯಾರ್ ಕರುನ್ ಥವ್ನ್ ಹೊಲ್ಲಿ ಹಾಯ್,ಬರಿ ಫಳಾ ದಿ ನಸಲ್ಲಿ ಸಗ್ಳಿ ಝಾಡಾ ತೊಡುನ್ ಆಗಿತ್ ಟಾಕುನ್ ಹೊತ್ಯಾತ್, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:9
14 ತಿಳಿವುಗಳ ಹೋಲಿಕೆ  

ಒಳ್ಳೆಯ ಫಲವನ್ನು ಕೊಡದ ಎಲ್ಲಾ ಮರಗಳನ್ನು ಕಡಿದು ಬೆಂಕಿಯಲ್ಲಿ ಹಾಕುತ್ತಾರೆ.


ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ.


ಮುಂದೆ ಅದರಲ್ಲಿ ಹಣ್ಣು ಬಿಟ್ಟರೆ ಸರಿ, ಇಲ್ಲದಿದ್ದರೆ ಇದನ್ನು ಕಡಿದುಹಾಕಬಹುದು’” ಎಂದು ಉತ್ತರ ಕೊಟ್ಟನು.


ಬಳಿಕ ಅವನು ತೋಟಗಾರನಿಗೆ, ‘ನೋಡು, ನಾನು ಮೂರು ವರ್ಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು. ಇದರಿಂದ ಭೂಮಿಯು ಯಾಕೆ ವ್ಯರ್ಥವಾಗಬೇಕು’ ಎಂದು ಹೇಳಿದನು.


ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಆದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.


ಏಕೆಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.


“ಕಾವಲುಗಾರನಾದ ದೇವದೂತನು ಆಕಾಶದಿಂದಿಳಿದು, ‘ವೃಕ್ಷವನ್ನು ಕಡಿದು ಹಾಳುಮಾಡಿರಿ; ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ, ತಾಮ್ರಗಳ ಪಟ್ಟೆಯನ್ನು ಅದಕ್ಕೆ ಬಿಗಿಯಿರಿ, ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಅದಕ್ಕೆ ಏಳು ವರ್ಷ ಕಳೆಯುವ ತನಕ ಕಾಡು ಮೃಗಗಳ ಸಹವಾಸದ ಗತಿಯು ಬರಲಿ’ ಎಂದು ಸಾರುವುದನ್ನು ರಾಜನಾದ ನೀನು ನೋಡಿದಿಯಲ್ಲಾ.


ವೃಕ್ಷವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿರಿ, ಎಲೆಗಳನ್ನು ಉದುರಿಸಿರಿ, ಹಣ್ಣುಗಳನ್ನು ಚೆಲ್ಲಿರಿ; ಮೃಗಗಳು ನೆರಳನ್ನು ಬಿಟ್ಟುಬಿಡಲಿ, ಪಕ್ಷಿಗಳು ರೆಂಬೆಗಳನ್ನು ತೊರೆದು ಹೋಗಲಿ!


“ಇಂಥಾ ವೈಭವದಿಂದಲೂ, ಮಹಿಮೆಯಿಂದಲೂ ಕೂಡಿದ ನೀನು ಏದೆನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆಯಾಗಿರುವೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ತಳ್ಳಲ್ಪಟ್ಟು, ಸುನ್ನತಿಹೀನರ ನಡುವೆ ಖಡ್ಗದಿಂದ ಹತರಾದವರ ಸಂಗಡ ಮಲಗುವಿ. ಫರೋಹನೂ, ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು ಎಂಬುದು ಕರ್ತನಾದ ಯೆಹೋವನ ನುಡಿ.”


ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ.


ಆ ಮೇಲೆ ಯೇಸು ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಒಬ್ಬನು ತನ್ನ ದ್ರಾಕ್ಷಿಯ ತೋಟದಲ್ಲಿ ಒಂದು ಅಂಜೂರದ ಗಿಡವನ್ನು ನೆಡಿಸಿದನು. ಸ್ವಲ್ಪಕಾಲದ ನಂತರ ಅವನು ಆ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದನು. ಸಿಕ್ಕಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು