Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹೀಗಿರಲಾಗಿ ಆತನು ತಾನು ಬೆಳೆದುಬಂದ ಊರಾದ ನಜರೇತಿಗೆ ಬಂದು, ತನ್ನ ವಾಡಿಕೆಯ ಪ್ರಕಾರ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಗೆ ಹೋಗಿ ಪವಿತ್ರಗ್ರಂಥವನ್ನು ಓದುವುದಕ್ಕಾಗಿ ಎದ್ದು ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಯೇಸುಸ್ವಾಮಿ ತಾವು ಬೆಳೆದ ಊರಾದ ನಜರೇತಿಗೆ ಬಂದರು. ವಾಡಿಕೆಯ ಪ್ರಕಾರ ಸಬ್ಬತ್‍ದಿನ ಪ್ರಾರ್ಥನಾಮಂದಿರಕ್ಕೆ ಹೋದರು. ಅಲ್ಲಿ ಪವಿತ್ರಗ್ರಂಥವನ್ನು ಓದುವುದಕ್ಕೆ ಅವರು ಎದ್ದುನಿಂತಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಹೀಗಿರಲಾಗಿ ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ವಾಡಿಕೆಯ ಪ್ರಕಾರ ಸಬ್ಬತ್‍ದಿನದಲ್ಲಿ ಸಭಾಮಂದಿರಕ್ಕೆ ಹೋಗಿ ಓದುವದಕ್ಕಾಗಿ ಎದ್ದು ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೇಸು ತಾನು ಬೆಳೆದ ನಜರೇತ್ ಎಂಬ ಊರಿಗೆ ಪ್ರಯಾಣ ಮಾಡಿದನು. ವಾಡಿಕೆಯ ಪ್ರಕಾರ, ಆತನು ಸಬ್ಬತ್‌ದಿನದಲ್ಲಿ ಸಭಾಮಂದಿರಕ್ಕೆ ಹೋದನು. ಯೇಸು ಓದುವುದಕ್ಕಾಗಿ ಎದ್ದುನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೇಸು ತಾವು ಬೆಳೆದ ನಜರೇತಿಗೆ ಬಂದು, ತಮ್ಮ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಕ್ಕೆ ಹೋಗಿ ಪವಿತ್ರ ವೇದದ ಸುರುಳಿಯನ್ನು ಓದುವುದಕ್ಕಾಗಿ ಎದ್ದು ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಮಾನಾ ಜೆಜು ಅಪ್ನಿ ಬಾರಿಕ್-ಹೊತ್ತೊ ಮೊಟೊ ಹೊಲ್ಲೆ ಗಾಂವ್ , ನಜರೆತಾಕ್ ಗೆಲೊ, ಅನಿ ಸದ್ದಿಚ್ಯಾ ಬಾಸೆನ್ ಸಿನಾಗೊಗಾತ್ ಗೆಲೊ ಅನಿ ವಾಚ್ವುಕ್ ಇಬೆ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:16
14 ತಿಳಿವುಗಳ ಹೋಲಿಕೆ  

ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ದೇವರ ವಾಕ್ಯದಿಂದ ಅವರ ಸಂಗಡ ವಾದಿಸಿ,


ಅಲ್ಲಿರುವ ನಜರೇತೆಂಬ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನು ನಜರೇತಿನವನೆಂದು ಕರೆಯಲ್ಪಡುವನು” ಎಂಬುದಾಗಿ ಪ್ರವಾದಿಗಳು ಹೇಳಿರುವ ಮಾತು ನೆರವೇರಿತು.


ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿಯು ಈ ಸಂಗತಿಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಇಟ್ಟುಕೊಂಡಳು.


ಆತನು ಹನ್ನೆರಡು ವರ್ಷದವನಾದಾಗ ಅವರು ಪದ್ಧತಿಯ ಪ್ರಕಾರ ಅಲ್ಲಿಗೆ ಹೋದರು.


ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿ ಬರುವ ಸಭಾಮಂದಿರಗಳಲ್ಲಿಯೂ, ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸಿದ್ದೇನೆ, ಗುಪ್ತವಾಗಿ ಯಾವುದನ್ನೂ ನಾನು ಮಾತನಾಡಲಿಲ್ಲ.


ಆತನು ಅವರಿಗೆ, “ಈ ಹೊತ್ತು ನೀವು ನನ್ನ ಮಾತನ್ನು ಕೇಳುವಲ್ಲಿ ಈ ವೇದೋಕ್ತಿ ನೆರವೇರಿದೆ” ಎಂದು ಹೇಳುತ್ತಿರುವಾಗ,


ಇತ್ತಲಾಗಿ ಅವರು ಧರ್ಮಶಾಸ್ತ್ರದಲ್ಲಿ ಹೇಳಿರುವ ಕಾರ್ಯಗಳನ್ನೆಲ್ಲಾ ನೆರವೇರಿಸಿದ ಮೇಲೆ ಗಲಿಲಾಯಕ್ಕೆ ಸೇರಿದ ನಜರೇತೆಂಬ ತಮ್ಮ ಊರಿಗೆ ಹಿಂತಿರುಗಿ ಹೋದರು.


ಆತನು ಅವರ ಸಭಾಮಂದಿರಗಳಲ್ಲಿ ಬೋಧಿಸುತ್ತಿದ್ದನು; ಎಲ್ಲರೂ ಆತನನ್ನು ಹೊಗಳಿದರು.


ಆಗ ಯೆಶಾಯನೆಂಬ ಪ್ರವಾದಿಯು ಬರೆದ ಗ್ರಂಥದ ಸುರುಳಿಯನ್ನು ಆತನ ಕೈಗೆ ಕೊಡಲಾಗಿ ಆತನು ಆ ಸುರುಳಿಯನ್ನು ಬಿಚ್ಚಿದಾಗ ಬರೆದಿರುವ ಈ ಭಾಗವನ್ನು ಕಂಡು ಓದಿದನು; ಅಲ್ಲಿ ಹೀಗೆ ಬರೆದಿತ್ತು,


ಅದಕ್ಕೆ ಯೇಸು ಅವರಿಗೆ, “‘ವೈದ್ಯನೇ, ನಿನ್ನನ್ನು ನೀನೇ ವಾಸಿಮಾಡಿಕೋ’ ಎಂಬ ಗಾದೆಯನ್ನು ನನಗೆ ನಿಸ್ಸಂದೇಹವಾಗಿ ಹೇಳಿ; ಕಪೆರ್ನೌಮಿನಲ್ಲಿ ನೀನು ಮಾಡಿದ ಕಾರ್ಯಗಳನ್ನು ನಾವು ಕೇಳಿದ್ದೇವೆ, ಅಂಥವುಗಳನ್ನು ಈ ನಿನ್ನ ಸ್ವಂತ ಸ್ಥಳದಲ್ಲಿಯೂ ಮಾಡು ಎಂದು ಹೇಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು