Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದಕ್ಕೆ ಯೇಸು ಅವರಿಗೆ, “‘ವೈದ್ಯನೇ, ನಿನ್ನನ್ನು ನೀನೇ ವಾಸಿಮಾಡಿಕೋ’ ಎಂಬ ಗಾದೆಯನ್ನು ನನಗೆ ನಿಸ್ಸಂದೇಹವಾಗಿ ಹೇಳಿ; ಕಪೆರ್ನೌಮಿನಲ್ಲಿ ನೀನು ಮಾಡಿದ ಕಾರ್ಯಗಳನ್ನು ನಾವು ಕೇಳಿದ್ದೇವೆ, ಅಂಥವುಗಳನ್ನು ಈ ನಿನ್ನ ಸ್ವಂತ ಸ್ಥಳದಲ್ಲಿಯೂ ಮಾಡು ಎಂದು ಹೇಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅನಂತರ ಯೇಸು ಅವರಿಗೆ, “ ‘ವೈದ್ಯನೇ, ಮೊದಲು ನಿನ್ನನ್ನು ನೀನು ಗುಣಪಡಿಸಿಕೊ’, ಎಂಬ ಗಾದೆಯನ್ನು ನೀವು ನಿಸ್ಸಂದೇಹವಾಗಿ ನನಗೆ ಅನ್ವಯಿಸುವಿರಿ; ಅಲ್ಲದೆ, ‘ಕಫೆರ್ನವುಮಿನಲ್ಲಿ ನೀನು ಎಂಥೆಂಥ ಮಹತ್ಕಾರ್ಯಗಳನ್ನು ಮಾಡಿದೆ ಎಂದು ನಾವು ಕೇಳಿದ್ದೇವೆ; ಅಂಥವುಗಳನ್ನು ಈ ನಿನ್ನ ಸ್ವಂತ ಊರಿನಲ್ಲೂ ಮಾಡು,’ ಎಂದೂ ಹೇಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆತನು ಅವರಿಗೆ - ನೀವಂತೂ ವೈದ್ಯನೇ, ನಿನ್ನನ್ನೇ ವಾಸಿಮಾಡಿಕೋ ಎಂಬ ಗಾದೆಯನ್ನು ನನಗೆ ಹೇಳಿ ಕಪೆರ್ನೌವಿುನಲ್ಲಿ ಎಂಥೆಂಥ ಕಾರ್ಯಗಳು ನಡೆದವೆಂದು ನಾವು ಕೇಳಿದೆವೋ ಅಂಥವುಗಳನ್ನು ಈ ನಿನ್ನ ಸ್ವಂತ ಸ್ಥಳದಲ್ಲಿ ಮಾಡು ಅನ್ನುವಿರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೇಸು ಅವರಿಗೆ, “ನೀವಂತೂ ‘ವೈದ್ಯನೇ, ನಿನ್ನನ್ನೇ ವಾಸಿಮಾಡಿಕೊ’ ಎಂಬ ಗಾದೆಯನ್ನು ನನಗೆ ಹೇಳುತ್ತೀರಿ ಎಂಬುದು ನನಗೆ ಗೊತ್ತು. ‘ನೀನು ಕಪೆರ್ನೌಮಿನಲ್ಲಿ ಮಾಡಿದ ಕೆಲವು ಕಾರ್ಯಗಳ ಬಗ್ಗೆ ನಾವು ಕೇಳಿದ್ದೇವೆ. ಅದೇ ಕಾರ್ಯಗಳನ್ನು ನಿನ್ನ ಸ್ವಂತ ಊರಿನಲ್ಲಿ ಮಾಡು!’” ಎಂದು ಹೇಳಬೇಕೆಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೇಸು ಅವರಿಗೆ, “ ‘ವೈದ್ಯನೇ, ನಿನ್ನನ್ನು ನೀನೇ ವಾಸಿಮಾಡಿಕೋ!’ ಎಂಬ ಗಾದೆಯನ್ನು ನೀವು ನಿಸ್ಸಂದೇಹವಾಗಿ ನನಗೆ ಹೇಳಿ, ‘ಕಪೆರ್ನೌಮಿನಲ್ಲಿ ಎಂತೆಂಥ ಕಾರ್ಯಗಳು ನಡೆಯಿತೆಂದು ನಾವು ಕೇಳಿದೆವು. ಅದನ್ನು ಇಲ್ಲಿ ನಿನ್ನ ಸ್ವಂತ ಊರಿನಲ್ಲಿಯೂ ಮಾಡು’ ಎಂದು ನನಗೆ ಹೇಳುವಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತನ್ನಾ ತೆನಿ ತೆಂಕಾ “ವಗ್ದುಳ್ಯಾ, ಅದ್ದಿ ತುಕಾಚ್ ತಿಯಾ, ಆರಾಮ್ ಕರುನ್ಗೆ ” ಮನ್ತಲೆ ಶಾಸ್ತರ್ ಮಾಕಾ ತುಮಿ ಸಾಂಗ್ತ್ಯಾಶಿ, ಮನುನ್ ಮಾಕಾ ಗೊತ್ತ್ ಹೊತ್ತೆ; ಅನಿ ಕಪರ್‍ನವ್ ಮನ್ತಲ್ಯಾ ಗಾಂವಾತ್ ಕರಲ್ಲಿ ಕಾಮ್ ಹಿತ್ತೆ, ತುಜ್ಯಾ ಸ್ವಂತ್ ಗಾಂವಾತ್‍ಬಿ ಕರುನ್ ದಾಕ್ವು, ಮನುನ್ ತುಮಿ ಮಾಕಾ ಸಾಂಗ್ತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:23
20 ತಿಳಿವುಗಳ ಹೋಲಿಕೆ  

ಯೇಸು ಅಲ್ಲಿಂದ ಹೊರಟು ತನ್ನ ಊರಿಗೆ ಬಂದನು; ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.


ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್‌ ಮತ್ತು ನಫ್ತಾಲಿಯರ ಗಡಿ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ವಾಸಿಸತೊಡಗಿದನು.


ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ.


ಆಗ ಆ ಸ್ತ್ರೀ ತನ್ನ ನೀರಿನ ಕೊಡವನ್ನು ಅಲ್ಲೇ ಬಿಟ್ಟು ಊರೊಳಕ್ಕೆ ಹೋಗಿ ಜನರಿಗೆ,


ಇಲ್ಲವೆ ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ, ‘ಅಣ್ಣಾ, ನಿನ್ನ ಕಣ್ಣಿನೊಳಗಿನ ಅಣುವನ್ನು ತೆಗೆಯುತ್ತೇನೆ ಬಾ’ ಎಂದು ಹೇಳುವುದಕ್ಕೆ ಹೇಗಾದೀತು? ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿಕೋ, ಆ ಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ಅಣುವನ್ನು ತೆಗೆಯುವುದಕ್ಕೆ ಚೆನ್ನಾಗಿ ಕಾಣಿಸುವುದು.


ಹೀಗಿರಲಾಗಿ ಆತನು ತಾನು ಬೆಳೆದುಬಂದ ಊರಾದ ನಜರೇತಿಗೆ ಬಂದು, ತನ್ನ ವಾಡಿಕೆಯ ಪ್ರಕಾರ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಗೆ ಹೋಗಿ ಪವಿತ್ರಗ್ರಂಥವನ್ನು ಓದುವುದಕ್ಕಾಗಿ ಎದ್ದು ನಿಂತನು.


ತರುವಾಯ ಆತನು ತನ್ನ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಜನರಿಗೆ ಉಪದೇಶಮಾಡುತ್ತಿದ್ದನು. ಅವರು ಅದನ್ನು ಕೇಳಿ ಆಶ್ಚರ್ಯ ಪಟ್ಟು, “ಇವನಿಗೆ ಈ ಜ್ಞಾನವೂ ಈ ಮಹತ್ಕಾರ್ಯಗಳೂ ಎಲ್ಲಿಂದ ಬಂದಿದ್ದಾವು?


ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ಇತ್ತಲಾಗಿ ಅವರು ಧರ್ಮಶಾಸ್ತ್ರದಲ್ಲಿ ಹೇಳಿರುವ ಕಾರ್ಯಗಳನ್ನೆಲ್ಲಾ ನೆರವೇರಿಸಿದ ಮೇಲೆ ಗಲಿಲಾಯಕ್ಕೆ ಸೇರಿದ ನಜರೇತೆಂಬ ತಮ್ಮ ಊರಿಗೆ ಹಿಂತಿರುಗಿ ಹೋದರು.


ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿಯು ಈ ಸಂಗತಿಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಇಟ್ಟುಕೊಂಡಳು.


ಬಳಿಕ ಆತನು ಘಟ್ಟಾ ಇಳಿದು ಗಲಿಲಾಯಕ್ಕೆ ಸೇರಿದ ಕಪೆರ್ನೌಮೆಂಬ ಊರಿಗೆ ಬಂದನು. ಅಲ್ಲಿ ಸಬ್ಬತ್ ದಿನದಲ್ಲಿ ಅವರಿಗೆ ಉಪದೇಶಮಾಡುತ್ತಿರಲು,


ಯೇಸು ದೆವ್ವವನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ಹೋಗು” ಎನ್ನಲಾಗಿ ಆ ದೆವ್ವವು ಅವನನ್ನು ಎಲ್ಲರ ನಡುವೆ ಬೀಳಿಸಿ ಅವನಿಗೆ ಯಾವ ಕೇಡನ್ನೂ ಮಾಡದೆ ಬಿಟ್ಟುಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು