ಲೂಕ 4:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಯೇಸು ದೆವ್ವವನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ಹೋಗು” ಎನ್ನಲಾಗಿ ಆ ದೆವ್ವವು ಅವನನ್ನು ಎಲ್ಲರ ನಡುವೆ ಬೀಳಿಸಿ ಅವನಿಗೆ ಯಾವ ಕೇಡನ್ನೂ ಮಾಡದೆ ಬಿಟ್ಟುಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಆದರೆ ಯೇಸು ಅವನನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ತೊಲಗು,” ಎಂದು ದೆವ್ವಕ್ಕೆ ಆಜ್ಞಾಪಿಸಿದರು. ಆ ದೆವ್ವ ಎಲ್ಲರ ಎದುರಿಗೇ ಅವನನ್ನು ಕೆಡವಿ, ಯಾವ ಕೆಡುಕನ್ನೂ ಮಾಡದೆ ಅವನನ್ನು ಬಿಟ್ಟು ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಯೇಸು ಅದನ್ನು ಗದರಿಸಿ - ಸುಮ್ಮನಿರು, ಇವನನ್ನು ಬಿಟ್ಟುಹೋಗು ಎನ್ನಲಾಗಿ ಆ ದೆವ್ವವು ಅವನನ್ನು ನಡುವೆ ಕೆಡವಿ ಅವನಿಗೆ ಯಾವ ಕೇಡನ್ನೂ ಮಾಡದೆ ಬಿಟ್ಟುಹೋಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಆದರೆ ಯೇಸು ಆ ದೆವ್ವಕ್ಕೆ, “ಸುಮ್ಮನಿರು! ಇವನನ್ನು ಬಿಟ್ಟು ಹೊರಗೆ ಬಾ!” ಎಂದು ಆಜ್ಞಾಪಿಸಿದನು. ದೆವ್ವವು ಅವನನ್ನು ಜನರೆಲ್ಲರ ಎದುರಿನಲ್ಲಿಯೇ ಕೆಡವಿ ಯಾವ ಕೇಡೂ ಮಾಡದೆ ಬಿಟ್ಟು ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆಗ ಯೇಸು ಅವನನ್ನು ಗದರಿಸಿ, “ಸುಮ್ಮನಿರು, ಅವನೊಳಗಿಂದ ಹೊರಗೆ ಬಾ,” ಎಂದರು. ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ, ಬಾಧಿಸದೆ ಅವನೊಳಗಿಂದ ಹೊರಗೆ ಬಂತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ತನ್ನಾ ಜೆಜುನ್ “ಗಪ್-ರ್‍ಹಾಮ್ ಅನಿ ತ್ಯಾ ಮಾನ್ಸಾತ್ನಾ ಭಾಯ್ರ್ ಯೆ” ಮನುನ್ ತಾಕಿತ್ ದಿಲ್ಯಾನ್. ತನ್ನಾ ಗಿರ್‍ಯಾನ್ ತ್ಯಾ ಮಾನ್ಸಾಕ್ ತೆಂಚ್ಯಾ ಇದ್ರಾಕ್ ಪಾಡ್ವುಲ್ಯಾನ್ ಅನಿ ತೆಕಾ ಕಾಯ್ಬಿ ವಾಯ್ಟ್ ಕರಿನಸ್ತಾನಾ ತೊ ತೆಚ್ಯಾ ಭುತ್ತುರ್‍ನಾ ಬಾಯ್ರ್ ಗೆಲೊ. ಅಧ್ಯಾಯವನ್ನು ನೋಡಿ |