Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಒಮ್ಮೆ ಯೇಸು ಗೆನೆಜರೇತ್ ಸರೋವರದ ದಡದಲ್ಲಿ ನಿಂತಿದ್ದಾಗ ಜನರು ಗುಂಪಾಗಿ ಬಂದು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಆತನನ್ನು ಸುತ್ತುವರೆದು ನೂಕಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಒಮ್ಮೆ ಯೇಸುಸ್ವಾಮಿ ಗೆನೆಸರೇತ್ ಎಂಬ ಸರೋವರದ ತೀರದಲ್ಲಿ ನಿಂತಿದ್ದಾಗ, ಜನಸಮೂಹವು ದೇವರ ವಾಕ್ಯವನ್ನು ಕೇಳಲು ನೂಕುನುಗ್ಗಲಾಗಿ ಬಂದು ಅವರನ್ನು ಒತ್ತರಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಒಂದಾನೊಂದು ದಿವಸ ಜನರು ಒತ್ತಾಗಿ ಬಂದು ಆತನ ಮೇಲೆ ಬಿದ್ದುಕೊಂಡು ದೇವರ ವಾಕ್ಯವನ್ನು ಕೇಳುತ್ತಿರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ಗೆನೆಸರೇತ್ (ಗಲಿಲಾಯ) ಸರೋವರದ ಬಳಿ ನಿಂತುಕೊಂಡಿದ್ದಾಗ, ದೇವರ ವಾಕ್ಯವನ್ನು ಕೇಳಲು ಅನೇಕ ಜನರು ನೂಕಾಡುತ್ತಾ ಆತನ ಸುತ್ತಲೂ ಸೇರಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಒಂದು ದಿನ ಯೇಸು ಗೆನೆಜರೇತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ, ಜನರು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಅವರ ಸುತ್ತಲೂ ಗುಂಪಾಗಿ ಕೂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಎಕ್ ದಿಸ್ ಜೆಜು ಗೆನಜರೆತ್ ಮನ್ತಲ್ಯಾ ಸಮುಂದರಾಚ್ಯಾ ದಂಡೆಕ್ ಇಬೆ ಹೊತ್ತೊ. ದೆವಾಚಿ ಗೊಸ್ಟಿಯಾ ಆಯ್ಕುಕ್ ಲೊಕಾ ಢಕ್ಲಾ-ಢಕ್ಲಿ ಕರುನ್ ಘೆಯ್ತ್ ಗೊಳಾ ಹೊಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:1
21 ತಿಳಿವುಗಳ ಹೋಲಿಕೆ  

ಜನರ ಗುಂಪು ಅಧಿಕವಾಗಿದ್ದುದರಿಂದ ಅವರು ತನ್ನ ಮೈಮೇಲೆ ಬಿದ್ದು ನೂಕದಂತೆ ಯೇಸು ತನಗೆ ಒಂದು ದೋಣಿಯನ್ನು ಸಿದ್ಧಮಾಡಲು ಶಿಷ್ಯರಿಗೆ ಹೇಳಿದನು.


ಅವರು ಸಮುದ್ರವನ್ನು ದಾಟಿ ಗೆನೆಜರೇತ್ ಪಟ್ಟಣದ ದಡಕ್ಕೆ ಬಂದರು.


ಅವರು ಸಮುದ್ರವನ್ನು ದಾಟಿ ಗೆನೆಜರೇತ್ ಪ್ರದೇಶದ ದಡಕ್ಕೆ ಮುಟ್ಟಿ ದೋಣಿಯನ್ನು ಕಟ್ಟಿದರು.


ಸ್ನಾನಿಕ ಯೋಹಾನನ ಕಾಲದಿಂದ ಈ ವರೆಗೂ ಪರಲೋಕ ರಾಜ್ಯವು ಬಲವಂತಕ್ಕೆ ಗುರಿಯಾಗುತ್ತಿದೆ. ಬಲಾತ್ಕಾರಿಗಳು ಒತ್ತಾಯದಿಂದ ಅದನ್ನು ಸ್ವಾಧೀನಮಾಡಿಕೊಳ್ಳುತ್ತಿದ್ದಾರೆ.


ಹಾಗೂ ಯೊರ್ದನ್ ನದಿಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣಸಮುದ್ರವೆನಿಸಿಕೊಳ್ಳುವ ಅರಾಬ್ ಸಮುದ್ರದ ಹತ್ತಿರವಿರುವ ಬೇತಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ಕಣಿವೆ ಪ್ರದೇಶವು ಇವೇ ಅವನ ರಾಜ್ಯ:


ಅದಲ್ಲದೆ ಆರಾಬಾ ಎಂಬ ತಗ್ಗನ್ನೂ ಅವರಿಗೆ ಕೊಟ್ಟೆನು; ಅದರಲ್ಲಿ ಕಿನ್ನೆರೆತ್ ಸಮುದ್ರದಿಂದ ಪಿಸ್ಗಾ ಬೆಟ್ಟದ ಪಶ್ಚಿಮದಲ್ಲಿರುವ ಅರಾಬದ ಸಮುದ್ರವೆನಿಸಿಕೊಳ್ಳುವ ಲವಣಸಮುದ್ರದ ವರೆಗೆ ಯೊರ್ದನ್ ನದಿಯು ಅವರ (ಪಶ್ಚಿಮದ ವರೆಗೆ) ಮೇರೆ.


ಶೆಫಾಮಿನಿಂದ ಅಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಬರಬೇಕು. ತರುವಾಯ ಅದು ಗಟ್ಟಾ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವದಲ್ಲಿರುವ ಬೆಟ್ಟಗಳಿಗೆ ಹೋಗಬೇಕು.


ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ.


ಯೇಸುವು ಅವನ ಸಂಗಡ ಹೋದನು; ಮತ್ತು ಬಹು ಜನರು ಆತನನ್ನು ನೂಕುತ್ತಾ ಹಿಂಬಾಲಿಸಿದರು.


ಆಗ ಯೇಸುವು, “ನನ್ನನ್ನು ಮುಟ್ಟಿದವರಾರು?” ಎಂದು ಕೇಳಲು ಎಲ್ಲರೂ, ನಾನಲ್ಲ, ನಾನಲ್ಲ ಅನ್ನಲು ಪೇತ್ರನು, “ಗುರುವೇ, ಎಷ್ಟೋ ಜನರು ನಿನ್ನನ್ನು ಮೈಮೇಲೆ ಬೀಳುತ್ತಾ ನೂಕುತ್ತಿದ್ದಾರಲ್ಲಾ” ಅಂದನು.


ಯೊರ್ದನ್ ಕಣಿವೆಯಲ್ಲಿರುವ ಬೇತ್‌ಹಾರಾಮ್; ಬೇತ್‌ನಿಮ್ರಾ, ಸುಕ್ಕೋತ್, ಚಾಫೋನ ಎಂಬ ಪಟ್ಟಣಗಳು. ಕಿನ್ನೆರೆತ್ ಸಮುದ್ರದ ದಕ್ಷಿಣದಿಕ್ಕಿನ ಮೂಲೆಯ ವರೆಗೆ ವಿಸ್ತರಿಸಿಕೊಂಡಿರುವ ಯೊರ್ದನಿನ ಪೂರ್ವ ಪ್ರದೇಶಗಳು.


ಯೇಸುವು ಪುನಃ ಸಮುದ್ರದ ದಡದಲ್ಲಿ ಉಪದೇಶ ಮಾಡತೊಡಗಿದ್ದನು. ಬಹುಜನರು ಆತನ ಬಳಿಗೆ ಸೇರಿಬಂದಿದ್ದರಿಂದ ಆತನು ಸಮುದ್ರದಲ್ಲಿದ್ದ ದೋಣಿಹತ್ತಿ ಕುಳಿತುಕೊಂಡನು; ಆ ಜನರೆಲ್ಲರು ಸಮುದ್ರದ ದಡದಲ್ಲಿ ಸುತ್ತಲೂ ನೆರೆದುಬಂದಿದ್ದರು.


ಯೇಸು ಆ ಸರೋವರದ ದಡದಲ್ಲಿದ್ದ ಎರಡು ದೋಣಿಗಳನ್ನು ಕಂಡನು. ಬೆಸ್ತರು ಅವುಗಳೊಳಗಿಂದ ಹೊರಗೆ ಬಂದು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.


ಒಂದು ದಿನ ಯೇಸು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ, “ಸಮುದ್ರದ ಆಚೇ ದಡಕ್ಕೆ ಹೋಗೋಣ” ಎಂದು ಹೇಳಲು, ಅವರು ದೋಣಿಯನ್ನು ಸಾಗಿಸಿ ಹೊರಟರು.


ಅವರು ಹೋಗುತ್ತಿರುವಾಗ ಆತನಿಗೆ ನಿದ್ರೆ ಹತ್ತಿತು, ಅಷ್ಟರಲ್ಲಿ ಬಿರುಗಾಳಿ ಸಮುದ್ರದಲ್ಲಿ ಬೀಸಿ ದೋಣಿಯೊಳಗೆ ನೀರು ತುಂಬಿಕೊಂಡದ್ದರಿಂದ ಅವರೆಲ್ಲರು ಅಪಾಯಕ್ಕೆ ಗುರಿಯಾದರು.


ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು. ಆ ಹಂದಿಗಳು ಉಗ್ರವಾಗಿ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಕಟ್ಟಿ ಸತ್ತು ಹೋದವು.


ಯೋಹಾನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ ಆ ಇಬ್ಬರಲ್ಲಿ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಒಬ್ಬನು.


ತರುವಾಯ ಯೇಸು ಗಲಿಲಾಯದ ಸಮುದ್ರವನ್ನು ದಾಟಿ, ಆಚೆ ದಡಕ್ಕೆ ಹೋದನು. ಅದಕ್ಕೆ ತಿಬೇರಿಯ ಸಮುದ್ರವೆಂತಲೂ ಹೇಳುತ್ತಾರೆ.


ನಿಮಗೆ ದೇವರ ವಾಕ್ಯವನ್ನು ಬೋಧಿಸಿದ ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು ಅವರ ನಂಬಿಕೆಯನ್ನು ಅನುಸರಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು