Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು ಕೈನೀಡಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು, ಶುದ್ಧನಾಗು” ಅಂದನು. ಕೂಡಲೆ ಅವನ ಕುಷ್ಠವು ವಾಸಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯೇಸು ಕೈಚಾಚಿ ಅವನನ್ನು ಮುಟ್ಟಿ, “ಖಂಡಿತವಾಗಿಯೂ ನನಗೆ ಮನಸ್ಸಿದೆ; ನಿನಗೆ ಗುಣವಾಗಲಿ,” ಎಂದರು. ತಕ್ಷಣವೇ ಕುಷ್ಠವು ಮಾಯವಾಗಿ ಅವನು ಗುಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆತನು ಕೈನೀಡಿ ಅವನನ್ನು ಮುಟ್ಟಿ - ನನಗೆ ಮನಸ್ಸುಂಟು; ಶುದ್ಧನಾಗು ಅಂದನು. ಕೂಡಲೆ ಅವನ ಕುಷ್ಠವು ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೇಸು, “ನಿನ್ನನ್ನು ಗುಣಪಡಿಸಲು ನನಗೆ ಮನಸ್ಸುಂಟು. ನಿನಗೆ ಗುಣವಾಗಲಿ!” ಎಂದು ಹೇಳಿ ಅವನನ್ನು ಮುಟ್ಟಿದನು. ಕೂಡಲೆ ಅವನಿಗೆ ಗುಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೇಸು ತಮ್ಮ ಕೈಚಾಚಿ ಅವನನ್ನು ಮುಟ್ಟಿ ಅವನಿಗೆ, “ನನಗೆ ಮನಸ್ಸಿದೆ, ನೀನು ಶುದ್ಧನಾಗು!” ಎಂದು ಹೇಳಿದರು. ಕೂಡಲೇ ಆ ಕುಷ್ಠವು ಅವನನ್ನು ಬಿಟ್ಟುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಜೆಜುನ್ ಅಪ್ನಾಚೊ ಹಾತ್ ಫಿಡೆ ಕರುನ್ ತೆಕಾ ಅಪಡ್ಲ್ಯಾನ್, ಅನಿ “ಮಾಕಾ ಮನ್ ಹಾಯ್, ಪವಿತ್ರ್ ಹೊ”, ಮಟ್ಲ್ಯಾನ್. ತನ್ನಾ ತಾಬೊಡ್ತೊಬ್ ತೆಚೊ ರೊಗ್ ತೆಕಾ ಸೊಡುನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:13
15 ತಿಳಿವುಗಳ ಹೋಲಿಕೆ  

ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರಿಂದ ತೊಲಗಿಹೋಯಿತು.


ನಾನು ನಿಮ್ಮನ್ನು ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ರಕ್ಷಿಸಿ, ಬೆಳೆ ಬೆಳೆಯಲೆಂದು ಅಪ್ಪಣೆಕೊಟ್ಟು, ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡುವುದಿಲ್ಲ.


ಅವನು ಯೊರ್ದನ್ ನದಿಗೆ ಹೋಗಿ ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೇವರ ಮನುಷ್ಯನ ಮಾತಿಗನುಸಾರವಾಗಿ ಅವನ ದೇಹವು ಕೂಸಿನ ದೇಹದಂತೆ ಶುದ್ಧವಾಯಿತು.


ಆತನು ಆಕೆಯ ಬಳಿ ನಿಂತು ಬಾಗಿ, ಜ್ವರವನ್ನು ಬಿಟ್ಟುಹೋಗೆಂದು ಗದರಿಸಲು; ಅದು ಆಕೆಯನ್ನು ಬಿಟ್ಟುಹೋಯಿತು. ಕೂಡಲೆ ಆಕೆಯು ಎದ್ದು ಅವರೆಲ್ಲರಿಗೆ ಉಪಚಾರಮಾಡಿದಳು.


ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.


ಎಲೀಷನು ಅವನಿಗೆ, “ಹೋಗಿ ಯೊರ್ದನ್ ನದಿಯಲ್ಲಿ ಏಳು ಸಾರಿ ಮುಳುಗಿ ಬಾ, ಆಗ ನಿನ್ನ ದೇಹವು ಮೊದಲಿನಂತಾಗುವುದು; ನೀನು ಶುದ್ಧನಾಗುವಿ” ಎಂದು ಹೇಳಿ ಕಳುಹಿಸಿದನು.


ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು.


ಅನಂತರ ದೇವರು “ಬೆಳಕಾಗಲಿ” ಎಂದು ಆಜ್ಞಾಪಿಸಲು ಬೆಳಕಾಯಿತು.


ಆತನು ಕೈಚಾಚಿ ಆತನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು. ಕೂಡಲೆ ಅವನು ಕುಷ್ಠದಿಂದ ಶುದ್ಧನಾದನು.


ಆತನು ಒಂದಾನೊಂದು ಊರಿನಲ್ಲಿದ್ದಾಗ ಮೈಯೆಲ್ಲಾ ಕುಷ್ಠರೋಗ ತುಂಬಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಸಾಷ್ಟಾಂಗವೆರಗಿ, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು.


ಆಗ ಆತನು ಅವನಿಗೆ, “ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ಆಜ್ಞಾಪಿಸಿರುವ ಕಾಣಿಕೆಯನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ” ಎಂದು ಅಪ್ಪಣೆಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು