Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಜನರ ಗುಂಪು ದಟ್ಟವಾಗಿದ್ದ ಕಾರಣ ಅವನನ್ನು ಒಳಗೆ ತೆಗೆದುಕೊಂಡುಹೋಗುವ ಮಾರ್ಗವನ್ನು ಕಾಣದೆ ಮನೆಯ ಮೇಲೆ ಹತ್ತಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯ ಸಹಿತವಾಗಿ ಜನರ ನಡುವೆ ಯೇಸುವಿನ ಮುಂದೆ ಇಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆದರೆ ಜನಸಂದಣಿಯ ನಿಮಿತ್ತ ದಾರಿಮಾಡಲಾಗಲಿಲ್ಲ. ಆಗ ಅವರು ಮನೆಯ ಮೇಲೆ ಹತ್ತಿ, ಹೆಂಚುಗಳನ್ನು ತೆಗೆದು, ಅಲ್ಲಿಂದ ರೋಗಿಯನ್ನು ಹಾಸಿಗೆಯ ಸಹಿತ ಯೇಸುವಿನ ಮುಂದೆ ಇಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಜನರು ಗುಂಪಾಗಿದ್ದದರಿಂದ ಅವನನ್ನು ಒಳಗೆ ತೆಗೆದುಕೊಂಡುಹೋಗುವ ಮಾರ್ಗವನ್ನು ಕಾಣದೆ ಮನೆಯ ಮೇಲೆ ಹತ್ತಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯ ಸಹಿತ ನಡುವೆ ಯೇಸುವಿನ ಮುಂದೆ ಇಳಿಯಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದರೆ ಅಲ್ಲಿ ಬಹಳ ಜನ ಇದ್ದುದರಿಂದ ಯೇಸುವಿನ ಬಳಿಗೆ ಹೋಗಲು ಅವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಅವರು ಮನೆಯ ಮೇಲೆ ಹತ್ತಿ ಹೆಂಚುಗಳನ್ನು ತೆಗೆದು ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಹಿತ ಯೇಸುವಿನ ಮುಂದೆ ಇಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೆ ಅಲ್ಲಿದ್ದ ಜನಸಮೂಹದವರ ನಿಮಿತ್ತ ಅವರು ಅವನನ್ನು ಒಳಗೆ ತರುವ ಯಾವ ವಿಧಾನವನ್ನೂ ಕಾಣದೆ, ಮನೆಯ ಮೇಲೆ ಹೋಗಿ ಹೆಂಚುಗಳನ್ನು ತೆಗೆದು ಅವನನ್ನು ಹಾಸಿಗೆಯೊಂದಿಗೆ ಯೇಸುವಿನ ಮುಂದೆ ಇಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಲೊಕಾಂಚ್ಯಾ ಅಡ್ಚನಿತ್ ತೆಂಕಾ ಭುತ್ತುರ್ ಘೆವ್ನ್ ಜಾವ್ಕ್ ಹೊವ್ಕ್ನಾ, ತಸೆ ಮನುನ್ ತೆನಿ ತೆಕಾ ಘರಾ ವರ್‍ತಿ ಘೆವ್ನ್ ಗೆಲ್ಯಾನಿ, ಖಾಪ್ರಿಯಾ ಕಾಡುನ್ ಎಕ್ ವಾಟ್ ಕರ್‍ಲ್ಯಾನಿ ಅನಿ ತ್ಯಾ ವಾರೆಮಾರಲ್ಲ್ಯಾಕ್ ಸಗ್ಳ್ಯಾಂಚ್ಯಾ ಮದ್ದಿ, ಜೆಜುಚ್ಯಾ ಇದ್ರಾಕ್ ತೆಚ್ಯಾ ಹಾತ್ರಾನಾ ಸಮೆತ್ ಉತರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:19
7 ತಿಳಿವುಗಳ ಹೋಲಿಕೆ  

ಜನರು ಗುಂಪಾಗಿದ್ದುದರಿಂದ ಅವರು ಆತನ ಹತ್ತಿರಕ್ಕೆ ಬರಲು ಸಾಧ್ಯವಾಗದೆ ಆತನು ನಿಂತ ಸ್ಥಳಕ್ಕೆ ಸರಿಯಾಗಿ ಮನೆಯ ಮೇಲ್ಛಾವಣಿಯನ್ನು ತೆರೆದು ಕಿಂಡಿಯೊಂದನ್ನು ಮಾಡಿ ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು.


ನಾನು ಕತ್ತಲಲ್ಲಿ ನಿಮಗೆ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ.


ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ಯಾವನಾದರೂ ಅದರ ಮಾಳಿಗೆಯಿಂದ ಬಿದ್ದು ನಿಮಗೆ ಜೀವಹತ್ಯ ದೋಷವುಂಟಾಗದಂತೆ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಗೋಡೆಯನ್ನು ಕಟ್ಟಿಸಬೇಕು.


ಮಾಳಿಗೆಯ ಮೇಲೆ ಇರುವವನು ತನ್ನ ಮನೆಯೊಳಗಿರುವುದನ್ನು ತೆಗೆದುಕೊಳ್ಳುವುದಕ್ಕೆ ಹೋಗದಿರಲಿ,


ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ, ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ, ಆ ಮನೆಗಳೆಲ್ಲಾ ಹೊಲಸಾಗಿ ತೋಫೆತ್ ಎಂಬ ಸ್ಥಳಕ್ಕೆ ಸಮಾನವಾಗುವವು.’”


ಅವನು ಒಂದು ದಿನ ಸಂಜೆ ಹೊತ್ತಿನಲ್ಲಿ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಅವನು ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.


ಅವರು ಗುಡ್ಡದಿಂದಿಳಿದು ಪಟ್ಟಣಕ್ಕೆ ಬಂದನಂತರ ಸಮುವೇಲನು ಸೌಲನನ್ನು ತನ್ನ ಮನೆಯ ಮಾಳಿಗೆಯ ಮೇಲೆ ಕರೆದುಕೊಂಡು ಹೋಗಿ ಅವನೊಡನೆ ಮಾತನಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು