Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೇಸು ಅವರ ನಂಬಿಕೆಯನ್ನು ನೋಡಿ, “ಸ್ನೇಹಿತನೇ, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯೇಸು ಅವರ ವಿಶ್ವಾಸವನ್ನು ಮೆಚ್ಚಿ, “ತಮ್ಮಾ, ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆತನು ಅವರ ನಂಬಿಕೆಯನ್ನು ನೋಡಿ - ಅಪ್ಪಾ, ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಈ ಜನರ ನಂಬಿಕೆಯನ್ನು ನೋಡಿ ಯೇಸು ಆ ರೋಗಿಗೆ, “ಸ್ನೇಹಿತನೇ ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೇಸು ಅವರ ವಿಶ್ವಾಸವನ್ನು ಕಂಡು ಅವನಿಗೆ, “ಮಗನೇ, ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತೆಕಾ ಹಾನಲ್ಲ್ಯಾ ಲೊಕಾಂಚೊ ವಿಶ್ವಾಸ್ ಬಗುನ್, ಜೆಜುನ್ ತ್ಯಾ ವಾರೆಮಾರಲ್ಲ್ಯಾಕ್ “ಮಾಜ್ಯಾ ದೊಸ್ತಾ, ತುಜೆ ಸಗ್ಳೆ ಪಾಪ್ ಮಾಪ್ ಹೊಲೆ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:20
16 ತಿಳಿವುಗಳ ಹೋಲಿಕೆ  

ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು. ಪೌಲನು ಅವನನ್ನು ದಿಟ್ಟಿಸಿ ನೋಡಿ ವಾಸಿಯಾಗುವುದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು;


ಅಲ್ಲಿಗೆ ಯೇಸು ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ರೋಗಿಯನ್ನು ಹೊತ್ತುಕೊಂಡು ಬಂದವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯು ರೋಗಿಗೆ, “ಮಗನೇ ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.


ಆ ಮೇಲೆ ಆತನು ಅವಳಿಗೆ, “ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.


ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ.


ಆತನು ಪ್ರತಿ ಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ.


ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ, “ಮಗನೇ, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.


ಆದರೂ ಒಬ್ಬನು; “ನಿನಗೆ ನಂಬಿಕೆಯುಂಟು ಮತ್ತು ನನಗೆ ಕ್ರಿಯೆಗಳುಂಟು” ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ತೋರಿಸು. ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ತೋರಿಸುತ್ತೇನೆ ಎಂದು ಹೇಳುವನಲ್ಲವೇ.


ನೀವು ಯಾರನ್ನು ಕ್ಷಮಿಸುತ್ತೀರೋ ನಾನು ಸಹ ಅವನನ್ನು ಕ್ಷಮಿಸುತ್ತೇನೆ. ನಿಮಗೋಸ್ಕರವೇ ಅವನನ್ನು ಕ್ರಿಸ್ತನ ಸನ್ನಿಧಾನದಲ್ಲಿ ಕ್ಷಮಿಸಿದ್ದೇನೆ.


ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ಆಯಿತು, ನನ್ನ ಆತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನ ಮೇಲೆ ಹಾಕಿಕೊಂಡಿದ್ದಿ.


ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು.


ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡು, “ನಿನಗೆ ಸ್ವಸ್ಥವಾಯಿತಲ್ಲಾ; ಇನ್ನು ಮೇಲೆ ಪಾಪ ಮಾಡಬೇಡ, ನಿನಗೆ ಹೆಚ್ಚಿನ ಕೇಡು ಬಂದೀತು” ಎಂದನು.


ಆ ದೂತನು ಅವನಿಗೆ, “ಹುಡುಗನ ಮೇಲೆ ಕೈ ಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಸಮರ್ಪಿಸುವುದಕ್ಕೆ ಹಿಂಜರಿಯಲಿಲ್ಲ. ಈಗ ನೀನು ದೇವರಲ್ಲಿ ಭಯಭಕ್ತಿಯುಳ್ಳವನು ಎಂದು ನನಗೆ ಗೊತ್ತಾಯಿತು” ಎಂದು ಹೇಳಿದನು.


ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ’ ಎಂದು ಅನ್ನುವುದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು