Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆ ದೋಣಿಗಳಲ್ಲಿ, ಸೀಮೋನನ ದೋಣಿಯನ್ನು ಯೇಸು ಹತ್ತಿ ದಡದಿಂದ ಸ್ವಲ್ಪ ದೂರಕ್ಕೆ ನೂಕಬೇಕೆಂದು ಅವನನ್ನು ಕೇಳಿಕೊಂಡನು. ತರುವಾಯ ಯೇಸು ಕುಳಿತುಕೊಂಡು ದೋಣಿಯೊಳಗಿಂದಲೇ ಆ ಜನರ ಗುಂಪಿಗೆ ಉಪದೇಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆ ದೋಣಿಗಳಲ್ಲಿ ಒಂದು ಸಿಮೋನನದು. ಯೇಸು ಅದನ್ನು ಹತ್ತಿ ದಡದಿಂದ ಸ್ವಲ್ಪ ದೂರ ತಳ್ಳಲು ಹೇಳಿ, ಅದರಲ್ಲೇ ಕುಳಿತುಕೊಂಡು ತಮ್ಮ ಬೋಧನೆಯನ್ನು ಮುಂದುವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆ ದೋಣಿಗಳಲ್ಲಿ ಸೀಮೋನನ ಒಂದು ದೋಣಿಯನ್ನು ಆತನು ಹತ್ತಿ ದಡದಿಂದ ಸ್ವಲ್ಪ ದೂರಕ್ಕೆ ನೂಕಬೇಕೆಂದು ಅವನನ್ನು ಕೇಳಿಕೊಂಡನು. ತರುವಾಯ ಆತನು ಕೂತುಕೊಂಡು ದೋಣಿಯೊಳಗಿಂದಲೇ ಆ ಜನರ ಗುಂಪಿಗೆ ಉಪದೇಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೇಸು ಸೀಮೋನನ ದೋಣಿಯಲ್ಲಿ ಹತ್ತಿ ಕುಳಿತುಕೊಂಡು ದೋಣಿಯನ್ನು ದಡದಿಂದ ಸ್ವಲ್ಪದೂರಕ್ಕೆ ನೂಕಬೇಕೆಂದು ಸೀಮೋನನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವುಗಳಲ್ಲಿ ಸೀಮೋನನ ದೋಣಿಯನ್ನು, ಯೇಸು ಹತ್ತಿ ಅದನ್ನು ದಡದಿಂದ ಸ್ವಲ್ಪ ದೂರ ನೂಕಬೇಕೆಂದು ಅವನನ್ನು ಕೇಳಿಕೊಂಡರು. ಆಮೇಲೆ ಯೇಸು ಕುಳಿತುಕೊಂಡು ದೋಣಿಯೊಳಗಿಂದಲೇ ಜನರಿಗೆ ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತ್ಯಾತುರ್‍ಲ್ಯಾ ಎಕ್ ಢೊನಿತ್ ಜೆಜು ಚೆಡುನ್ ಬಸ್ಲೊ ತಿ ಸಿಮಾವಾಚಿ ಢೊನ್, ಅನಿ ಜೆಜುನ್ ಉಲ್ಲಿ ಢೊನ್ ಲೊಟುಕ್ ಸಾಂಗ್ಲ್ಯಾನ್. ಜೆಜು ಢೊನಿತ್ ಬಸುನ್ ಲೊಕಾಕ್ನಿ ಶಿಕ್ವುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:3
8 ತಿಳಿವುಗಳ ಹೋಲಿಕೆ  

ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು; ಅವರು ಬೆಸ್ತರಾಗಿದ್ದರು.


ಬೆಳಗಿನಜಾವದಲ್ಲಿ ಆತನು ತಿರುಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು. ಆತನು ಕುಳಿತುಕೊಂಡು ಅವರಿಗೆ ಬೋಧಿಸಿದನು.


ಜನರ ಗುಂಪು ಅಧಿಕವಾಗಿದ್ದುದರಿಂದ ಅವರು ತನ್ನ ಮೈಮೇಲೆ ಬಿದ್ದು ನೂಕದಂತೆ ಯೇಸು ತನಗೆ ಒಂದು ದೋಣಿಯನ್ನು ಸಿದ್ಧಮಾಡಲು ಶಿಷ್ಯರಿಗೆ ಹೇಳಿದನು.


ಏಕೆಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು.


ಯೇಸು ಆ ಸರೋವರದ ದಡದಲ್ಲಿದ್ದ ಎರಡು ದೋಣಿಗಳನ್ನು ಕಂಡನು. ಬೆಸ್ತರು ಅವುಗಳೊಳಗಿಂದ ಹೊರಗೆ ಬಂದು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು