Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವರು ಆತನಿಗೆ, “ಯೋಹಾನನ ಶಿಷ್ಯರು ಪದೇಪದೇ ಉಪವಾಸದಿಂದ ವಿಜ್ಞಾಪನೆಗಳನ್ನು ಮಾಡುತ್ತಾ ಇರುತ್ತಾರೆ; ಅದರಂತೆ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಊಟಮಾಡುತ್ತಾರೆ ಕುಡಿಯುತ್ತಾರೆ” ಎಂದು ಹೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 “ಯೊವಾನ್ನನ ಶಿಷ್ಯರು ಪದೇಪದೇ ಉಪವಾಸವಿದ್ದು ಪ್ರಾರ್ಥನೆ ಮಾಡುತ್ತಾರೆ. ಅದರಂತೆಯೇ, ಫರಿಸಾಯರ ಶಿಷ್ಯರೂ ಮಾಡುತ್ತಾರೆ. ನಿನ್ನ ಶಿಷ್ಯರಾದರೋ ತಿಂದು ಕುಡಿಯುವುದರಲ್ಲಿಯೇ ಇದ್ದಾರೆ,” ಎಂದು ಕೆಲವರು ಮೂದಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅವರು ಆತನಿಗೆ - ಯೋಹಾನನ ಶಿಷ್ಯರು ಪದೇಪದೇ ಉಪವಾಸಗಳನ್ನೂ ವಿಜ್ಞಾಪನೆಗಳನ್ನೂ ಮಾಡುತ್ತಾ ಇದ್ದಾರೆ; ಅದರಂತೆ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಊಟಮಾಡುತ್ತಾರೆ, ಕುಡಿಯುತ್ತಾರೆ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಅವರು ಯೇಸುವಿಗೆ, “ಫರಿಸಾಯರ ಹಿಂಬಾಲಕರು ಉಪವಾಸವಿದ್ದು ಪ್ರಾರ್ಥಿಸುತ್ತಾರೆ. ಯೋಹಾನನ ಶಿಷ್ಯರು ಆಗಾಗ್ಗೆ ಉಪವಾಸವಿದ್ದು ಪ್ರಾರ್ಥಿಸುತ್ತಾರೆ. ನಿನ್ನ ಶಿಷ್ಯರಾದರೋ ಯಾವಾಗಲೂ ತಿಂದುಕುಡಿಯುವುದರಲ್ಲೇ ಇದ್ದಾರೆ” ಎಂದು ಟೀಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಕೆಲವರು ಯೇಸುವಿಗೆ, “ಯೋಹಾನನ ಶಿಷ್ಯರು ಪದೇಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ, ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ, ಆದರೆ ನಿಮ್ಮ ಶಿಷ್ಯರು ಏಕೆ ತಿಂದು ಕುಡಿಯುತ್ತಾರೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಉಲ್ಲ್ಯಾ ಲೊಕಾನಿ ಜೆಜುಕ್ “ಜುವಾಂವಾಚಿ ಶಿಸಾ ಪದೆ ಉಪಾಸ್ ಕರ್‍ತ್ಯಾತ್, ಮಾಗ್ನಿ ಕರ್‍ತ್ಯಾತ್, ಅನಿ ಫಾರಿಜೆವಾಂಚಿ ಶಿಸಾಬಿ ತಸೆಚ್ ಕರ್‍ತ್ಯಾತ್. ಖರೆ ತುಜಿ ಶಿಸಾ ಖಾವ್ನಗೆತ್-ಫಿವ್ನಗೆತ್ ರ್‍ಹಾತ್ಯಾತ್ ಕಶ್ಯಾಕ್?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:33
20 ತಿಳಿವುಗಳ ಹೋಲಿಕೆ  

ಅವರು ವಿಧವೆಯರ ಮನೆಗಳನ್ನು ನುಂಗಿ, ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು” ಅಂದನು.


ವಾರಕ್ಕೆ ಎರಡಾವರ್ತಿ ಉಪವಾಸಮಾಡುತ್ತೇನೆ; ನಾನು ಸಂಪಾದಿಸಿದ ಎಲ್ಲಾದರಲ್ಲಿಯೂ ಹತ್ತರಲ್ಲೊಂದು ಪಾಲು ಕೊಡುತ್ತೇನೆ’ ಎಂದು ಪ್ರಾರ್ಥಿಸಿದನು.


ಕರ್ತನು ಅವನಿಗೆ, “ನೀನೆದ್ದು ನೆಟ್ಟನೇ ಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ಕುರಿತು ವಿಚಾರಿಸು; ಅವನು ಈಗ ಪ್ರಾರ್ಥನೆ ಮಾಡುತ್ತಿದ್ದಾನೆ.


ಹೀಗಿರಲಾಗಿ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಒಬ್ಬ ಯೆಹೂದ್ಯನಿಗೂ ಶುದ್ಧಾಚಾರವನ್ನು ಕುರಿತು ವಾದ ಉಂಟಾಯಿತು.


ಮರುದಿನ ಪುನಃ ಯೋಹಾನನೂ ತನ್ನ ಇಬ್ಬರು ಶಿಷ್ಯರೊಂದಿಗೆ ನಿಂತುಕೊಂಡಿದ್ದನು,


ಒಮ್ಮೆ ಯೇಸು ಒಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆ ನಮಗೂ ಪ್ರಾರ್ಥನೆ ಮಾಡುವುದನ್ನು ಕಲಿಸು” ಎಂದು ಕೇಳಿದನು.


ಇವರು ವಿಧವೆಯರ ಮನೆಗಳನ್ನು ದೋಚಿ ತೋರಿಕೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಿನ ದಂಡನೆಯನ್ನು ಹೊಂದುವರು” ಎಂದನು.


“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.


ನೀವು ಭೋಜನ ಮಾಡುವಾಗಲೂ, ಪಾನಮಾಡುವಾಗಲೂ ಆ ನಿಮ್ಮ ಭೋಜನಪಾನಗಳು ನಿಮ್ಮವುಗಳಾಗಿಯೇ ಇರುವುದಲ್ಲವೇ.


ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.


ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.


ಅವಳು ಎಂಭತ್ತುನಾಲ್ಕು ವರ್ಷದವಳಾಗಿದ್ದಳು. ಆಕೆ ದೇವಾಲಯವನ್ನು ಬಿಟ್ಟುಹೋಗದೆ ಉಪವಾಸ ವಿಜ್ಞಾಪನೆಗಳಿಂದ ರಾತ್ರಿ ಹಗಲೂ ದೇವರನ್ನು ಆರಾಧಿಸುತ್ತಿದ್ದಳು.


ನಾನು ನೀತಿವಂತರನ್ನಲ್ಲ, ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಪಾಪಿಗಳನ್ನು ಕರೆಯುವುದಕ್ಕೆ ಬಂದಿದ್ದೇನೆ” ಎಂದು ಅವರಿಗೆ ಉತ್ತರಕೊಟ್ಟನು.


ಯೇಸು ಅವರಿಗೆ, “ಮದಲಿಂಗನು ಮದುವೆಯ ಅತಿಥಿಗಳ ಸಂಗಡ ಇರುವಲ್ಲಿ ಅವರಿಗೆ ಉಪವಾಸವಿರಿಸುವುದಕ್ಕೆ ನಿಮ್ಮಿಂದಾದೀತೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು