Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅನಂತರ ಯೇಸುಸ್ವಾಮಿ ಅವರೊಂದಿಗೆ ಬೆಟ್ಟದಿಂದ ಇಳಿದು, ಸಮತಟ್ಟಾದ ಸ್ಥಳಕ್ಕೆ ಬಂದರು. ಶಿಷ್ಯರ ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಸಮುದ್ರ ತೀರದ ಟೈರ್ ಹಾಗೂ ಸಿದೋನ್ ಪಟ್ಟಣಗಳಿಂದಲೂ ಜನಸಮೂಹ ಅಲ್ಲಿಗೆ ಬಂದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಮೇಲೆ ಆತನು ಅವರ ಸಂಗಡ ಬೆಟ್ಟದಿಂದ ಇಳಿದು ಸಮಭೂವಿುಯಲ್ಲಿ ನಿಂತನು. ಆತನ ಶಿಷ್ಯರ ದೊಡ್ಡ ಗುಂಪು ಮತ್ತು ಎಲ್ಲಾ ಯೂದಾಯದಿಂದಲೂ ಯೆರೂಸಲೇವಿುನಿಂದಲೂ ತೂರ್ ಸೀದೋನ್ ಪಟ್ಟಣಗಳಿರುವ ಸಮುದ್ರತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದವು. ಆ ಜನರು ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳನ್ನು ವಾಸಿಮಾಡಿಸಿಕೊಳ್ಳುವದಕ್ಕೂ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೇಸು ಮತ್ತು ಅಪೊಸ್ತಲರು ಬೆಟ್ಟದಿಂದಿಳಿದು ಸಮತಟ್ಟಾದ ಸ್ಥಳಕ್ಕೆ ಬಂದರು. ಆತನ ಹಿಂಬಾಲಕರ ಒಂದು ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮಿನಿಂದಲೂ ಜನಸಮೂಹವು ಅಲ್ಲಿಗೆ ಬಂದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೇಸು ಅವರೊಂದಿಗೆ ಕೆಳಗಿಳಿದು ಸಮತಟ್ಟಾದ ಭೂಮಿಯ ಮೇಲೆ ನಿಂತಿದ್ದಾಗ, ಅವರ ಶಿಷ್ಯರ ಗುಂಪು ಅಲ್ಲದೆ ಯೂದಾಯದಿಂದಲೂ ಯೆರೂಸಲೇಮಿನಿಂದಲೂ ಟೈರ್, ಸೀದೋನ್ ಪಟ್ಟಣಗಳಿರುವ ಸಮುದ್ರ ತೀರದಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಜೆಜು ಅಪೊಸ್ತಲಾಂಚ್ಯಾ ವಾಂಗ್ಡಾ ಮಡ್ಡಿ ವೈನಾ ಖಾಲ್ತಿ ಯೆವ್ನ್,ಸಪಾಟ್ ಜಿಮ್ನಿರ್ ಅಪ್ನಾಚ್ಯಾ ಹುರಲ್ಲ್ಯಾ ಲೈ ಜಾನಾ ಶಿಸಾಂಚ್ಯಾ ತಾಂಡ್ಯಾಚ್ಯಾ ವಾಂಗ್ಡಾ ಇಬೆ ಹೊತ್ತೊ. ಜುದೆಯಾತ್ನಾ ಅನಿ ಜೆರುಜಲೆಮಾತ್ನಾ ಅನಿ ತಿರ್ ಅನಿ ಸಿದೊನ್ ಮನ್ತಲ್ಯಾ ಜಾಗ್ಯಾತ್ಲ್ಯಾ ಸಮುಂದರಾಚ್ಯಾ ದಂಡೆಚ್ಯಾ ಜಾಗ್ಯಾನಿತ್ನಾ ಯೆಲ್ಲ್ಯಾ ಲೊಕಾಂಚೊ ಎಕ್ ಮೊಟೊ ತಾಂಡೊ ಥೈ ಯೆವ್ನ್ ಗೊಳಾ ಹೊಲ್ಲೊ ಹೊತ್ತೊ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:17
14 ತಿಳಿವುಗಳ ಹೋಲಿಕೆ  

ಹೇಗೆಂದರೆ, “ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.


ಆ ದಿನಗಳಲ್ಲಿ ಯೇಸು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋಗಿ ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದನು.


ಆದರೂ ಆತನ ಸುದ್ದಿಯು ಮತ್ತಷ್ಟು ಹಬ್ಬಿತು, ಮತ್ತು ಜನರು ಯೇಸುವಿನ ಉಪದೇಶವನ್ನು ಕೇಳುವುದಕ್ಕೂ, ತಮ್ಮ ತಮ್ಮ ರೋಗರುಜಿನಗಳನ್ನು ವಾಸಿಮಾಡಿಸಿಕೊಳ್ಳುವುದಕ್ಕೂ, ಗುಂಪುಗುಂಪಾಗಿ ಬಂದು ಸೇರಿದರು.


ಅನಂತರ ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ಪಟ್ಟಣಗಳ ಪ್ರಾಂತ್ಯಗಳಿಗೆ ಹೋದನು.


ಆತನು ಅವರಿಗಿಂತ ಮುಂದಾಗಿ ಬಂದು ಬಹು ಜನರ ಗುಂಪನ್ನು ಕಂಡು ಅವರ ಮೇಲೆ ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.


ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು.


ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷಮಿಸುವವನೂ, ಸಮಸ್ತ ರೋಗಗಳನ್ನು ವಾಸಿಮಾಡುವವನೂ,


ಯೇಸು ದೊಡ್ಡ ಗುಂಪನ್ನು ಕಂಡು ಬೆಟ್ಟದ ಮೇಲೇರಿ ಕುಳಿತ ತರುವಾಯ ಆತನ ಶಿಷ್ಯರು ಆತನ ಬಳಿಗೆ ಬಂದರು.


ಯಾಕೋಬನ ಮಗನಾದ ಯೂದ, ಆತನನ್ನು ಹಿಡಿದುಕೊಡುವ ದ್ರೋಹಿಯಾದ ಇಸ್ಕರಿಯೋತ ಯೂದ.


ಆ ಜನರು ಆತನ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ವಾಡಿಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಪೀಡಿತರು ಸಹ ಬಂದು ಸ್ವಸ್ಥರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು