Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ, ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಿಮ್ಮನ್ನು ಶಪಿಸುವವರಿಗೆ ಆಶೀರ್ವಾದಮಾಡಿರಿ; ನಿಮ್ಮನ್ನು ಬಯ್ಯುವವರಿಗೋಸ್ಕರ ದೇವರನ್ನು ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ. ನಿಮ್ಮನ್ನು ಹೀನೈಸುವ ಜನರಿಗೋಸ್ಕರ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ, ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತುಮ್ಚ್ಯಾ ವರ್‍ತಿ ಸರಾಪ್ ಘಾಲ್ತಲ್ಯಾಕ್ನಿ ತುಮಿ ಆಶಿರ್ವಾದ್ ದಿವಾ, ಅನಿ ತುಮ್ಕಾ ವಾಯ್ಟ್ ಕರ್‍ತಲ್ಯಾಂಚ್ಯಾಸಾಟ್ನಿ ಮಾಗ್ನಿ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:28
13 ತಿಳಿವುಗಳ ಹೋಲಿಕೆ  

ಅಪಕಾರಕ್ಕೆ ಅಪಕಾರವನ್ನು, ನಿಂದೆಗೆ ನಿಂದೆಯನ್ನು ಮಾಡದೇ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದಿದ್ದಾನಲ್ಲಾ. ಹೀಗೆ ಮಾಡುವುದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.


ಸ್ವಂತ ಕೈಗಳಿಂದ ಕೆಲಸಮಾಡಿ ದುಡಿಯುವವರೂ ಆಗಿದ್ದೇವೆ. ಶಪಿಸುವವರನ್ನು ಆಶೀರ್ವದಿಸುತ್ತೇವೆ. ಜನರು ಹಿಂಸಿಸುವಾಗ ಸಹಿಸಿಕೊಳ್ಳುತ್ತೇವೆ.


ನಿಮ್ಮನ್ನು ಹಿಂಸಿಸುವವರಿಗೆ ಆಶೀರ್ವಾದ ಮಾಡಿರಿ; ಶಪಿಸದೆ ಆಶೀರ್ವದಿಸಿರಿ.


ಅದೇ ಬಾಯಿಂದ ಸ್ತುತಿ ಮತ್ತು ಶಾಪ ಎರಡೂ ಬರುತ್ತವೆ. ನನ್ನ ಸಹೋದರರೇ,


ಆಗ ಯೇಸು, “ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು” ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿದರು.


“ಕೇಳುವವರಾದ ನಿಮಗೆ ನಾನು ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ;


ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.


ಮೊಣಕಾಲೂರಿ, “ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು” ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿ ನಿದ್ರೆಹೋದನು.


ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.


ಅನ್ಯಜನರೂ, ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳ ಸಮ್ಮತಿಯಿಂದ ಅಪೊಸ್ತಲರನ್ನು ಪೀಡಿಸುವುದಕ್ಕೂ, ಕಲ್ಲೆಸೆದು ಕೊಲ್ಲುವುದಕ್ಕೂ ಪ್ರಯತ್ನಿಸಿದಾಗ,


ದೇವರಾದ ಯೆಹೋವನಾದ ಕರ್ತನು ಹೀಗೆ ನುಡಿಯುತ್ತಾನೆ, ಆಹಾ, ನನ್ನ ದೇಶವನ್ನು ತಮ್ಮ ಸ್ವಾಸ್ತ್ಯಮಾಡಿಕೊಂಡು ಪೂರ್ಣಹೃದಯದಿಂದ ಆನಂದಪಟ್ಟವರೂ, ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರೂ ಆದ ಎದೋಮಿನವರೆಲ್ಲರನ್ನೂ, ಇತರ ಜನಾಂಗಗಳಲ್ಲಿ ಉಳಿದವರನ್ನೂ ನಾನು ರೋಷದ ಬೆಂಕಿಯಿಂದ ಉರಿಯುತ್ತಾ ಶಪಿಸಿದ್ದೇನೆ.’


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಫಿಲಿಷ್ಟಿಯರು ಯೆಹೂದಕ್ಕೆ ಪ್ರತಿಕಾರಮಾಡಿದ್ದಾರೆ; ಹೌದು, ಮುಯ್ಯಿಗೆಮುಯ್ಯಿ ತೀರಿಸುತ್ತಾ ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ದೀರ್ಘದ್ವೇಷದಿಂದ ಹಾಳುಮಾಡಿದ್ದಾರೆ.”


ಅರಸನು ಆ ಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನು ಪ್ರಸನನ್ನಾಗುವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು” ಎಂದು ಕೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡಿದ್ದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು