Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಿನ್ನನ್ನು ಬೇಡುವವರೆಲ್ಲರಿಗೂ ಕೊಡು; ನಿನ್ನ ಸೊತ್ತನ್ನು ಕಸಿದುಕೊಳ್ಳುವವನನ್ನು ಹಿಂದಕ್ಕೆ ಕೊಡೆಂದು ಕೇಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ಕೊಡು ನಿನ್ನ ಸೊತ್ತನ್ನು ಕಸಿದುಕೊಳ್ಳುವವನಿಂದ ತಿರುಗಿ ಕೇಳದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನಿನ್ನನ್ನು ಬೇಡುವವರೆಲ್ಲರಿಗೆ ಕೊಡು; ನಿನ್ನ ಸೊತ್ತು ಕಸುಕೊಳ್ಳುವವನನ್ನು ಹಿಂದಕ್ಕೆ ಕೊಡೆಂದು ಕೇಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಿಮ್ಮನ್ನು ಬೇಡುವ ಪ್ರತಿಯೊಬ್ಬನಿಗೆ ಕೊಡಿ. ಒಬ್ಬನು ನಿಮ್ಮಿಂದ ಏನಾದರೂ ತೆಗೆದುಕೊಂಡಾಗ ಅದನ್ನು ಹಿಂದಕ್ಕೆ ಕೊಡೆಂದು ಕೇಳಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನಿನ್ನಿಂದ ಕೇಳುವ ಪ್ರತಿಯೊಬ್ಬರಿಗೂ ಕೊಡು, ನಿನ್ನ ಸೊತ್ತನ್ನು ತೆಗೆದುಕೊಳ್ಳುವವನಿಂದ, ಅವುಗಳನ್ನು ತಿರುಗಿ ಕೇಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತುಮ್ಚೆಕ್ಡೆ ಕಾಯ್ಬಿ ಉಸ್ನೆ ಮಾಗ್ತಲ್ಯಾಕ್ನಿ ದಿವಾ,ಅನಿ ತುಮ್ಚೆಕ್ನಾ ಕೊನ್ಬಿ ಕಾಯ್ತರ್ ಉಸ್ನೆ ಘೆಟಲ್ಲೆ ರ್‍ಹಾಲ್ಯಾರ್ ಪರ್‍ತುನ್ ಮಾಗುನ್ ಘೆವ್‍ನಕಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:30
29 ತಿಳಿವುಗಳ ಹೋಲಿಕೆ  

ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.


ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವು ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು; ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಭಾಗ್ಯವೆಂಬುದಾಗಿ’ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು” ಅಂದನು.


ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆ ನಮ್ಮ ತಪ್ಪುಗಳನ್ನು ಕ್ಷಮಿಸು.


ಯೇಸು ಅದನ್ನು ಕೇಳಿ ಅವನಿಗೆ, “ಇನ್ನೂ ನಿನಗೆ ಒಂದು ಕೊರತೆಯಿದೆ. ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು, ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು. ತರುವಾಯ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.


ಧರ್ಮಿಯು ಹಿಂತೆಗೆಯದೆ ಕೊಡುವನು, ಲೋಭಿಯು ದಿನವೆಲ್ಲಾ ಆಶಿಸುತ್ತಲೇ ಇರುವನು.


ದಿಕ್ಕಿಲ್ಲದವನನ್ನು ಪರಾಂಬರಿಸುವವನು ಧನ್ಯನು; ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.


ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.


ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.


ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು.


ಕೊಡಿರಿ, ಆಗ ನಿಮಗೂ ಕೊಡಲ್ಪಡುವುದು; ಅದುಮಿ, ಅಲ್ಲಾಡಿಸಿ, ತುಂಬಿತುಳುಕುವಂತೆ, ಅಳೆದು ನಿಮ್ಮ ಸೆರಿಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು” ಅಂದನು.


ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸಹೋದರನಿಗೆ ಹೃದಯಪೂರ್ವಕವಾಗಿ ಕ್ಷಮಿಸದೇ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ನಿಮಗೂ ಹಾಗೆಯೇ ಮಾಡುವನು” ಅಂದನು.


ನಾನು ನನ್ನ ಹೃದಯದಲ್ಲಿ ಜ್ಞಾನವನ್ನು ಪಡೆಯಲು, ಲೋಕದಲ್ಲಿ ನಡೆಯುವುದನ್ನು ಅರಿತುಕೊಳ್ಳಲು ಪ್ರಯತ್ನಿಸಿದಾಗ, ನಾನು ಕಂಡುಕೊಂಡ ಸಂಗತಿಯೇನೆಂದರೆ, “ಒಬ್ಬನು ರಾತ್ರಿಹಗಲು ಕಣ್ಣುಗಳಿಗೆ ನಿದ್ರೆಕೊಡದೆ ಕೆಲಸ ಮಾಡಿದರೂ,


ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು, ತನ್ನ ಆಹಾರವನ್ನು ಬಡವರಿಗೆ ಕೊಡುತ್ತಾನಲ್ಲವೆ.


ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.


ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು.


ನೀನು ಅದನ್ನು ಏಳು ಮತ್ತು ಎಂಟು ಮಂದಿಗೆ ಹಂಚಿಬಿಡು. ಲೋಕದಲ್ಲಿ ಮುಂದೆ ಸಂಭವಿಸುವ ಕೇಡು ನಿನಗೆ ಗೊತ್ತಿಲ್ಲ.


ಆದರೆ ನಾನು ನಿಮಗೆ ಹೇಳುವುದೇನಂದರೆ, ಕೆಡುಕನನ್ನು ವಿರೋಧಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ನಿನ್ನ ಮತ್ತೊಂದು ಕೆನ್ನೆಯನ್ನು ಸಹ ತಿರುಗಿಸು.


ನಿನ್ನ ಒಂದು ಕೆನ್ನೆಯ ಮೇಲೆ ಹೊಡೆದವನಿಗೆ ಮತ್ತೊಂದು ಕೆನ್ನೆಯನ್ನೂ ತೋರಿಸು; ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳಂಗಿಯನ್ನೂ ತೆಗೆದುಕೊಳ್ಳಲು ಅಡ್ಡಿಮಾಡಬೇಡ.


ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅಂಥದನ್ನೇ ನೀವು ಅವರಿಗೆ ಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು