ಲೂಕ 6:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 “ಆದುದರಿಂದ ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ಅವನಿಗೆ ಒಳಿತನ್ನೇ ಮಾಡಿರಿ. ಪ್ರತಿಯಾಗಿ ಪಡೆಯುವ ಆಶೆಯಿಡದೆ ಸಾಲಕೊಡಿ. ಆಗ ನಿಮಗೆ ಮಹತ್ತಾದ ಸಂಭಾವನೆ ದೊರಕುವುದು. ನೀವು ಮಹೋನ್ನತ ದೇವರ ಮಕ್ಕಳಾಗುವಿರಿ. ದೇವರು ದುರ್ಜನರಿಗೂ ಒಳ್ಳೆಯವರು, ಕೃತಘ್ನರಿಗೂ ಒಳ್ಳೆಯವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಧೈರ್ಯವನ್ನು ಬಿಡದೆ ಸಾಲಕೊಡಿರಿ; ಹೀಗೆ ಮಾಡಿದರೆ, ನಿಮಗೆ ಬಹಳ ಫಲ ಸಿಕ್ಕುವದು, ಮತ್ತು ನೀವು ಪರಾತ್ಪರನ ಮಕ್ಕಳಾಗುವಿರಿ. ಆತನಂತೂ ಉಪಕಾರ ನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 “ಆದ್ದರಿಂದ ನಿಮ್ಮ ವೈರಿಗಳನ್ನು ಪ್ರೀತಿಸಿರಿ. ಅವರಿಗೆ ಒಳ್ಳೆಯದನ್ನು ಮಾಡಿರಿ. ನೀವು ಅವರಿಗೆ ಸಾಲ ಕೊಡುವಾಗ ಮತ್ತೆ ಅವರಿಂದ ಪಡೆಯಬಹುದೆಂಬ ನಿರೀಕ್ಷೆಯಿಲ್ಲದೆ ಕೊಡಿರಿ. ಆಗ ನಿಮಗೆ ದೊಡ್ಡ ಪ್ರತಿಫಲವಿರುವುದು. ನೀವು ಮಹೋನ್ನತನಾದ ದೇವರ ಮಕ್ಕಳಾಗುವಿರಿ. ಏಕೆಂದರೆ ದೇವರು ಪಾಪಿಷ್ಠರಿಗೂ ಕೃತಜ್ಞತೆಯಿಲ್ಲದವರಿಗೂ ಒಳ್ಳೆಯವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆದರೆ ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಅವರಿಗೆ ಒಳ್ಳೆಯದನ್ನು ಮಾಡಿರಿ. ಏನನ್ನೂ ತಿರುಗಿ ನಿರೀಕ್ಷಿಸದೆ ಸಾಲ ಕೊಡಿರಿ, ಆಗ ನಿಮ್ಮ ಪ್ರತಿಫಲ ದೊಡ್ಡದಾಗಿರುವುದು. ನೀವು ಮಹೋನ್ನತ ದೇವರ ಮಕ್ಕಳಾಗಿರುವಿರಿ, ಅವರು ಕೃತಜ್ಞತೆಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವರಾಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ತುಮ್ಚ್ಯಾ ದುಸ್ಮಾನಾಂಚೊ ಪ್ರೆಮ್ ಕರಾ ಅನಿ ತೆಂಕಾ ಬರೆ ಕರಾ; ಪರ್‍ತುನ್ ಅನಿ ಘೆತಲಿ ಆಸ್ಯಾ ನಸ್ತಾನಾ ರಿನ್ ದಿವಾ, ತನ್ನಾ ತುಮ್ಕಾ ಭೊಮಾನ್ ಗಾವ್ತಾ, ಅನಿ ತುಮಿ ಲೈ ಮೊಟ್ಯಾ ದೆವಾಚಿ ಪೊರಾ ಹೊತ್ಯಾಶಿ. ತೆಕಾ ಪಾಪಿ ಅನಿ ಬುರ್ಶಿ ಲೊಕಾಬಿ ಬರಿಚ್. ಅಧ್ಯಾಯವನ್ನು ನೋಡಿ |