ಲೂಕ 6:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಕೊಡಿರಿ, ಆಗ ನಿಮಗೂ ಕೊಡಲ್ಪಡುವುದು; ಅದುಮಿ, ಅಲ್ಲಾಡಿಸಿ, ತುಂಬಿತುಳುಕುವಂತೆ, ಅಳೆದು ನಿಮ್ಮ ಸೆರಿಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಪರರನ್ನು ಕ್ಷಮಿಸಿರಿ, ದೇವರು ನಿಮ್ಮನ್ನೂ ಕ್ಷಮಿಸುವರು; ಪರರಿಗೆ ಕೊಡಿ, ದೇವರು ನಿಮಗೂ ಕೊಡುವರು; ಅಳತೆಯಲ್ಲಿ ತುಂಬಿ, ಕುಲುಕಿ, ಅದುಮಿ ತುಳುಕುವಂತೆ ಅಳೆದು ನಿಮ್ಮ ಮಡಿಲಿಗೆ ಹಾಕುವರು. ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಕೊಡಿರಿ, ಆಗ ನಿಮಗೂ ಕೊಡುವರು; ಜಡಿದು ಅಲ್ಲಾಡಿಸಿ ಹೊರಚೆಲ್ಲುವ ಹಾಗೆ ತುಂಬಾ ಅಳತೆಯನ್ನು ಅಳೆದು ನಿಮ್ಮ ಸೆರಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಇತರರಿಗೆ ಕೊಡಿರಿ, ಆಗ ನಿಮಗೂ ದೊರೆಯುವುದು. ಪಾತ್ರೆಯಲ್ಲಿ ಅದುಮಿ, ಅಲ್ಲಾಡಿಸಿ ಹೊರಚೆಲ್ಲುವಂತೆ ಅಳೆದು ನಿಮ್ಮ ಸೆರಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಕೊಡಿರಿ, ಆಗ ನಿಮಗೂ ಕೊಡುವರು. ಒಳ್ಳೆಯ ಅಳತೆಯಲ್ಲಿ ಒತ್ತಿ, ಕುಲುಕಿ, ಚೆಲ್ಲುವಂತೆ ಮನುಷ್ಯರು ನಿಮ್ಮ ಮಡಿಲಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ದುಸ್ರ್ಯಾಕ್ನಿ ದಿವಾ,ಅನಿ ದೆವ್ ತುಮ್ಕಾ ದಿತಾ.ಹೆಚ್ಯಾ ಬದ್ಲಾಕ್, ಮಾಪ್ ಭರುನ್ ತುಮ್ಕಾ ದಿವ್ನ್ ಹೊತಾ,ತುಮ್ಚ್ಯಾ ಪೊಶಾತ್ ಭರುನ್ ಪಡಿಸರ್ಕೆ ತುಮ್ಕಾ ಗಾವ್ತಾ, ಖಲ್ಯಾ ಮಾಪಾನ್ ತುಮಿ ದುಸ್ರ್ಯಾಕ್ನಿ ದಿತ್ಯಾಶಿ ತ್ಯಾಚ್ ಮಾಪಾನ್ ದೆವ್ ತುಮ್ಕಾ ಮೆಜುನ್ ದಿತಾ”. ಅಧ್ಯಾಯವನ್ನು ನೋಡಿ |