ಲೂಕ 6:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟಬೊಕ್ಕಸದೊಳಗಿನಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಒಳ್ಳೆಯವನು ತನ್ನ ಹೃದಯವೆಂಬ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ. ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವುದೇ ಬಾಯಿಮಾತಾಗಿ ತುಳುಕುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟ ಬೊಕ್ಕಸದೊಳಗಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವದೇ ಬಾಯಲ್ಲಿ ಹೊರಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಒಳ್ಳೆಯವನ ಹೃದಯದಲ್ಲಿ ಒಳ್ಳೆಯವು ಇರುತ್ತವೆ. ಆದ್ದರಿಂದ ಅವನ ಹೃದಯದೊಳಗಿಂದ ಒಳ್ಳೆಯವು ಹೊರಬರುತ್ತವೆ. ಆದರೆ ಕೆಟ್ಟವನ ಹೃದಯದಲ್ಲಿ ಕೆಟ್ಟವು ಇರುತ್ತವೆ. ಆದ್ದರಿಂದ ಅವನ ಹೃದಯದೊಳಗಿಂದ ಕೆಟ್ಟವು ಹೊರಬರುತ್ತವೆ. ಹೃದಯದಲ್ಲಿ ತುಂಬಿರುವುದೇ ಬಾಯಲ್ಲಿ ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಒಳ್ಳೆಯವನು ತನ್ನ ಹೃದಯದ ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ. ಆದರೆ ಕೆಟ್ಟವನು ತನ್ನ ಹೃದಯದ ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವದನ್ನೇ ಅವನ ಬಾಯಿ ಮಾತನಾಡುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್45 ಎಕ್ ಬರೊ ಮಾನುಸ್ ಅಪ್ನಾಚ್ಯಾ ಮನಾತ್ ಗೊಳಾ ಕರುನ್ ಥವಲ್ಲೆ ಬರೆಚ್ ಅಪ್ನಾಚ್ಯಾ ಮನಾತ್ನಾ ಭಾಯ್ರ್ ಕಾಡ್ತಾ, ಎಕ್ ಬುರ್ಸೊ ಮಾನುಸ್ ಅಪ್ನಾಚ್ಯಾ ಮನಾತ್ ಗೊಳಾ ಕರುನ್ ಥವಲ್ಲೆ ಬುರ್ಶೆಚ್ ಅಪ್ನಾಚ್ಯಾ ಮನಾತ್ನಾ ಭಾಯ್ರ್ ಕಾಡ್ತಾ. ಜೆ ಕಾಯ್ ಮನಾತ್ ಹಾಯ್ ತೆಚ್ ತೊಂಡಾತ್ನಾ ಭಾಯ್ರ್ ಯೆತಾ”. ಅಧ್ಯಾಯವನ್ನು ನೋಡಿ |