Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ಯೇಸುವಿನ ಸುದ್ದಿಯನ್ನು ಕೇಳಿ ಆತನ ಬಳಿಗೆ ಬಂದು ನನ್ನ ಆಳನ್ನು ಸ್ವಸ್ಥಮಾಡಬೇಕೆಂದು ಆತನನ್ನು ಬೇಡಿಕೊಳ್ಳುವ ಹಾಗೆ ಯೆಹೂದ್ಯರ ಹಿರಿಯರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಶತಾಧಿಪತಿ ಯೇಸುವಿನ ವಿಷಯವನ್ನು ಕೇಳಿ ಅವರ ಬಳಿಗೆ ಯೆಹೂದ್ಯ ಪ್ರಮುಖರನ್ನು ಕಳುಹಿಸಿ, ತನ್ನ ಸೇವಕನನ್ನು ಗುಣಪಡಿಸಲು ಬರಬೇಕೆಂದು ಮನವಿಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ಯೇಸುವಿನ ಸುದ್ದಿಯನ್ನು ಕೇಳಿ ಆತನ ಬಳಿಗೆ - ನೀನು ಬಂದು ನನ್ನ ಆಳನ್ನು ಸ್ವಸ್ಥಮಾಡಬೇಕೆಂದು ಆತನನ್ನು ಬೇಡಿಕೊಳ್ಳುವ ಹಾಗೆ ಯೆಹೂದ್ಯರ ಹಿರಿಯರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೇಸುವಿನ ಸುದ್ದಿಯನ್ನು ಕೇಳಿದಾಗ, ಅವನು ಕೆಲವು ಹಿರಿಯ ಯೆಹೂದ್ಯನಾಯಕರನ್ನು ಆತನ ಬಳಿಗೆ ಕಳುಹಿಸಿ ತನ್ನ ಸೇವಕನ ಪ್ರಾಣವನ್ನು ಉಳಿಸಿಕೊಡಬೇಕೆಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನು ಯೇಸುವಿನ ವಿಷಯ ಕೇಳಿದಾಗ, ಬಂದು ತನ್ನ ಸೇವಕನನ್ನು ಗುಣಮಾಡಬೇಕೆಂದು ಬೇಡಿಕೊಳ್ಳುವಂತೆ ಯೆಹೂದ್ಯರ ಹಿರಿಯರನ್ನು ಅವರ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತ್ಯಾ ಶತಪತಿನ್ ಜೆಜುಚ್ಯಾ ವಿಶಯಾತ್ ಆಯ್ಕಲ್ಲ್ಯಾ ತನ್ನಾ, ಉಲ್ಲ್ಯಾ ಜುದೆವ್ ಲೊಕಾಂಚ್ಯಾ ಜಾನ್ತ್ಯಾಕ್ನಿ, ತ್ಯಾ ಆಳಾಕ್ ಯೆವ್ನ್ ಬರೆ ಕರ್ ಮನುನ್ ಇಚಾರುಕ್, ಜೆಜುಕ್ಡೆ ಧಾಡುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:3
7 ತಿಳಿವುಗಳ ಹೋಲಿಕೆ  

ಯೇಸು ಕಪೆರ್ನೌಮಿಗೆ ಬಂದಾಗ ಒಬ್ಬ ದಂಡಿನ ಶತಾಧಿಪತಿಯು ಆತನ ಬಳಿಗೆ ಬಂದು,


ನಾನು ಸೆರೆಯಲ್ಲಿ ಬಂಧಿಯಾಗಿರುವಾಗ ನನ್ನ ಮಗನಂತೆ ಬಂದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಬೇಡಿಕೊಳ್ಳುತ್ತೇನೆ.


ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಸುದ್ದಿಯನ್ನು ಆ ಅಧಿಕಾರಿಯು ಕೇಳಿದಾಗ ತನ್ನ ಮಗನು ಸಾಯುವ ಸ್ಥಿತಿಯಲ್ಲಿದುದ್ದರಿಂದ ಯೇಸುವಿನ ಬಳಿಗೆ ಹೋಗಿ, “ನೀನು ಬಂದು ನನ್ನ ಮಗನನ್ನು ಸ್ವಸ್ಥಮಾಡು” ಎಂದು ಬೇಡಿಕೊಂಡನು.


ಆಗ ಆ ಗುಂಪಿನಲ್ಲಿದ್ದ ಒಬ್ಬನು, “ಬೋಧಕನೇ, ನನ್ನ ಮಗನನ್ನು ಕಟಾಕ್ಷಿಸು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ನನಗೆ ಇವನೊಬ್ಬನೇ ಮಗನು.


ಆಗ ಸಭಾಮಂದಿರದ ಅಧಿಕಾರಿಯಾದ ಯಾಯೀರನೆಂಬ ಒಬ್ಬ ಮನುಷ್ಯನು ಬಂದು ಯೇಸುವಿನ ಪಾದಗಳಿಗೆ ಅಡ್ಡಬಿದ್ದನು. ಏಕೆಂದರೆ ಹೆಚ್ಚುಕಡಿಮೆ ಹನ್ನೆರಡು ವರ್ಷದವಳಾದ ಅವನ ಒಬ್ಬಳೇ ಮಗಳು ಸಾಯುವ ಸ್ಥಿತಿಯಲ್ಲಿದ್ದ ಕಾರಣ ಆತನನ್ನು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. ಯೇಸು ಹೋಗುತ್ತಿರುವಲ್ಲಿ ಜನಸಮೂಹವು ಸುತ್ತಲಿನಿಂದಲೂ ಆತನನ್ನು ನೂಕಾಡುತ್ತಿತ್ತು.


ಅಲ್ಲಿ ದಂಡಿನ ಶತಾಧಿಪತಿಗೆ ಇಷ್ಟನಾದ ಒಬ್ಬ ಆಳು ಕ್ಷೇಮವಿಲ್ಲದೆ ಸಾಯುವ ಹಾಗಿದ್ದನು.


ಅವರು ಯೇಸುವಿನ ಬಳಿಗೆ ಬಂದು, “ನಿನ್ನಿಂದ ಇಂಥ ಉಪಕಾರ ಹೊಂದುವುದಕ್ಕೆ ಅವನು ಯೋಗ್ಯನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು