Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಮನುಷ್ಯಕುಮಾರನು ಬಂದಿದ್ದಾನೆ, ಆತನು ಅನ್ನ ಪಾನಗಳನ್ನು ತೆಗೆದುಕೊಳ್ಳುವವನಾಗಿದ್ದಾನೆ. ನೀವು, ‘ಇಗೋ, ಈತನು ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಷ್ಠರ ಗೆಳೆಯನು’ ಅನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ನರಪುತ್ರನು ಬಂದಾಗ ಅನ್ನ ಪಾನೀಯಗಳನ್ನು ಸೇವಿಸಿದನು; ನೀವು, ‘ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ,’ ಎನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಮನುಷ್ಯಕುಮಾರನು ಬಂದಿದ್ದಾನೆ, ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವನಾಗಿದ್ದಾನೆ; ನೀವು - ಇಗೋ, ಇವನು ಹೊಟ್ಟೆಬಾಕನು, ಕುಡುಕನು, ಭ್ರಷ್ಟರ ಮತ್ತು ಪಾಪಿಷ್ಠರ ಗೆಳೆಯನು ಅನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಮನುಷ್ಯಕುಮಾರನು ಬಂದನು. ಅವನು ಇತರ ಜನರಂತೆ ಊಟಮಾಡುತ್ತಾನೆ ಮತ್ತು ದ್ರಾಕ್ಷಾರಸವನ್ನು ಕುಡಿಯುತ್ತಾನೆ. ಆದರೆ ನೀವು, ‘ನೋಡಿರಿ! ಅವನೊಬ್ಬ ಹೊಟ್ಟೆಬಾಕ, ಕುಡುಕ! ಸುಂಕವಸೂಲಿಗಾರರು ಮತ್ತು ಇತರ ಕೆಟ್ಟಜನರೇ ಅವನ ಸ್ನೇಹಿತರು!’ ಎನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಮನುಷ್ಯಪುತ್ರನಾದ ನಾನು ಅನ್ನಪಾನ ಸೇವಿಸುವವನಾಗಿ ಬಂದೆನು, ಆದರೆ ನೀವು, ‘ಇಗೋ, ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು,’ ಎನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಮಾನ್ಸಾಚೊ ಲೆಕ್ ಯೆಲೊ, ಅನಿ ತೆನಿ ಖಾಲ್ಯಾನ್, ಅನಿ ಫಿಲ್ಯಾನ್, ಅನಿ ತುಮಿ “ಭಕಾಸುರ್, ಅನಿ ಫಿದೊಡೊ,ಅನಿ ತೆರ್‍ಗಿ ವಸುಲ್ ಕರ್‍ತಲ್ಯಾಂಚೊ, ಅನಿ ಪಾಪಿ ಲೊಕಾಂಚೊ ವಾಂಗ್ಡಿ!” ಮಟ್ಲ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:34
13 ತಿಳಿವುಗಳ ಹೋಲಿಕೆ  

ಫರಿಸಾಯರೂ ಶಾಸ್ತ್ರಿಗಳೂ, “ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ” ಎಂದು ಹೇಳಿಕೊಂಡು ಗೊಣಗುಟ್ಟುತ್ತಿದ್ದರು.


ಯೇಸುವಿಗೆ ಅಲ್ಲಿ ಔತಣವನ್ನು ಏರ್ಪಡಿಸಿದ್ದರು. ಮಾರ್ಥಳು ಉಪಚಾರ ಮಾಡುತ್ತಿದ್ದಳು. ಲಾಜರನು ಆತನ ಜೊತೆಯಲ್ಲಿ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನಾಗಿದ್ದನು.


ಇದನ್ನು ನೋಡಿದವರೆಲ್ಲರು, “ಈತನು ಪಾಪಿಯಾಗಿರುವವನ ಬಳಿಯಲ್ಲಿ ಉಳಿದುಕೊಳ್ಳುವುದಕ್ಕೆ ಹೋಗಿದ್ದಾನೆ” ಎಂದು ಗೊಣಗುಟ್ಟಿದರು.


ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಿದ್ದರು.


ಫರಿಸಾಯರಲ್ಲಿ ಒಬ್ಬನು ಆತನನ್ನು ತನ್ನ ಜೊತೆಯಲ್ಲಿ ಊಟಮಾಡಬೇಕೆಂದು ಬೇಡಿಕೊಂಡಾಗ ಆತನು ಆ ಫರಿಸಾಯನ ಮನೆಗೆ ಹೋಗಿ ಆತನ ಸಂಗಡ ಊಟಕ್ಕೆ ಕುಳಿತುಕೊಂಡನು.


ತರುವಾಯ ಲೇವಿಯು ತನ್ನ ಮನೆಯಲ್ಲಿ ಯೇಸುವಿಗೆ ಒಂದು ದೊಡ್ಡ ಔತಣವನ್ನು ಏರ್ಪಡಿಸಿರಲು, ಸುಂಕದವರೂ ಇತರರೂ ಗುಂಪಾಗಿ ಕೂಡಿ ಬಂದು ಅವರ ಸಂಗಡ ಊಟಕ್ಕೆ ಕುಳಿತುಕೊಂಡಿದ್ದರು.


ಅದನ್ನು ನೋಡಿದ ಫರಿಸಾಯರು ಆತನ ಶಿಷ್ಯರನ್ನು, “ನಿಮ್ಮ ಗುರುವು ಸುಂಕದವರು ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.


ಯೇಸುವನ್ನೂ ಆತನ ಶಿಷ್ಯರನ್ನೂ ಸಹ ಮದುವೆಗೆ ಕರೆದಿದ್ದರು.


ಯೇಸು ಮಾತನಾಡುತ್ತಿರುವಾಗ ಒಬ್ಬ ಫರಿಸಾಯನು ಆತನನ್ನು ಊಟಕ್ಕೆ ಬರಬೇಕೆಂದು ಕೇಳಿಕೊಳ್ಳಲು ಆತನು ಒಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡನು.


ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಸುಂಕದವರು ಹಾಗೆ ಮಾಡುವುದಿಲ್ಲವೇ.


ಮನುಷ್ಯಕುಮಾರನು ಬಂದನು, ಅವನು ಅನ್ನ ಪಾನಗಳನ್ನು ಸೇವಿಸುವವನಾಗಿದ್ದನು. ಅವರು ‘ಇಗೋ ಇವನು ಹೊಟ್ಟೆಬಾಕನು ಕುಡುಕನು ತೆರಿಗೆಯವರ ಮತ್ತು ಪಾಪಿಗಳ ಗೆಳೆಯನು’ ಅನ್ನುತ್ತಾರೆ. ಆದರೆ ಜ್ಞಾನವು ಅದರ ಕಾರ್ಯಗಳಿಂದಲೇ ಜ್ಞಾನವೆಂದು ಸಮರ್ಥಿಸಲ್ಪಡುತ್ತದೆ” ಅಂದನು.


ಏಕೆಂದರೆ ಸ್ನಾನಿಕನಾದ ಯೋಹಾನನು ಬಂದಿದ್ದಾನೆ; ಅವನು ರೊಟ್ಟಿ ತಿನ್ನದವನು, ದ್ರಾಕ್ಷಾರಸ ಕುಡಿಯದವನು; ನೀವು, ‘ಅವನಿಗೆ ದೆವ್ವ ಹಿಡಿದದೆ’ ಅನ್ನುತ್ತೀರಿ.


ಆದರೆ ಜ್ಞಾನವಾದರೋ ತನ್ನ ಎಲ್ಲಾ ಮಕ್ಕಳಿಂದ ಸಮರ್ಥನೆ ಪಡೆದದೆ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು