ಲೂಕ 7:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೇಸು ಈ ಮಾತನ್ನು ಕೇಳಿ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿರುವ ಗುಂಪನ್ನು ನೋಡಿ, “ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲೂ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವನ ಈ ಮಾತುಗಳನ್ನು ಕೇಳಿದಾಗ ಯೇಸುವಿಗೆ ಆಶ್ಚರ್ಯವಾಯಿತು. ತಮ್ಮ ಹಿಂದೆ ಬರುತ್ತಿದ್ದ ಜನರ ಗುಂಪಿನ ಕಡೆ ತಿರುಗಿನೋಡಿ, “ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲೂ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯೇಸು ಈ ಮಾತನ್ನು ಕೇಳಿ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿರುವ ಗುಂಪನ್ನು ಹಿಂತಿರುಗಿ ನೋಡಿ - ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೇಸು ಇದನ್ನು ಕೇಳಿ ಆಶ್ಚರ್ಯಪಟ್ಟು ತನ್ನನ್ನು ಹಿಂಬಾಲಿಸುತ್ತಿದ್ದ ಜನರ ಕಡೆಗೆ ನೋಡಿ, “ಇಷ್ಟು ದೊಡ್ಡ ನಂಬಿಕೆಯಿರುವ ವ್ಯಕ್ತಿಯನ್ನು ನಾನು ಇಸ್ರೇಲಿನಲ್ಲಿಯೂ ನೋಡಲಿಲ್ಲ ಎಂದು ನಿಮಗೆ ಹೇಳುತ್ತೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯೇಸು ಅವನ ಈ ಮಾತುಗಳನ್ನು ಕೇಳಿದಾಗ, ಆಶ್ಚರ್ಯಪಟ್ಟು ತಿರುಗಿಕೊಂಡು ತಮ್ಮನ್ನು ಹಿಂಬಾಲಿಸುತ್ತಿದ್ದ ಗುಂಪಿಗೆ, “ನಾನು ನಿಮಗೆ ಹೇಳುವುದೇನೆಂದರೆ, ಇಂಥ ಮಹಾ ನಂಬಿಕೆಯನ್ನು ನಾನು ಇಸ್ರಾಯೇಲ್ ಜನರಲ್ಲಿಯೂ ಸಹ ಕಾಣಲಿಲ್ಲ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಹೆ ಆಯ್ಕುನ್ ಜೆಜು ಅಜಾಪ್ ಹೊಲೊ; ತೊ ಫಾಟಿ ಪರತ್ಲೊ, ಅನಿ ಅಪ್ನಾಚ್ಯಾ ಫಾಟ್ನಾ ಯೆತಲ್ಯಾ ಲೊಕಾಂಚ್ಯಾ ತಾಂಡ್ಯಾಕ್ ಮಿಯಾ ತುಮ್ಕಾ ಸಾಂಗ್ತಾ “ಅಸ್ಲೊ ವಿಶ್ವಾಸ್ ಮಾಕಾ ಇಸ್ರಾಯೆಲಾತ್ ಖೈಬಿ ಗಾವುಕ್ನಾ!” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |