Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದು ಹೋಗುತ್ತಾರೆ. ಇವರೇ ಬಂಡೆಯ ಮೇಲೆ ಬೀಳಲ್ಪಟ್ಟ ಬೀಜಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕಲ್ಲುಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಸಂತೋಷದಿಂದ ಸ್ವೀಕರಿಸಿದವರು; ಅದು ಅವರಲ್ಲಿ ಬೇರೂರದ ಕಾರಣ ಅವರು ಸ್ವಲ್ಪಕಾಲ ವಿಶ್ವಾಸಿಸುತ್ತಾರೆ; ಶೋಧನೆಯ ಸಮಯದಲ್ಲಿ ಅದನ್ನು ತೊರೆದುಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದುಹೋಗುತ್ತಾರೆ; ಇವರೇ ಬಂಡೆಯ ನೆಲವಾಗಿರುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬಂಡೆಯ ಮೇಲೆ ಬಿದ್ದ ಬೀಜವೆಂದರೇನು? ಕೆಲವರು ದೇವರ ವಾಕ್ಯ ಕೇಳಿ ಸಂತೋಷದಿಂದ ಸ್ವೀಕರಿಸಿಕೊಳ್ಳುತ್ತಾರೆ. ಆದರೆ ಅವರಿಗೆ ಆಳವಾದ ಬೇರುಗಳಿರುವುದಿಲ್ಲ. ಅವರು ಸ್ವಲ್ಪಕಾಲ ಮಾತ್ರವೇ ನಂಬುತ್ತಾರೆ. ಬಳಿಕ ತೊಂದರೆಯೇನಾದರೂ ಬಂದರೆ ತಮ್ಮ ನಂಬಿಕೆಯನ್ನು ಕಳೆದುಕೊಂಡು ದೇವರಿಂದ ದೂರ ಸರಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಬೀಜ ಬಿದ್ದ ಕಲ್ಲುಭೂಮಿಯು ಯಾರೆಂದರೆ ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಸ್ವೀಕರಿಸುವವರು, ಆದರೆ ಇವರು ಬೇರಿಲ್ಲದಿರುವುದರಿಂದ, ಸ್ವಲ್ಪಕಾಲ ನಂಬಿ, ಶೋಧನೆ ಬಂದಾಗ ಬಿದ್ದುಹೋಗುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಗುಂಡಾಡ್ ಜಮ್ನಿ ವರ್‍ತಿ ಪಡಲ್ಲೆ ಭ್ಹಿಂಯ್ ಮಟ್ಲ್ಯಾರ್, ಜಿ ಲೊಕಾ ದೆವಾಚ್ಯಾ ಗೊಸ್ಟಿಯಾ ಆಯಿಕ್ತ್ಯಾತ್, ಅನಿ ಕುಶಿನ್ ಅಪ್ನಾಚ್ಯಾ ಮನಾತ್ ಥವ್ನ್ ಘೆತ್ಯಾತ್, ಖರೆ ತ್ಯಾ ಗೊಸ್ಟಿಯಾ ತೆಂಚ್ಯಾ ಮನಾತ್ ಎಗ್ದಮ್ ಭುತ್ತುರ್ ಗೆಲ್ಲ್ಯಾ ರಾಯ್ನ್ಯಾತ್. ತೆನಿ ವಿಶ್ವಾಸ್ ಕರ್‍ತ್ಯಾತ್ ಹೊಯ್ ಖರೆ ಕಾಯ್,ತರ್ ಕಸ್ಟ್ ಯೆಲೊ ಮಟ್ಲ್ಯಾರ್ ತೆನಿ ತ್ಯಾ ದೆವಾಚ್ಯಾ ಗೊಸ್ಟಿಯಾ ಸೊಡುನ್ ಸೊಡ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:13
37 ತಿಳಿವುಗಳ ಹೋಲಿಕೆ  

ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಯೆಹೂದವೇ, ನಿನ್ನನ್ನು ಹೇಗೆ ಸರಿಮಾಡಲಿ? ನಿಮ್ಮ ಭಕ್ತಿಯು ಪ್ರಾತಃಕಾಲದ ಮೋಡಕ್ಕೂ, ಬೇಗನೆ ಮಾಯವಾಗುವ ಇಬ್ಬನಿಗೂ ಸಮಾನವಾಗಿದೆ.


ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ, ಮಧುರ ಸ್ವರದಿಂದ ಹಾಡುವ ಪ್ರೇಮಗೀತೆಗೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ.


ಕೆಡುಕರ ಕೊಳ್ಳೆಯು ದುಷ್ಟರಿಗೆ ಇಷ್ಟ, ಆದರೆ ಶಿಷ್ಟರ ಬುಡ ಫಲದಾಯಕ.


ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು, ನಿಮ್ಮ ಸ್ನೇಹಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ. ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೋಡಗಳೂ, ಫಲಗಳನ್ನು ಬಿಡದ, ಸಂಪೂರ್ಣವಾಗಿ ಸತ್ತ, ಬೇರು ಸಹಿತ ಕಿತ್ತು ಬಿದ್ದ ಶರತ್ಕಾಲದ ಮರಗಳು.


“ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಂಡಿತು. ಮತ್ತು ಮೈತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವುದಕ್ಕೆ ಹೋಯಿತು.” ಎಂಬ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.


ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.


ನಾವಾದರೋ ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವರಾಗಿದ್ದೇವೆ.


ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ.


ಅವರಂತು ದಿನದಿನವೂ ನನ್ನ ದರ್ಶನಕ್ಕಾಗಿ ಬಂದು, ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಹೆಚ್ಚಳಪಡುತ್ತಾರೆ; ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ, ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಆನಂದಿಸುತ್ತಾರೆ.


ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದಾಗಿದೆ.


ನಂಬಿಕೆಯನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಗಟ್ಟಿಯಾಗಿ ಹಿಡಿದುಕೊಂಡಿರು. ಕೆಲವರು ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ವಿಷಯದಲ್ಲಿ ಹಡಗು ಒಡೆದು, ನಷ್ಟಪಟ್ಟವರಂತೆ ಇದ್ದಾರೆ.


ಆದ್ದರಿಂದ ಇನ್ನು ತಡೆಯಲಾರದೆ ಒಂದು ವೇಳೆ ಶೋಧಕನು ನಿಮ್ಮನ್ನು ಶೋಧಿಸಿದ್ದರಿಂದ ನಮ್ಮ ಪ್ರಯಾಸವು ವ್ಯರ್ಥವಾಯಿತೋ ಏನೋ ಎಂದು ನಿಮ್ಮ ನಂಬಿಕೆಯನ್ನು ಕುರಿತು ನಾನು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ನಿಮ್ಮ ಬಳಿಗೆ ಕಳುಹಿಸಿದೆನು.


ಆತನಲ್ಲಿ ಬೇರೂರಿಕೊಂಡು, ಆತನಲ್ಲಿ ಕಟ್ಟಲ್ಪಟ್ಟು ಮತ್ತು ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರ ಸಲ್ಲಿಸುವವರಾಗಿರಿ.


ನೀವು ಇವೆಲ್ಲವುಗಳನ್ನು ಅನುಭವಿಸಿದ್ದು ವ್ಯರ್ಥವೋ? ವ್ಯರ್ಥವೇ ಎಂದು ಹೇಳಬೇಕೇನು?


ಎಲೈ ಬುದ್ಧಿಹೀನರಾದ ಗಲಾತ್ಯದವರೇ! ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿಯೇ ವರ್ಣಿಸಲ್ಪಟ್ಟನಲ್ಲವೇ?


ನಾನು ನಿಮಗೆ ಸಾರಿದ ಸುವಾರ್ತೆಯನ್ನು ನೀವು ದೃಢವಾಗಿ ಹಿಡಿದುಕೊಂಡರೆ ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ ನಿಮ್ಮ ನಂಬಿಕೆಯು ನಿರರ್ಥಕವಾಗುತ್ತದೆ.


ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ.


ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ.


ಯಾರೂ ದುಷ್ಟತನದಿಂದ ಸ್ಥಿರನಾಗನು, ಶಿಷ್ಟನು ಯಾವಾಗಲೂ ದೃಢಮೂಲನೇ.


ಅವನಿಗೆ, ‘ಆದಷ್ಟು ಹಿಂಸೆಯನ್ನು ಮಾಡೋಣ, ಅವನಿಗೆ ಸಂಭವಿಸಿದ್ದಕ್ಕೆ ಮೂಲವು ಅವನಲ್ಲಿಯೇ ಅಡಗಿದೆ’ ಎಂದು ನೀವು ಆಡಿಕೊಂಡ ಕಾರಣ,


ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.


ನನಗೆ ಪ್ರವಾದನ ವರವಿದ್ದರೂ, ಎಲ್ಲಾ ರಹಸ್ಯಗಳೂ, ಸಕಲ ವಿಧವಾದ ವಿದ್ಯೆಗಳನ್ನು ತಿಳಿದ್ದರೂ, ಬೆಟ್ಟಗಳನ್ನೂ ತೆಗೆದಿಡುವುಷ್ಟು ನಂಬಿಕೆಯಿದ್ದರೂ, ಪ್ರೀತಿಯಿಲ್ಲದವನಾಗಿದ್ದರೆ ನಾನು ಏನೂ ಅಲ್ಲದವನಾಗಿದ್ದೇನೆ.


ಏಕೆಂದರೆ ಹೆರೋದನು ಯೋಹಾನನನ್ನು ನೀತಿವಂತನೆಂದೂ ಪರಿಶುದ್ಧನೆಂದೂ ತಿಳಿದು ಭಯಪಟ್ಟು ಅವನಿಗೆ ಯಾವ ಅಪಾಯವೂ ಬಾರದಂತೆ ಕಾಪಾಡಿದ್ದನು. ಇದಲ್ಲದೆ ಯೋಹಾನನು ಹೇಳುತ್ತಿದ್ದ ಸಂದೇಶವನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಅಸಮಾಧಾನ ಉಂಟಾದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.


ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.


ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿ ರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿದ್ದಿರುವ ಬೀಜಗಳು.


ಇನ್ನು ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವನದಲ್ಲಿ ಆಗುವ ಚಿಂತೆ, ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಕೊಡಲಾರದವರು, ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು