Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ತಮ್ಮ ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ. ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹದವಾದ ಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಅದನ್ನು ಸದ್ಗುಣಶೀಲ ಹಾಗೂ ಸಾತ್ವಿಕವಾದ ಹೃದಯದಲ್ಲಿಟ್ಟು ಸಹನೆಯಿಂದ ಫಲ ತರುವವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ಒಳ್ಳೆಯ ಹೃದಯದಲ್ಲಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ; ಇವರೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಒಳ್ಳೆಯ ನೆಲದಲ್ಲಿ ಬಿದ್ದ ಬೀಜವೆಂದರೇನು? ಒಳ್ಳೆಯದಾದ ಮತ್ತು ಯಥಾರ್ಥವಾದ ಹೃದಯದಿಂದ ದೇವರ ವಾಕ್ಯವನ್ನು ಕೇಳುವ ಜನರೇ ಬೀಜಬಿದ್ದ ಒಳ್ಳೆಯ ನೆಲವಾಗಿದ್ದಾರೆ. ಅವರು ದೇವರ ವಾಕ್ಯಕ್ಕೆ ವಿಧೇಯರಾಗಿ ತಾಳ್ಮೆಯಿಂದ ಒಳ್ಳೆಯ ಫಲವನ್ನು ನೀಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ಬೀಜ ಬಿದ್ದ ಒಳ್ಳೆಯ ಭೂಮಿಯವರು ಯಾರೆಂದರೆ ಯಥಾರ್ಥವಾದ ಒಳ್ಳೆಯ ಹೃದಯದಿಂದ, ವಾಕ್ಯವನ್ನು ಕೇಳಿ ಅದನ್ನು ಕೈಕೊಂಡು, ತಾಳ್ಮೆಯಿಂದ ಫಲಿಸುವವರೇ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಖರೆ, ಬರ್‍ಯಾ ಮಾಟಿತ್ ಪಡಲ್ಲೆ ಭ್ಹಿಂಯ್ ಮಟ್ಲ್ಯಾರ್, ಜಿ ಲೊಕಾ, ದೆವಾಚಿ ಬರಿ ಖಬರ್ ಆಯಿಕ್ತ್ಯಾತ್, ಅನಿ ಬರ್‍ಯಾ ಮನಾನ್ ತೆ ಮಾನುನ್ ಘೆತ್ಯಾತ್, ಅನಿ ಫಳ್ ದಿ ಪತರ್ ತೆನಿ ತಿ, ದೆವಾಚಿ ಬರಿ ಖಬರ್ ಸಂಬಾಳುನ್ ಥವ್ನ್ ಘೆತ್ಯಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:15
40 ತಿಳಿವುಗಳ ಹೋಲಿಕೆ  

ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.


ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟಬೊಕ್ಕಸದೊಳಗಿನಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.


ನಾವು ಆತನ ಆಜ್ಞೆಗಳನ್ನು ಅರಿತು ನಡೆಯುವುದರಿಂದಲೇ ಆತನನ್ನು ನಾವು ಬಲ್ಲವರಾಗಿದ್ದೇವೆಂದು ತಿಳಿದುಕೊಳ್ಳುತ್ತೇವೆ.


ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,


ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳಿದುಕೊಂಡ ದಿನದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟಂತೆ ಲೋಕದಲ್ಲೆಲ್ಲಾ ಫಲಕೊಟ್ಟು ವೃದ್ಧಿಯಾಗುತ್ತಿದೆ.


“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.


ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು.


ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.


ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತಿದ್ದೀರಿ. ದೇವರಿಗೆ ಫಲಕೊಡುವುದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತು ಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿದ್ದೀರಿ.


ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.


ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಗೊಂಡು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಪ್ರಕಾರ, ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ, ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ಆದರೆ ಕಡೆಯವರೆಗೂ ತಾಳುವವನು ರಕ್ಷಣೆ ಹೊಂದುವನು.


ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೆ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.


ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.


ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.


ಸುನ್ನತಿ ಇರುವುದೋ ಸುನ್ನತಿ ಇಲ್ಲದಿರುವುದೋ ಪ್ರಾಮುಖ್ಯವಲ್ಲ. ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ ಮುಖ್ಯವಾಗಿದೆ.


ನನ್ನಲ್ಲಿ ಅಂದರೆ ನನ್ನ ಶರೀರಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದಿದೆ ಒಳ್ಳೆಯದನ್ನು ಮಾಡುವುದಕ್ಕೆ ನನಗೇನೋ ಮನಸ್ಸುಂಟು ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು.


ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.


ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.


ಆ ತಾಳ್ಮೆಯು ಸಂಪೂರ್ಣವಾಗಿ ನಿಮ್ಮಲ್ಲಿ ಫಲಿಸಲಿ, ಆಗ ನೀವು ಸರ್ವಸುಗುಣಸಂಪನ್ನರೂ, ಪರಿಪೂರ್ಣರೂ, ಯಾವುದಕ್ಕೂ ಕಡಿಮೆಯಿಲ್ಲದವರೂ ಆಗುವಿರಿ.


ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಹಚ್ಚಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ, ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು.


ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. ಸೇನಾಧೀಶ್ವರನಾದ ದೇವರೇ, ಯೆಹೋವನೇ, ನಾನು ನಿನ್ನ ಹೆಸರಿನವನಲ್ಲವೇ!


ಕಂದಾ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಳ್ಳು.


ನಿನಗೆ ವಿರುದ್ಧವಾಗಿ ಪಾಪಮಾಡದಂತೆ, ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.


ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು.


ಇನ್ನು ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವನದಲ್ಲಿ ಆಗುವ ಚಿಂತೆ, ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಕೊಡಲಾರದವರು, ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು.


“ಇದಲ್ಲದೆ ಯಾರೂ ದೀಪವನ್ನು ಹಚ್ಚಿ ಪಾತ್ರೆಯಿಂದ ಮುಚ್ಚುವುದಿಲ್ಲ, ಮಂಚದ ಕೆಳಗೂ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.


ಆದರೆ ಕಾಣದಿರುವುದನ್ನು ನಾವು ಎದುರುನೋಡುವವರಾಗಿರುವುದರಿಂದ ತಾಳ್ಮೆಯಿಂದ ಕಾದುಕೊಂಡಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು