Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆತನು ಅವರಿಗೆ, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿಯು ಸಹೋದರರು ಆಗಿದ್ದಾರೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅದಕ್ಕೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿ ಮತ್ತು ಅಣ್ಣತಮ್ಮಂದಿರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆತನು ಅವರಿಗೆ - ಯಾರು ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುತ್ತಾರೋ ಅವರೇ ನನಗೆ ತಾಯಿಯೂ ಸಹೋದರರು ಆಗಬೇಕು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅದಕ್ಕೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದಕ್ಕೆ ವಿಧೇಯರಾಗುವ ಜನರೇ ನನ್ನ ತಾಯಿ ಮತ್ತು ನನ್ನ ತಮ್ಮಂದಿರು!” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅದಕ್ಕೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನ್ನ ತಾಯಿ ಮತ್ತು ನನ್ನ ಸಹೋದರರು ಆಗಿದ್ದಾರೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತನ್ನಾ ಜೆಜುನ್ ತೆಂಕಾ ಸಗ್ಳ್ಯಾಕ್ನಿ “ದೆವಾಚ್ಯಾ ಗೊಸ್ಟಿಯಾ ಆಯಿಕ್ತ್ಯಾತ್, ಅನಿ ತಸೆಚ್ ಚಲ್ತ್ಯಾತ್, ತೆನಿ ಮಾಜಿ ಬಾಯ್, ಅನಿ ಮಾಜಿ ಭಾವಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:21
19 ತಿಳಿವುಗಳ ಹೋಲಿಕೆ  

ದೇವರ ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇವಲ ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.


ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.


ಪ್ರಿಯನೇ, ನೀನು ಕೆಟ್ಟ ನಡತೆಯನ್ನು ಅನುಸರಿಸದೆ, ಒಳ್ಳೆಯ ನಡತೆಯನ್ನು ಅನುಸರಿಸು; ಒಳ್ಳೆಯದನ್ನು ಮಾಡುವವನು ದೇವರ ಮಗನಾಗಿರುತ್ತಾನೆ. ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.


ಆತನು ನೀತಿವಂತನಾಗಿದ್ದಾನೆಂಬುದು ನಿಮಗೆ ತಿಳಿದಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನೆಂದು ನೀವು ಬಲ್ಲವರಾಗಿರುತ್ತೀರಿ.


ಇದಲ್ಲದೆ, “ನಾನು ನಿಮ್ಮನ್ನು ಸ್ವೀಕರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ, ಕುಮಾರಿಯರು ಆಗಿರುವಿರೆಂದು” ಸರ್ವಶಕ್ತನಾದ ಕರ್ತನು ಹೇಳುತ್ತಾನೆ.


ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ತಮ್ಮ ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ. ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು.


ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ.


ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು” ಎಂದನು.


ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.


ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.


ಆಗ ಯೇಸು ಅವರಿಗೆ, “ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ಅವರು ನನ್ನನ್ನು ನೋಡುವರು” ಎಂದು ಹೇಳಿದನು.


ಆಗ ಆತನು ಉತ್ತರವಾಗಿ ಅವರಿಗೆ, ‘ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.


ಜನರು ಆತನಿಗೆ, “ನಿನ್ನ ತಾಯಿಯು, ನಿನ್ನ ಸಹೋದರರು ನಿನ್ನನ್ನು ಕಾಣಬೇಕೆಂದು ಹೊರಗೆ ನಿಂತಿದ್ದಾರೆ” ಎಂದು ಹೇಳಿದಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು