Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೇಸು ದಡಕ್ಕೆ ಇಳಿಯುತ್ತಲೇ ಆ ಊರಿನವನಾದ ಒಬ್ಬ ಮನುಷ್ಯನು ಆತನೆದುರಿಗೆ ಬಂದನು. ಅವನಿಗೆ ದೆವ್ವಗಳು ಹಿಡಿದಿದ್ದವು. ಅವನು ಬಹುಕಾಲದಿಂದ ವಸ್ತ್ರವನ್ನೇ ಧರಿಸದೆ ಮನೆಯಲ್ಲಿ ವಾಸಿಸದೆ ಸಮಾಧಿಯ ಗವಿಗಳಲ್ಲಿಯೇ ಇರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಯೇಸು ದಡದ ಮೇಲೆ ಕಾಲಿಟ್ಟದ್ದೇ ತಡ, ಆ ಊರಿನವನೊಬ್ಬನು ಬಂದು ಅವರನ್ನು ಎದುರುಗೊಂಡನು. ಅವನಿಗೆ ಪಿಶಾಚಿ ಹಿಡಿದಿತ್ತು. ಅವನು ಬಟ್ಟೆತೊಟ್ಟು ಬಹಳ ದಿನಗಳಾಗಿತ್ತು; ಮನೆ ಬಿಟ್ಟು ಸಮಾಧಿಗಳ ಗುಹೆಗಳಲ್ಲೇ ವಾಸಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆತನು ದಡಕ್ಕೆ ಇಳಿಯುತ್ತಲೇ ಆ ಊರಿನವನಾದ ಒಬ್ಬ ಮನುಷ್ಯನು ಆತನೆದುರಿಗೆ ಬಂದನು. ಅವನಿಗೆ ದೆವ್ವಗಳು ಹಿಡಿದಿದ್ದವು. ಬಹುಕಾಲದಿಂದ ಬಟ್ಟೆಯನ್ನೇ ಹಾಕಿಕೊಳ್ಳದೆ ಯಾವ ಮನೆಯಲ್ಲಿಯೂ ಇರದೆ ಸಮಾಧಿಯ ಗವಿಗಳಲ್ಲಿಯೇ ಇರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೇಸು ದೋಣಿಯಿಂದ ಇಳಿದಾಗ, ಆ ಪಟ್ಟಣದ ಮನುಷ್ಯನೊಬ್ಬನು ಯೇಸುವಿನ ಬಳಿಗೆ ಬಂದನು. ಈ ಮನುಷ್ಯನಿಗೆ ದೆವ್ವ ಹಿಡಿದಿತ್ತು. ಬಹಳ ಕಾಲದಿಂದ ಅವನು ಬಟ್ಟೆಯನ್ನೇ ಹಾಕಿಕೊಂಡಿರಲಿಲ್ಲ. ಅವನು ಸಮಾಧಿಯ ಗವಿಗಳಲ್ಲಿ ವಾಸಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೇಸು ದಡಕ್ಕೆ ಸೇರಿದಾಗ, ಬಹುಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆ ಯಾವ ಮನೆಯಲ್ಲಿ ಇರದೆ ಸಮಾಧಿಯ ಗುಹೆಗಳಲ್ಲಿ ವಾಸಿಸುತ್ತಿದ್ದ ಒಬ್ಬ ಮನುಷ್ಯನನ್ನು ಯೇಸು ಸಂಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಜೆಜು ಢೊನಿತ್ನಾ ದಂಡೆಕ್ ಉತರಲ್ಲ್ಯಾ ತನ್ನಾಚ್, ತ್ಯಾ ಗಾಂವಾತ್ಲ್ಯಾ ಗಿರೆ ಲಾಗಲ್ಲ್ಯಾ ಎಕ್ ಮಾನ್ಸಾಕ್ ತೊ ಭೆಟ್ಲೊ. ಲೈ ದಿಸಾಕ್ನಾ ತೊ ಮಾನುಸ್ ಆಂಗಾರ್ ಕಪ್ಡೆನಸ್ತಾನಾ ಫಿರಿ, ಅನಿ ಘರಾತ್ ರೈನಸಿ, ಲೊಕಾಕ್ನಿ ಮಾಟಿ ದಿತಲ್ಯಾ ಢೊಂಬಾತ್ನಿಚ್ ತೊ ರೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:27
8 ತಿಳಿವುಗಳ ಹೋಲಿಕೆ  

ಅಲ್ಲಿಗೆ ಸೇರಿದ ಮೇಲೆ ಅವನು ತನ್ನ ಬಟ್ಟೆಗಳನ್ನು ತೆಗೆದುಹಾಕಿ, ಸಮುವೇಲನ ಮುಂದೆ ಪ್ರವಾದಿಸುತ್ತಾ, ಆ ದಿನ ಹಗಲಿರುಳು ಬೆತ್ತಲೆಯಾಗಿ ಬಿದ್ದುಕೊಂಡಿದ್ದನು. ಇದರಿಂದ “ಸೌಲನೂ ಕೂಡ ಪ್ರವಾದಿಗಳಲ್ಲಿ ಒಬ್ಬನಾಗಿದ್ದಾನೆಯೇ” ಎಂಬ ಮಾತು ಪ್ರಚಲಿತವಾಯಿತು.


ಬಯಲಿನಲ್ಲಿರುವ ಯಾವನಾದರೂ ಕತ್ತಿಯಿಂದ ಕೊಲ್ಲಲ್ಪಟ್ಟವನಾದರೂ, ಯಾವನಿಗಾದರೂ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬಾಗಲಿ, ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.


ಗೋರಿಗಳಲ್ಲಿ ಕುಳಿತುಕೊಳ್ಳುತ್ತಾ, ಗುಪ್ತಸ್ಥಳಗಳಲ್ಲಿ ರಾತ್ರಿ ಕಳೆಯುತ್ತಾ, ಹಂದಿಯ ಮಾಂಸವನ್ನು ತಿನ್ನುತ್ತಾ, ಅಸಹ್ಯ ಪದಾರ್ಥಗಳ ಸಾರನ್ನು ತಮ್ಮ ಪಾತ್ರೆಗಳಲ್ಲಿ ಬಡಿಸಿಕೊಳ್ಳುತ್ತಾ ಅಲ್ಲಿ ನಿಂತಿರುತ್ತಾರೆ.


ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ಆ ದೆವ್ವಹಿಡಿದಿದ್ದವನು ಅಂದರೆ ದೆವ್ವಗಳ ದಂಡಿನಿಂದ ಬಂಧಿಸಲ್ಪಟ್ಟವನು, ಬಟ್ಟೆಗಳನ್ನು ಹಾಕಿಕೊಂಡು ಸುಬುದ್ಧಿಯಿಂದ ಕುಳಿತಿರುವುದನ್ನು ನೋಡಿ ಹೆದರಿದರು.


ಆ ಮೇಲೆ ಅವರು ಗಲಿಲಾಯಕ್ಕೆ ಎದುರಾಗಿರುವ ಗೆರಸೇನರ ಸೀಮೆಯನ್ನು ತಲುಪಿದರು.


ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಅಡ್ಡಬಿದ್ದು ಮಹಾಶಬ್ದದಿಂದ, “ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು