Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಏಕೆಂದರೆ, ಈ ಮನುಷ್ಯನನ್ನು ಬಿಟ್ಟುಹೋಗಬೇಕೆಂದು ಆತನು ಆ ದೆವ್ವಕ್ಕೆ ಅಪ್ಪಣೆ ಕೊಟ್ಟಿದ್ದನು. ಅದು ಬಹು ಕಾಲದಿಂದ ಅವನನ್ನು ಹಿಡಿದಿತ್ತು; ಇದಲ್ಲದೆ ಅವನನ್ನು ಕಾವಲಲ್ಲಿಟ್ಟು ಸರಪಣಿಗಳಿಂದಲೂ ಬೇಡಿಗಳಿಂದಲೂ ಬಂಧಿಸಿದ್ದರೂ ಅವನು ಅವುಗಳನ್ನು ಮುರಿದುಹಾಕುತ್ತಿದ್ದನು; ಮತ್ತು ಆ ದೆವ್ವವು ಅವನನ್ನು ನಿರ್ಜನ ಪ್ರದೇಶಗಳಿಗೆ ಓಡಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಕಾರಣ - ಅವನನ್ನು ಬಿಟ್ಟು ತೊಲಗಬೇಕೆಂದು ಯೇಸು ದೆವ್ವಕ್ಕೆ ಆಗಲೆ ಕಟ್ಟಪ್ಪಣೆ ಮಾಡಿದ್ದರು. ಎಷ್ಟೋ ಸಾರಿ ಅದು ಅವನ ಮೇಲೆ ಬಂದಿತ್ತು. ಜನರು ಅವನನ್ನು ಸರಪಳಿ ಸಂಕೋಲೆಗಳಿಂದ ಬಂಧಿಸಿ ಕಾವಲಿನಲ್ಲಿ ಇಟ್ಟಿದ್ದರೂ ಅವುಗಳನ್ನು ಅವನು ಮುರಿದುಹಾಕುತ್ತಿದ್ದನು; ದೆವ್ವ ಅವನನ್ನು ಬೆಂಗಾಡಿಗೆ ಅಟ್ಟುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯಾಕಂದರೆ - ಈ ಮನುಷ್ಯನನ್ನು ಬಿಟ್ಟುಹೋಗಬೇಕೆಂದು ಆತನು ಆ ದೆವ್ವಕ್ಕೆ ಅಪ್ಪಣೆಕೊಟ್ಟಿದ್ದನು. ಅದು ಬಹು ಕಾಲದಿಂದ ಅವನನ್ನು ಹಿಡಿದಿತ್ತು; ಇದಲ್ಲದೆ ಅವನನ್ನು ಕಾವಲಲ್ಲಿಟ್ಟು ಸರಪಣಿಗಳಿಂದಲೂ ಬೇಡಿಗಳಿಂದಲೂ ಕಟ್ಟಿದ್ದರೂ ಅವನು ಆ ಬಂಧಗಳನ್ನು ಮುರಿದುಹಾಕುತ್ತಿದ್ದನು; ಮತ್ತು ಆ ದೆವ್ವ ಅವನನ್ನು ಅರಣ್ಯಪ್ರದೇಶಗಳಿಗೆ ಓಡಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಏಕೆಂದರೆ, ದೆವ್ವಕ್ಕೆ ಅವನಿಂದ ಹೊರಗೆ ಬರಬೇಕೆಂದು ಯೇಸು ಅಪ್ಪಣೆ ಕೊಟ್ಟಿದ್ದರು. ಅದು ಬಹಳ ಸಾರಿ ಅವನನ್ನು ಹಿಡಿಯುತ್ತಿದ್ದುದರಿಂದ, ಅವನು ಸರಪಣಿಗಳಿಂದಲೂ ಬೇಡಿಗಳಿಂದಲೂ ಬಂಧಿತನಾದರೂ ಅವನು ಆ ಬಂಧನಗಳನ್ನು ಮುರಿದು ಬಿಡುತ್ತಿದ್ದನು ಮತ್ತು ದೆವ್ವವು ಅವನನ್ನು ಏಕಾಂತ ಸ್ಥಳಕ್ಕೆ ಓಡಿಸಿಕೊಂಡು ಹೋಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಕಶ್ಯಾಕ್ ಮಟ್ಲ್ಯಾರ್,ಜೆಜುನ್ ತೆಕಾ ತ್ಯಾ ಮಾನ್ಸಾಚ್ಯಾ ಆಂಗಾತ್ನಾ ಭಾಯ್ರ್ ಪಡ್ ಮನುನ್ ಹುಕುಮ್ ದಿಲ್ಲ್ಯಾನ್. ತಸೆ ಮನುನ್ ತೊ ತಸೆ ಮನುಲಾಗಲ್ಲೊ. ಲೊಕಾನಿ ಲೈಂದಾ ತೆಕಾ ಧರುಕ್ ಪ್ರಯತ್ನ್ ಕರಲ್ಲ್ಯಾನಿ. ಅನಿ ಬಂಧಿಖಾನ್ಯಾತ್ ಥವ್ಕ್ ಬಗಟಲ್ಲ್ಯಾನಿ, ಸರ್‍ಪೊಳ್ಯಾನಿ ಹಾತಾ-ಪಾಯಾ ಭಾಂದುಕ್ ಬಗಟಲ್ಲ್ಯಾನಿ, ಖರೆ ತೊ ಸರ್ಪೊಳ್ಯಾ ತೊಡುನ್ ಟಾಕಿ, ಅನಿ ತೊ ಗಿರೊ ತೆಕಾ ಹಾಳ್ ಡಂಗ್ಳಿತ್ ಜಯ್‌ ಸರ್ಕೆ ಕರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:29
9 ತಿಳಿವುಗಳ ಹೋಲಿಕೆ  

ಆ ಹುಡುಗನು ಇನ್ನೂ ಬರುತ್ತಿರುವಾಗಲೇ ಆ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ಬಹಳವಾಗಿ ಒದ್ದಾಡಿಸಿತು. ಆದರೆ ಯೇಸು ಆ ದೆವ್ವವನ್ನು ಗದರಿಸಿ ಆ ಹುಡುಗನಿಗೆ ವಾಸಿಮಾಡಿ ಅವನ ತಂದೆಗೆ ಒಪ್ಪಿಸಿದನು.


ಇವನನ್ನು ದೆವ್ವಹಿಡಿಯುತ್ತದೆ, ಹಿಡಿಯುತ್ತಲೇ ಕೂಗಿಕೊಳ್ಳುತ್ತಾನೆ. ಅದು ಬಾಯಲ್ಲಿ ನೊರೆ ಬರುವಷ್ಟು ಇವನನ್ನು ಒದ್ದಾಡಿಸುತ್ತದೆ ಮತ್ತು ಬಹು ಕಷ್ಟಕೊಟ್ಟು ತೊಂದರೆಪಡಿಸಿದ ಹೊರತು ಬಿಟ್ಟುಬಿಡುವುದಿಲ್ಲ.


ಏಕೆಂದರೆ ಯೇಸು, “ಅಶುದ್ಧಾತ್ಮವೇ ಇವನನ್ನು ಬಿಟ್ಟುಹೋಗು” ಎಂದು ಆಜ್ಞಾಪಿಸಿದ್ದನು.


ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಅಡ್ಡಬಿದ್ದು ಮಹಾಶಬ್ದದಿಂದ, “ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಅಂದನು.


ಯೇಸುವು ಅವನಿಗೆ, “ನಿನ್ನ ಹೆಸರೇನೆಂದು?” ಕೇಳಲು ಅವನು, “ನನ್ನ ಹೆಸರು ದಂಡು” ಅಂದನು, ಏಕೆಂದರೆ ಬಹಳ ದೆವ್ವಗಳು ಅವನೊಳಗೆ ಹೊಕ್ಕಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು