Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯೇಸುವು ಅವನಿಗೆ, “ನಿನ್ನ ಹೆಸರೇನೆಂದು?” ಕೇಳಲು ಅವನು, “ನನ್ನ ಹೆಸರು ದಂಡು” ಅಂದನು, ಏಕೆಂದರೆ ಬಹಳ ದೆವ್ವಗಳು ಅವನೊಳಗೆ ಹೊಕ್ಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯೇಸು, “ನಿನ್ನ ಹೆಸರೇನು?” ಎಂದು ಕೇಳಲು, ಅವನು “ಗಣ", ಎಂದು ಉತ್ತರಕೊಟ್ಟನು; ಏಕೆಂದರೆ, ಅನೇಕ ಪಿಶಾಚಿಗಳು ಅವನನ್ನು ಹೊಕ್ಕಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯೇಸು - ನಿನ್ನ ಹೆಸರೇನೆಂದು ಅವನನ್ನು ಕೇಳಿದ್ದಕ್ಕೆ ಅವನು - ನನ್ನ ಹೆಸರು ದಂಡು ಅಂದನು; ಯಾಕಂದರೆ ಬಹಳ ದೆವ್ವಗಳು ಅವನೊಳಗೆ ಹೊಕ್ಕಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ನಿನ್ನ ಹೆಸರೇನು?” ಎಂದು ಯೇಸು ಕೇಳಿದನು. “ದಂಡು” ಎಂದು ಅವನು ಉತ್ತರಿಸಿದನು. (ಏಕೆಂದರೆ ಅವನೊಳಗೆ ಅನೇಕ ದೆವ್ವಗಳು ಸೇರಿಕೊಂಡಿದ್ದವು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಯೇಸು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದರು. ಅದಕ್ಕವನು, “ಸೇನೆ,” ಎಂದನು. ಏಕೆಂದರೆ ಬಹಳ ದೆವ್ವಗಳು ಅವನಲ್ಲಿ ಸೇರಿಕೊಂಡಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಜೆಜುನ್ ತೆಕಾ “ತುಜೆ ನಾವ್ ಕಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ “ಮಾಜೆ ನಾವ್ ಸೈತಾನಾಂಚೊ ತಾಂಡೊ” ಮಟ್ಲ್ಯಾನ್ ತೆಚ್ಯಾ ಆಂಗಾತ್ ಲೈ ಗಿರೆ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:30
7 ತಿಳಿವುಗಳ ಹೋಲಿಕೆ  

ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆ, ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವುದಿಲ್ಲವೆಂದು ಭಾವಿಸುತ್ತೀಯೋ?


ದೆವ್ವಗಳ ಕಾಟದಿಂದಲೂ ರೋಗಗಳಿಂದಲೂ ಗುಣಹೊಂದಿದ ಕೆಲವು ಮಂದಿ ಹೆಂಗಸರು ಸಹ ಇದ್ದರು. ಈ ಹೆಂಗಸರು ಯಾರಾರೆಂದರೆ, ಏಳು ದುರಾತ್ಮಗಳಿಂದ ಬಿಡುಗಡೆ ಹೊಂದಿದ್ದ ಮಗ್ದಲದ ಮರಿಯಳು,


ವಾರದ ಮೊದಲನೆಯ ದಿನ ಬೆಳಿಗ್ಗೆ ಯೇಸು ಜೀವಿತನಾಗಿ ಎದ್ದ ಮೇಲೆ ಮಗ್ದಲದ ಮರಿಯಳಿಗೆ ಮೊದಲು ಕಾಣಿಸಿಕೊಂಡನು. ಆತನು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದ್ದನು.


ಅವರು, “ದೇವರ ಕುಮಾರನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವುದಕ್ಕಿಂತ ಮೊದಲೇ ನಮ್ಮನ್ನು ದಂಡಿಸುವುದಕ್ಕೆ ಇಲ್ಲಿಗೆ ಬಂದಿರುವೆಯಾ” ಎಂದು ಕೂಗಿದರು.


ಯೇಸು, “ನಿನ್ನ ಹೆಸರು ಏನೆಂದು” ಅವನನ್ನು ಕೇಳಿದ್ದಕ್ಕೆ ಅವನು, “ನನ್ನ ಹೆಸರು ದಂಡು; ಯಾಕೆಂದರೆ ನಾವು ಬಹು ಮಂದಿ ಇದ್ದೇವೆ” ಎಂದು ಹೇಳಿ,


ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ಏಕೆಂದರೆ, ಈ ಮನುಷ್ಯನನ್ನು ಬಿಟ್ಟುಹೋಗಬೇಕೆಂದು ಆತನು ಆ ದೆವ್ವಕ್ಕೆ ಅಪ್ಪಣೆ ಕೊಟ್ಟಿದ್ದನು. ಅದು ಬಹು ಕಾಲದಿಂದ ಅವನನ್ನು ಹಿಡಿದಿತ್ತು; ಇದಲ್ಲದೆ ಅವನನ್ನು ಕಾವಲಲ್ಲಿಟ್ಟು ಸರಪಣಿಗಳಿಂದಲೂ ಬೇಡಿಗಳಿಂದಲೂ ಬಂಧಿಸಿದ್ದರೂ ಅವನು ಅವುಗಳನ್ನು ಮುರಿದುಹಾಕುತ್ತಿದ್ದನು; ಮತ್ತು ಆ ದೆವ್ವವು ಅವನನ್ನು ನಿರ್ಜನ ಪ್ರದೇಶಗಳಿಗೆ ಓಡಿಸುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು