Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಪಾತಾಳಕ್ಕೆ ಹೋಗಿಬಿಡುವಂತೆ ನಮಗೆ ಆಜ್ಞೆಮಾಡಬೇಡವೆಂದು ಅವು ಆತನನ್ನು ಬೇಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆ ಪಿಶಾಚಿಗಳು, “ಪಾತಾಳಕ್ಕೆ ಹೋಗಿಬೀಳಿರೆಂದು ನಮಗೆ ಆಜ್ಞೆಮಾಡಬೇಡಿ,” ಎಂದು ಯೇಸುವನ್ನು ಬೇಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಪಾತಾಳಕ್ಕೆ ಹೋಗಿಬಿಡುವಂತೆ ನಮಗೆ ಆಜ್ಞೆ ಮಾಡಬೇಡವೆಂದು ಅವು ಆತನನ್ನು ಬೇಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ತಮ್ಮನ್ನು ಪಾತಾಳಕ್ಕೆ ಕಳುಹಿಸಕೂಡದೆಂದು ಆ ದೆವ್ವಗಳು ಯೇಸುವನ್ನು ಬೇಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವು ತಮ್ಮನ್ನು ಪಾತಾಳಕ್ಕೆ ಹೋಗುವಂತೆ ಅಪ್ಪಣೆ ಕೊಡಬಾರದೆಂದು ಯೇಸುವನ್ನು ಬೇಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಗಿರ್‍ಯಾನಿ ಅಪ್ನಾಕ್ ಪಾತಾಳಾಕ್ ಧಾಡುನಕ್ಕೊ, ಮನುನ್ ಜೆಜುಕ್ಡೆ ಮಾಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:31
14 ತಿಳಿವುಗಳ ಹೋಲಿಕೆ  

ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.


ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು ಅಧೋಲೋಕದೊಳಗಿನಿಂದ ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು.


ಅವರು ತಮ್ಮ ಸಾಕ್ಷಿಗಳನ್ನು ಹೇಳಿ ಮುಗಿಸಿದ ನಂತರ, ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವುದು.


ಅಧೋಲೋಕದ ಅಧಿಕಾರಿಯಾದ ದೂತನೇ ಅವುಗಳನ್ನಾಳುವ ಅರಸನು. ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ, ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರುಂಟು.


ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಅಡ್ಡಬಿದ್ದು ಮಹಾಶಬ್ದದಿಂದ, “ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಅಂದನು.


ಆದರೆ ನಿನ್ನ ಕೈಚಾಚಿ ಅವನ ಅಸ್ತಿಮಾಂಸಗಳನ್ನು ಹೊಡೆ. ಆಗ ಅವನು ನಿನ್ನ ಮುಖದೆದುರಿಗೆ ನಿನ್ನನ್ನು ದೂಷಿಸದೆ ಬಿಡುವುದಿಲ್ಲ” ಎಂದನು.


ಆದರೆ ನಿನ್ನ ಕೈಚಾಚಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡು. ಆಗ ಅವನು ನಿನ್ನ ಎದುರಿಗೆ ನಿನ್ನನ್ನು ದೂಷಿಸದೇ ಬಿಡುವನೇ?” ಎಂದನು.


ಅಲ್ಲಿಯ ಗುಡ್ಡದ ಮೇಲೆ ಹಂದಿಗಳ ಹಿಂಡು ಮೇಯುತ್ತಿತ್ತು. ಆ ದೆವ್ವಗಳು, ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮಗೆ ಅಪ್ಪಣೆಕೊಡಬೇಕೆಂದು ಯೇಸುವನ್ನು ಬೇಡಿಕೊಂಡವು. ಆತನು ಆಗಲಿ ಎಂದು ಅವುಗಳಿಗೆ ಅಪ್ಪಣೆಕೊಡಲು,


ಎಂದಾಗಲಿ ‘ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರುವುದಕ್ಕಾಗಿ ಯಾರು ಪಾತಾಳಲೋಕಕ್ಕೆ ಇಳಿದುಹೋದರು? ಎಂದಾಗಲಿ ನಿನ್ನ ಮನಸ್ಸಿನಲ್ಲಿ ಅಂದುಕೊಳ್ಳಬಾರದು.’” ಆದರೆ ಅದು ಏನನ್ನು ಹೇಳುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು