Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯ ಉಂಟಾದದ್ದರಿಂದ ಅವರು ಆತನನ್ನು, ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಬಹಳವಾಗಿ ದಿಗಿಲುಗೊಂಡಿದ್ದ ಗೇರಸೇನಿನ ಹಾಗೂ ಸುತ್ತಮುತ್ತಲಿನ ಜನರೆಲ್ಲರೂ ತಮ್ಮನ್ನು ಬಿಟ್ಟುಹೋಗಬೇಕೆಂದು ಯೇಸುವನ್ನು ಕೇಳಿಕೊಂಡರು. ಯೇಸು ದೋಣಿ ಹತ್ತಿ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯಹಿಡಿದದ್ದರಿಂದ ಅವರು ಯೇಸುವನ್ನು - ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಜನರು ಯೇಸುವಿಗೆ, “ನೀನು ಇಲ್ಲಿಂದ ಹೊರಟುಹೋಗು” ಎಂದು ಕೇಳಿಕೊಂಡರು. ಏಕೆಂದರೆ ಅವರು ಬಹಳ ಭಯಗೊಂಡಿದ್ದರು. ಆದ್ದರಿಂದ ಯೇಸು ದೋಣಿಯನ್ನು ಹತ್ತಿ ಮತ್ತೆ ಗಲಿಲಾಯಕ್ಕೆ ಹಿಂತಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಆಗ ಗೆರಸೇನರ ಸೀಮೆಯ ಸುತ್ತಮುತ್ತಲಿನ ಜನಸಮೂಹವೆಲ್ಲವು, ಬಹಳ ಭಯಹಿಡಿದವರಾದುದರಿಂದ ಅವರು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಯೇಸುವನ್ನು ಬೇಡಿಕೊಂಡರು. ಯೇಸು ದೋಣಿಯನ್ನು ಹತ್ತಿ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ತನ್ನಾ ತ್ಯಾ ಜಾಗ್ಯಾ ವೈಲಿ ಸಗ್ಳಿ ಲೊಕಾ ಜೆಜುಕ್ ಅಮ್ಚೆ ಗಾಂವ್ ಸೊಡುನ್ ಜಾ ಮನುಕ್‍ಲಾಲಿ, ಕಶ್ಯಾಕ್ ಮಟ್ಲ್ಯಾರ್, ತೆನಿ ಭಿಂಯಾವಲ್ಲ್ಯಾನಿ, ತಸೆ ಮನುನ್ ಜೆಜು ಢೊನಿತ್ ಚಡ್ಲೊ, ಅನಿ ಜಾವ್ಕಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:37
16 ತಿಳಿವುಗಳ ಹೋಲಿಕೆ  

ಪೌಲ ಮತ್ತು ಸೀಲರ ಬಳಿಗೆ ಹೋಗಿ ವಿನಯವಾಗಿ ಮಾತನಾಡಿ ಅವರನ್ನು ಹೊರಕ್ಕೆ ಕರೆದುಕೊಂಡು ಬಂದು; ನೀವು ಊರನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.


ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು.


ಆಗ ಅವರೆಲ್ಲರೂ ಹೊರಟು ಬೇರೆ ಹಳ್ಳಿಗೆ ಹೋದರು.


ಮತ್ತು ಯಾವ ಊರಿನವರಾದರೂ ನಿಮ್ಮನ್ನು ಸ್ವೀಕರಿಸಿಕೊಳ್ಳದೆ ಹೋದರೆ ಆ ಊರನ್ನು ನೀವು ಬಿಟ್ಟುಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಅಂದನು.


ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಅಡ್ಡಬಿದ್ದು ಮಹಾಶಬ್ದದಿಂದ, “ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಅಂದನು.


ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು, “ಕರ್ತನೇ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗು” ಅಂದನು.


ಆಗ ಅವರು ಯೇಸುವಿಗೆ ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.


ಆಗ ಊರಿನವರೆಲ್ಲರೂ ಯೇಸುವನ್ನು ಸಂಧಿಸಲು ಹೊರಟುಬಂದು ಆತನನ್ನು ಕಂಡು ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.


ಆಗ ಆ ಸ್ತ್ರೀಯು ಎಲೀಯನಿಗೆ, “ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು ದೇವರ ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿರುವೆಯೋ?” ಎಂದಳು.


ಪರಿಶುದ್ಧ ದೇವರಾದ ಯೆಹೋವನ ಮುಂದೆ ಯಾರು ನಿಂತಾರು? ನಮ್ಮನ್ನು ಬಿಟ್ಟು ಈತನು ಹೋಗತಕ್ಕ ಸ್ಥಳ ಯಾವುದು ಎಂದು ಮಾತನಾಡಿಕೊಂಡು


ಆದರೂ ಈ ಘೋರವಾದ ಅಗ್ನಿಜ್ವಾಲೆಯು ನಮ್ಮನ್ನು ದಹಿಸಿ ಬಿಟ್ಟಿತು, ಮತ್ತು ನಮ್ಮ ದೇವರಾದ ಯೆಹೋವನ ಸ್ವರವನ್ನು ನಾವು ಪುನಃ ಕೇಳಿದರೆ ಸತ್ತೇವು.


ನಡೆದ ಸಂಗತಿಯನ್ನು ನೋಡಿದವರು ಆ ದೆವ್ವಹಿಡಿದಿದ್ದವನಿಗೆ ಬಿಡುಗಡೆಯಾದ ರೀತಿಯನ್ನು ಅವರಿಗೆ ತಿಳಿಸಲು,


ಹೊರಡುವಾಗ ದೆವ್ವಗಳಿಂದ ಬಿಡುಗಡೆಯಾದ ಆ ಮನುಷ್ಯನು, ನಾನು ನಿನ್ನ ಜೊತೆಯಲ್ಲಿಯೇ ಇರುತ್ತೇನೆ ಎಂದು ಆತನನ್ನು ಬೇಡಿಕೊಂಡಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು