ಲೂಕ 8:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಆಗ ಹನ್ನೆರಡು ವರ್ಷದಿಂದ ರಕ್ತಸ್ರಾವ ರೋಗವಿದ್ದ ಒಬ್ಬ ಹೆಂಗಸು ಅಲ್ಲಿಗೆ ಬಂದಿದ್ದಳು. ಆಕೆಯು ತನ್ನ ಬಳಿ ಇದ್ದ ಹಣವನ್ನೆಲ್ಲಾ ವೆಚ್ಚಮಾಡಿದರೂ ಒಬ್ಬ ವೈದ್ಯರಿಂದಲೂ ಗುಣಹೊಂದಲಾರದೆ ಇದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಾ ಇದ್ದ ಮಹಿಳೆಯೊಬ್ಬಳು ಆ ಗುಂಪಿನಲ್ಲಿ ಇದ್ದಳು. ಆಕೆ ತನ್ನ ಆಸ್ತಿಪಾಸ್ತಿಯನ್ನೆಲ್ಲಾ ವೈದ್ಯರಿಗೆ ವೆಚ್ಚಮಾಡಿದ್ದರೂ ಆಕೆಯನ್ನು ಗುಣಪಡಿಸಲು ಯಾರಿಂದಲೂ ಸಾಧ್ಯವಾಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಆಗ ಹನ್ನೆರಡು ವರುಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು ಬಂದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಹನ್ನೆರಡು ವರ್ಷಗಳಿಂದ ರಕ್ತಸ್ರಾವವಾಗುತ್ತಿದ್ದ ಸ್ತ್ರೀಯೊಬ್ಬಳು ಅಲ್ಲಿದ್ದಳು. ಆಕೆ ತನ್ನಲ್ಲಿದ್ದ ಹಣವನ್ನೆಲ್ಲಾ ವೈದ್ಯರಿಗೆ ಖರ್ಚು ಮಾಡಿದ್ದಳು. ಆದರೆ ಯಾವ ವೈದ್ಯನಿಗೂ ಆಕೆಯನ್ನು ವಾಸಿಮಾಡಲು ಸಾಧ್ಯವಾಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀ ಆ ಗುಂಪಿನಲ್ಲಿದ್ದಳು. ಅವಳು ತನ್ನ ಆಸ್ತಿಯನ್ನೆಲ್ಲಾ ವೆಚ್ಚಮಾಡಿದ್ದರೂ ಆಕೆಯನ್ನು ಗುಣಪಡಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್43 ತ್ಯಾ ಲೊಕಾತ್ನಿ ಬಾರಾ ವರ್ಸಾಕ್ನಾ ರಗಾತ್ ಜಾತಲ್ಯಾ ರೊಗಾನ್ ತರಾಸ್ ಕರುನ್ ಘೆವ್ನಗೆತ್ ಹೊತ್ತಿ ಎಕ್ ಬಾಯ್ಕೊಮನುಸ್ ಹೊತ್ತಿ; ತೆನಿ ಅಪ್ನಾಕ್ಡೆ ಹೊತ್ತೆ ಸಗ್ಳೆ ಪೈಸೆ ಸಾರುನ್, ಆರಾಮ್ ಕರ್‍ತಲ್ಯಾಕ್ನಿ ಜಾವ್ನ್ ಬಗಟ್ಲಿನ್, ಖರೆ ಕೊನಾಚ್ಯಾನ್‍ಬಿ ತಿಕಾ ಗುನ್ ಕರುಕ್ ಹೊವ್ಕ್ ನಾ. ಅಧ್ಯಾಯವನ್ನು ನೋಡಿ |