Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:47 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಆ ಹೆಂಗಸು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಯೇಸುವಿಗೆ ಅಡ್ಡಬಿದ್ದು ತಾನು ಇಂಥ ಕಾರಣದಿಂದ ಮುಟ್ಟಿದೆನೆಂತಲೂ ಮುಟ್ಟಿದ ಕೂಡಲೆ ತನಗೆ ವಾಸಿಯಾಯಿತೆಂದೂ ಎಲ್ಲರ ಮುಂದೆ ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಆಗ ಆ ಮಹಿಳೆ ತಾನು ಮಾಡಿದ್ದನ್ನು ಇನ್ನು ಮುಚ್ಚಿಡಲು ಸಾಧ್ಯವಿಲ್ಲವೆಂದು ಅರಿತು, ನಡುಗುತ್ತಾ ಬಂದು, ಯೇಸುವಿಗೆ ಅಡ್ಡಬಿದ್ದಳು. ತಾನು ಮುಟ್ಟಿದ್ದಕ್ಕೆಕಾರಣವನ್ನೂ ತಾನು ತಕ್ಷಣ ಗುಣಹೊಂದಿದ್ದನ್ನೂ ಎಲ್ಲರ ಮುಂದೆ ಬಹಿರಂಗಪಡಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಆ ಹೆಂಗಸು ತಾನು ಮರೆಯಾಗಿಲ್ಲವೆಂತ ತಿಳಿದು ನಡುಗುತ್ತಾ ಬಂದು ಆತನಿಗೆ ಅಡ್ಡ ಬಿದ್ದು ತಾನು ಇಂಥ ಕಾರಣದಿಂದ ಈತನನ್ನು ಮುಟ್ಟಿದೆನೆಂತಲೂ ಮುಟ್ಟಿದ ಕೂಡಲೆ ತನಗೆ ವಾಸಿಯಾಯಿತೆಂತಲೂ ಎಲ್ಲಾ ಜನರ ಮುಂದೆ ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಇನ್ನು ತಾನು ಅಡಗಿಕೊಂಡಿರಲು ಸಾಧ್ಯವಿಲ್ಲವೆಂದು ತಿಳಿದುಕೊಂಡ ಆ ಸ್ತ್ರೀಯು ನಡುಗುತ್ತಾ ಆತನ ಮುಂದೆ ಬಂದು ಅಡ್ಡಬಿದ್ದು ತಾನು ಮುಟ್ಟಿದ್ದಕ್ಕೆ ಕಾರಣವನ್ನು ಎಲ್ಲರ ಎದುರಿನಲ್ಲಿ ತಿಳಿಸಿದಳು. ಅಲ್ಲದೆ ಆತನನ್ನು ಮುಟ್ಟಿದಾಕ್ಷಣವೇ ತನಗೆ ವಾಸಿಯಾಯಿತೆಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಆ ಸ್ತ್ರೀಯು, ತಾನು ಇನ್ನು ಮರೆಮಾಡಲು ಸಾಧ್ಯವಿಲ್ಲವೆಂದು ತಿಳಿದು, ನಡುಗುತ್ತಾ ಬಂದು ಯೇಸುವಿನ ಮುಂದೆ ಅಡ್ಡಬಿದ್ದು, ಯಾವ ಕಾರಣದಿಂದ ಆಕೆಯು ಯೇಸುವನ್ನು ಮುಟ್ಟಿದಳೆಂದೂ ಹೇಗೆ ತಾನು ಕೂಡಲೇ ಸ್ವಸ್ಥಳಾದಳೆಂದೂ ಎಲ್ಲಾ ಜನರ ಮುಂದೆ ಅವರಿಗೆ ತಿಳಿಯಪಡಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ತನ್ನಾ ತಿ ಬಾಯ್ಕೊಮನುಸ್ ಅತ್ತಾ ಅನಿ ಮಾಕಾ ನಿಪುನ್ ರಾವ್ಕ್ ಹೊಯ್ನಾ ಮನುನ್, ಕಾಪುನ್ಗೆತ್ ಜೆಜುಕ್ಡೆ ಯೆಲಿ, ಅನಿ ತೆಚ್ಯಾ ಪಾಂಯಾತ್ ಪಡ್ಲಿ.ಥೈ ಸಗ್ಳ್ಯಾಂಚ್ಯಾ ಇದ್ರಾಕ್ ತೆನಿ, ಅಪ್ನಿ ಜೆಜುಕ್ ಕಶ್ಯಾಕ್ ಹಾತ್‍ ಲಾವ್ಲಿನ್, ಅನಿ ಅಪ್ನಿ ಕಶಿ ತಾಬೊಡ್ತೊಬ್ ಆರಾಮ್ ಹೊಲೊ ಮನುನ್ ಸಾಂಗ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:47
18 ತಿಳಿವುಗಳ ಹೋಲಿಕೆ  

ಆ ಮಹಿಳೆ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಭಯದಿಂದ ನಡುಗುತ್ತಾ ಬಂದು ಆತನಿಗೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ತಿಳಿಸಿದಳು.


ನೀವು ವಿಧೇಯತೆಯಲ್ಲಿ ಭಯಭಕ್ತಿಯಿಂದ ಅವನನ್ನು ಸ್ವೀಕರಿಸಿಕೊಂಡಿದ್ದನ್ನು ಜ್ಞಾಪಕಮಾಡಿಕೊಳ್ಳುವಾಗ ನಿಮ್ಮ ಮೇಲೆ ಅವನಿಗಿರುವ ಪ್ರೀತಿ ಹೆಚ್ಚಾಗಿದೆ.


ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.


ಇದಲ್ಲದೆ ನಾನು ನಿಮ್ಮಲ್ಲಿಗೆ ಬಂದಾಗ ನಿಮ್ಮ ಬಳಿಯಲ್ಲಿ ಬಲಹೀನನೂ, ಭಯಪಡುವವನೂ, ಬಹು ನಡುಗುವವನೂ ಆಗಿದ್ದೆನು.


ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ; ನಡುಗುತ್ತಾ ಉಲ್ಲಾಸಪಡಿರಿ.


ಆಗ ಅವನು; ದೀಪ ತರಬೇಕೆಂದು ಕೂಗಿ ಒಳಕ್ಕೆ ಹಾರಿ ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಮುಂದೆ ಆಡ್ಡಬಿದ್ದನು.


ಯೆಹೋವನು ಹೇಳಿದಂತೆಯೇ ಸಮುವೇಲನು ಬೇತ್ಲೆಹೇಮಿಗೆ ಹೋದನು. ಆ ಊರಿನ ಹಿರಿಯರು ನಡುಗುತ್ತಾ ಬಂದು ಅವನನ್ನು ಎದುರುಗೊಂಡು “ನಿನ್ನ ಆಗಮನವು ನಮಗೆ ಶುಭಕರವಾಗಿದೆಯೇ?” ಎಂದು ಕೇಳಲು


ಅದು ನನಗೆ ಕೇಳಿಸಲು ನನ್ನ ಒಡಲು ನಡುಗಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು. ನಾನು ನಿಂತ ಹಾಗೆಯೇ ನಡುಗಿದೆನು. ವಿಪತ್ಕಾಲವು ನಮ್ಮನ್ನು ಹಿಂಸಿಸುವ ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವವರೆಗೂ ನಾನು ಅದಕ್ಕಾಗಿ ತಾಳ್ಮೆಯಿಂದ ಎದುರುನೋಡುವೆನು.


ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ಕರ್ತನೇ, ನನ್ನ ಅಪೇಕ್ಷೆ ನಿನಗೆ ಗೊತ್ತುಂಟು; ನನ್ನ ನಿಟ್ಟುಸಿರು ನಿನಗೆ ಮರೆಯಾಗಿಲ್ಲ.


ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಅನುಸರಿಸಿದಂತೆ ಈಗಲೂ ಅನುಸರಿಸಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ, ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.


ಅವರು ಭಯದಿಂದಲೂ, ಮಹಾ ಸಂತೋಷದಿಂದಲೂ ಬೇಗ ಸಮಾಧಿಯ ಬಳಿಯಿಂದ ಹೊರಟು ಆತನ ಶಿಷ್ಯರಿಗೆ ಅದನ್ನು ತಿಳಿಸುವುದಕ್ಕೆ ಓಡಿಹೋದರು.


ಪೂರ್ವದಲ್ಲಿ ಎಫ್ರಾಯೀಮು ನುಡಿದ ಮಾತಿಗೆ ಎಲ್ಲರೂ ನಡುಗಿದರು, ಅದು ಇಸ್ರಾಯೇಲಿನಲ್ಲಿ ಉನ್ನತಸ್ಥಿತಿಗೆ ಬಂದಿತ್ತು; ಆದರೆ ಬಾಳ್ ದೇವತೆಯ ವಿಷಯದಲ್ಲಿ ದೋಷಿಯಾದಾಗ ನಾಶವಾಯಿತು.


ಎಫ್ರಾಯೀಮನ್ನು ಬಲ್ಲೆ, ಇಸ್ರಾಯೇಲ್ ನನಗೆ ಮರೆಯಾಗಿಲ್ಲ; ಎಫ್ರಾಯೀಮೇ, ನೀನೀಗ ವ್ಯಭಿಚಾರ ಮಾಡಿದ್ದಿ, ಇಸ್ರಾಯೇಲ್ ಹೊಲೆಯಾಗಿದೆ.


ಎಲ್ಲಾ ದೇವಭಕ್ತರೇ, ಬಂದು ಕೇಳಿರಿ; ಆತನು ನನಗಾಗಿ ಮಾಡಿದ್ದೆಲ್ಲವನ್ನು ನಿಮಗೆ ತಿಳಿಸುವೆನು.


ಆದರೆ ಯೇಸುವು, “ಯಾರೋ ಒಬ್ಬರು ನನ್ನನ್ನು ಮುಟ್ಟಿದರು; ನನ್ನಿಂದ ಶಕ್ತಿಯು ಹೊರಟಿತೆಂಬುದು ನನಗೆ ಗೊತ್ತಾಯಿತು” ಅಂದಾಗ,


ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು