Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:50 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಆದರೆ ಯೇಸು ಅದನ್ನು ಕೇಳಿ ಸಭಾಮಂದಿರದ ಅಧಿಕಾರಿಗೆ, “ಅಂಜಬೇಡ, ನಂಬಿಕೆ ಮಾತ್ರ ಇರಲಿ, ಆಕೆ ಬದುಕುವಳು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಇದನ್ನು ಕೇಳಿದ ಯೇಸು ಯಾಯೀರನಿಗೆ, “ಭಯಪಡಬೇಡ, ನಿನ್ನಲ್ಲಿ ವಿಶ್ವಾಸವೊಂದಿದ್ದರೆ ಸಾಕು, ನಿನ್ನ ಮಗಳು ಬದುಕುವಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಆದರೆ ಯೇಸು ಅದನ್ನು ಕೇಳಿ ಅವನಿಗೆ - ಅಂಜಬೇಡ, ನಂಬಿಕೆ ಮಾತ್ರ ಇರಲಿ, ಆಕೆ ಬದುಕುವಳು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಯೇಸು ಇದನ್ನು ಕೇಳಿ ಯಾಯಿರನಿಗೆ, “ಭಯಪಡಬೇಡ. ನಂಬಿಕೆಯೊಂದಿರಲಿ. ನಿನ್ನ ಮಗಳಿಗೆ ಗುಣವಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಯೇಸು ಅದನ್ನು ಕೇಳಿ, ಆ ಅಧಿಕಾರಿಗೆ, “ಭಯಪಡಬೇಡ; ನಂಬಿಕೆ ಮಾತ್ರ ಇರಲಿ, ಅವಳು ಬದುಕುವಳು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

50 ಖರೆ ಜೆಜುನ್ ಹೆ ಆಯ್ಕುನ್ ಜಾಯಿರಾಕ್ “ಭಿಂವ್‍ನಕೊ; ಖಾಲಿ ವಿಶ್ವಾಸಾನ್ ರ್‍ಹಾ, ತಿ ಬರಿ ಹೊತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:50
10 ತಿಳಿವುಗಳ ಹೋಲಿಕೆ  

ಯೇಸು ಆಕೆಗೆ, “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದು ಉತ್ತರ ಕೊಟ್ಟನು


ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು,


ಅವರು ಆಡಿದ ಮಾತನ್ನು ಯೇಸು ಗಣನೆಗೆ ತಂದುಕೊಳ್ಳದೆ ಸಭಾಮಂದಿರದ ಅಧಿಕಾರಿಗೆ, “ಅಂಜಬೇಡ, ನಂಬಿಕೆ ಮಾತ್ರ ಇರಲಿ” ಎಂದು ಹೇಳಿದನು.


ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು” ಎಂದು ಹೇಳಿದನು.


“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಪಿತನಾಗಿ ನೇಮಿಸಿದ್ದೇನೆಂದು” ಶಾಸ್ತ್ರದಲ್ಲಿ ಬರೆದಿದೆಯಲ್ಲ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಮತ್ತು ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವನೂ ಆದ ದೇವರಲ್ಲಿ ಅಬ್ರಹಾಮನು ನಂಬಿಕೆಯಿಟ್ಟನು.


ಯೇಸು ಅವನಿಗೆ, “‘ನಿನ್ನ ಕೈಯಲ್ಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ’? ನಂಬುವವನಿಗೆ ಎಲ್ಲವೂ ಸಾಧ್ಯ!” ಎಂದು ಹೇಳಿದನು.


ನಿಮ್ಮೊಳಗೆ ಯಾರು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವರು? ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.


ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ.


ತರುವಾಯ ಆತನು ಆ ಅಧಿಕಾರಿಯ ಮನೆಗೆ ಹೋಗಿ, ಪೇತ್ರ ಯೋಹಾನ ಯಾಕೋಬ ಮತ್ತು ಆ ಹುಡುಗಿಯ ತಂದೆತಾಯಿಯರನ್ನು ಹೊರತು ಬೇರೆ ಯಾರನ್ನೂ ತನ್ನ ಸಂಗಡ ಒಳಕ್ಕೆ ಬರಗೊಡಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು