Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:54 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಆದರೆ ಆತನು ಆಕೆಯ ಕೈ ಹಿಡಿದು, “ಮಗಳೇ, ಎದ್ದೇಳು” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ಯೇಸು ಅವಳ ಕೈಹಿಡಿದು, “ಮಗೂ, ಎದ್ದೇಳು,” ಎಂದು ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ಆದರೆ ಆತನು ಆಕೆಯ ಕೈ ಹಿಡಿದು - ಅಮ್ಮಣ್ಣೀ, ಏಳು ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

54 ಆದರೆ ಯೇಸು ಆಕೆಯ ಕೈಯನ್ನು ಹಿಡಿದು, “ಮಗು, ಎದ್ದೇಳು!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 ಆದರೆ ಯೇಸು ಆಕೆಯ ಕೈಹಿಡಿದು, “ಮಗಳೇ, ಎದ್ದೇಳು!” ಎಂದು ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

54 ಖರೆ ಜೆಜುನ್ ತಿಚೊ ಹಾತ್ ಧರುನ್ “ಲೆಕಿ, ಉಟ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:54
15 ತಿಳಿವುಗಳ ಹೋಲಿಕೆ  

ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.


ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು; “ತಬಿಥಾ, ಎದ್ದೇಳು” ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತುಕೊಂಡಳು.


ಆತನು ಹೀಗೆ ಹೇಳಿದ ಮೇಲೆ, “ಲಾಜರನೇ, ಹೊರಗೆ ಬಾ!” ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.


ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆ.


ತರುವಾಯ ಆತನು ಆ ಅಧಿಕಾರಿಯ ಮನೆಗೆ ಹೋಗಿ, ಪೇತ್ರ ಯೋಹಾನ ಯಾಕೋಬ ಮತ್ತು ಆ ಹುಡುಗಿಯ ತಂದೆತಾಯಿಯರನ್ನು ಹೊರತು ಬೇರೆ ಯಾರನ್ನೂ ತನ್ನ ಸಂಗಡ ಒಳಕ್ಕೆ ಬರಗೊಡಿಸಲಿಲ್ಲ.


ಆದರೆ ಯೇಸು ಅವನನ್ನು ಕೈಹಿಡಿದು ಎಬ್ಬಿಸಲು ಹುಡುಗನು ಎದ್ದು ನಿಂತನು.


ಆತನು ಕುರುಡನ ಕೈ ಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳು ಹಚ್ಚಿ, ಅವನ ಮೇಲೆ ತನ್ನ ಕೈಗಳನ್ನಿಟ್ಟು, “ನಿನಗೆ ಏನಾದರೂ ಕಾಣುತ್ತದೆಯೋ?” ಎಂದು ಅವನನ್ನು ಕೇಳಿದನು.


ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು.


ಜನರನ್ನು ಹೊರಕ್ಕೆ ಕಳುಹಿಸಿದ ಮೇಲೆ ಆತನು ಒಳಗೆ ಹೋಗಿ ಆಕೆಯ ಕೈ ಹಿಡಿಯಲು ಆಕೆ ಎದ್ದಳು.


“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಪಿತನಾಗಿ ನೇಮಿಸಿದ್ದೇನೆಂದು” ಶಾಸ್ತ್ರದಲ್ಲಿ ಬರೆದಿದೆಯಲ್ಲ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಮತ್ತು ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವನೂ ಆದ ದೇವರಲ್ಲಿ ಅಬ್ರಹಾಮನು ನಂಬಿಕೆಯಿಟ್ಟನು.


ಜನರು ಆಕೆ ಸತ್ತಳೆಂದು ತಿಳಿದುಕೊಂಡಿದ್ದರಿಂದ ಆತನನ್ನು ಪರಿಹಾಸ್ಯಮಾಡಿದರು.


ಆಕೆಯ ಆತ್ಮವು ತಿರುಗಿ ಬಂದು ತಕ್ಷಣವೇ ಆಕೆ ಎದ್ದಳು. ತರುವಾಯ ಆತನು, ಈಕೆಗೆ ಊಟಮಾಡಿಸಿರಿ ಎಂದು ಅಪ್ಪಣೆಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು