Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಜನರ ಗುಂಪು ಇದನ್ನು ತಿಳಿದು ಯೇಸುವಿನ ಹಿಂದೆ ಬರಲು ಆತನು ಅವರನ್ನು ಪ್ರೀತಿಯಿಂದ ಸೇರಿಸಿಕೊಂಡು ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ, ಸ್ವಸ್ಥತೆ ಅಗತ್ಯವಿದ್ದವರನ್ನು ಗುಣಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇದನ್ನು ತಿಳಿದುಕೊಂಡು ಜನಸಮೂಹ ಅವರನ್ನು ಹಿಂಬಾಲಿಸಿತು. ಯೇಸು ಅವರನ್ನು ಸ್ವಾಗತಿಸಿ, ದೇವರ ಸಾಮ್ರಾಜ್ಯದ ವಿಷಯವಾಗಿ ಹೇಳಿ, ಅಗತ್ಯವಿದ್ದವರಿಗೆ ಆರೋಗ್ಯದಾನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದರೆ ಜನರ ಗುಂಪು ಇದನ್ನು ತಿಳಿದು ಆತನ ಹಿಂದೆ ಹೋಗಲು ಆತನು ಅವರನ್ನು ಪ್ರೀತಿಯಿಂದ ಸ್ವೀಕರಿಸಿ ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತಾಡಿ ಕ್ಷೇಮಬೇಕಾದವರಿಗೆ ವಾಸಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಯೇಸು ಅಲ್ಲಿಗೆ ಹೋದದ್ದು ಜನರಿಗೆ ತಿಳಿಯಿತು. ಅವರು ಆತನನ್ನು ಹಿಂಬಾಲಿಸಿದರು. ಯೇಸು ಅವರನ್ನು ಸ್ವಾಗತಿಸಿ ದೇವರ ರಾಜ್ಯದ ಬಗ್ಗೆ ಅವರಿಗೆ ತಿಳಿಸಿದನು; ಕಾಯಿಲೆಯ ಜನರನ್ನು ವಾಸಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ಜನರು ಅದನ್ನು ತಿಳಿದು ಯೇಸುವನ್ನು ಹಿಂಬಾಲಿಸಿದರು. ಯೇಸು ಅವರನ್ನು ಸ್ವೀಕರಿಸಿ, ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ, ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಹೆ ಆಯ್ಕಲ್ಲಿ ಲೊಕಾಂಚೊ ತಾಂಡೊ ಜೆಜುಚ್ಯಾ ಫಾಟ್ನಾ ಯೆಲಿ. ತೆನಿ ತೆಂಕಾ ಬಲ್ವುಲ್ಯಾನ್, ಅನಿ ದೆವಾಚ್ಯಾ ರಾಜಾಚ್ಯಾ ವಿಶಯಾತ್ ತೆಂಚೆಕ್ಡೆ ಬೊಲ್ಲ್ಯಾನ್. ಅನಿ ಆರಾಮ್ ಹೊತಲಿ ಗರಜ್ ಹೊತ್ತ್ಯಾಕ್ನಿ ಆರಾಮ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:11
21 ತಿಳಿವುಗಳ ಹೋಲಿಕೆ  

ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.


ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.


ಯಾಕೆಂದರೆ ಕ್ರಿಸ್ತನು ಸಹ ತನ್ನ ಹಿತಕ್ಕಾಗಿ ಚಿಂತಿಸಲಿಲ್ಲ. “ದೇವರೇ ನಿನ್ನನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೂ ಬಂದವು” ಎಂದು ಬರೆದಿದೆಯಲ್ಲಾ.


ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ?


ಯಾವ ಅಡ್ಡಿಯೂ ಇಲ್ಲದೆ, ತುಂಬಾ ಧೈರ್ಯದಿಂದ ದೇವರ ರಾಜ್ಯದ ಕುರಿತು ಬೋಧಿಸುತ್ತಾ, ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು.


ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವನನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.


ಯೇಸು ಅವರಿಗೆ “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ಮಾಡಿ ಆತನ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.


ದೇವರ ರಾಜ್ಯದ ವಿಷಯವನ್ನು ಸಾರುವುದಕ್ಕೂ ಅಸ್ವಸ್ಥರಾದವರನ್ನು ಸ್ವಸ್ಥಮಾಡುವುದಕ್ಕೂ ಅವರನ್ನು ಕಳುಹಿಸಿದನು.


ಆತನು, “ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೆ ಕೊಡಲಾಗಿದೆ, ಉಳಿದವರಿಗೆ ‘ಕಣ್ಣಿದ್ದರೂ ನೋಡದಂತೆಯೂ, ಕೇಳಿಸಿಕೊಂಡರೂ ಗ್ರಹಿಸದಂತೆಯೂ’ ಸಾಮ್ಯರೂಪವಾಗಿ ಹೇಳಲಾಗುತ್ತದೆ.


ತರುವಾಯ ಯೇಸು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ,


ಅದಕ್ಕೆ ಯೇಸು, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು;


ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸಿ, ಸಿರಿವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾನೆ.


ಆದುದರಿಂದ ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲಾಗುವುದು.


ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು? ಎಂದು ಕೇಳಿದ್ದಕ್ಕೆ ಅವರು, ‘ಮೊಲನೆಯವನೇ’” ಅಂದರು. ಆಗ ಯೇಸು ಅವರಿಗೆ, ಸುಂಕದವರೂ, ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಆತನು ಅವರಿಗಿಂತ ಮುಂದಾಗಿ ಬಂದು ಬಹು ಜನರ ಗುಂಪನ್ನು ಕಂಡು ಅವರ ಮೇಲೆ ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,


ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ.


ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು.


ಇತ್ತಲಾಗಿ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದ್ದನ್ನೆಲ್ಲಾ ಯೇಸುವಿಗೆ ವಿವರವಾಗಿ ಹೇಳಿದರು. ಆತನು ಅವರನ್ನು ಪ್ರತ್ಯೇಕವಾಗಿ ಕರೆದುಕೊಂಡು ಬೇತ್ಸಾಯಿದವೆಂಬ ಊರಿಗೆ ಹೋದರು.


ಸಂಜೆಯಾಗುತ್ತಿರಲು, ಆ ಹನ್ನೆರಡು ಮಂದಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಗುಂಪಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಹಳ್ಳಿಪಳ್ಳಿಗಳಿಗೆ ಹೋಗಿ ಅವರಿಗೋಸ್ಕರ ಊಟವಸತಿಗಳನ್ನು ಏರ್ಪಡಿಸಿಕೊಳ್ಳಲಿ; ನಾವು ಇಲ್ಲಿ ನಿರ್ಜನ ಪ್ರದೇಶದಲ್ಲಿ ಇದ್ದೇವಲ್ಲಾ” ಎಂದು ಆತನಿಗೆ ಹೇಳಲಾಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು