Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ಮೇಲೆ ಯೇಸುವು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ, ಮುರಿದು ಶಿಷ್ಯರ ಕೈಗೆ ಕೊಟ್ಟು, ಇದನ್ನು ಜನರ ಗುಂಪಿಗೆ ಹಂಚಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅನಂತರ ಯೇಸು ಆ ಐದು ರೊಟ್ಟಿಗಳನ್ನೂ ಎರಡು ಮೀನುಗಳನ್ನೂ ತೆಗೆದುಕೊಂಡು ಸ್ವರ್ಗದತ್ತ ಕಣ್ಣೆತ್ತಿ ನೋಡಿ, ದೇವರಿಗೆ ಸ್ತೋತ್ರಸಲ್ಲಿಸಿದರು. ತರುವಾಯ ಅವುಗಳನ್ನು ಮುರಿದು ಜನಸಮೂಹಕ್ಕೆ ಬಡಿಸುವಂತೆ ಶಿಷ್ಯರಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಮೇಲೆ ಆತನು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ ಮುರಿದು ಶಿಷ್ಯರ ಕೈಗೆ ಕೊಟ್ಟು - ಈ ಜನರ ಗುಂಪಿಗೆ ಹಂಚಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಗ ಯೇಸು ಐದು ರೊಟ್ಟಿ ಮತ್ತು ಎರಡು ಮೀನುಗಳನ್ನು ಕೈಯಲ್ಲಿ ತೆಗೆದುಕೊಂಡು, ಆಕಾಶದ ಕಡೆಗೆ ನೋಡಿ, ಅವುಗಳಿಗಾಗಿ ದೇವರಿಗೆ ಸ್ತೋತ್ರ ಸಲ್ಲಿಸಿದನು. ಬಳಿಕ ಯೇಸು ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟು ಜನರಿಗೆ ಹಂಚಬೇಕೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ತರುವಾಯ ಯೇಸು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ಅವುಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟು ಜನರಿಗೆ ಹಂಚುವಂತೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಜೆಜುನ್ ಪಾಚ್ ಭಾಕ್ರಿಯಾ ಅನಿ ದೊನ್ ಮೊಸೊಳ್ಯಾ ಘೆಟ್ಲ್ಯಾನ್,ಅನಿ ವೈರ್ ಸರ್‍ಗಾಕ್ ಬಗುನ್ ತೆ ದಿಲ್ಲ್ಯಾಸಾಟ್ನಿ ದೆವಾಕ್ ಧನ್ಯವಾದ್ ದಿಲ್ಯಾನ್,ಅನಿ ಮೊಡುನ್ ಲೊಕಾಕ್ನಿ ವಾಟಾ ಮನುನ್ ಅಪ್ನಾಚ್ಯಾ ಶಿಸಾನಿಕ್ನಿ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:16
16 ತಿಳಿವುಗಳ ಹೋಲಿಕೆ  

ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಕೊಟ್ಟರು.


ಆತನು ಅವರ ಸಂಗಡ ಊಟಕ್ಕೆ ಕುಳಿತುಕೊಂಡಾಗ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ, ಮುರಿದು ಅವರಿಗೆ ಕೊಡುತ್ತಿರಲಾಗಿ,


ಆತನು ಆ ಏಳು ರೊಟ್ಟಿಗಳನ್ನೂ ಆ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಮಾಡಿ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಹಂಚಿಕೊಟ್ಟರು.


ದಿನವನ್ನು ಆಚರಿಸುವವನು ಕರ್ತನಿಗಾಗಿ ಅದನ್ನು ಆಚರಿಸುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರನ್ನು ಸ್ತುತಿಸುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವರನ್ನು ಸ್ತುತಿಸುತ್ತಾನೆ.


ರೊಟ್ಟಿಯನ್ನು ತೆಗೆದುಕೊಂಡು, ಎಲ್ಲರ ಮುಂದೆ ದೇವರ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವುದಕ್ಕೆ ಪ್ರಾರಂಭಿಸಿದನು.


ಅಷ್ಟರೊಳಗೆ ತಿಬೇರಿಯಾದಿಂದ ಬೇರೆ ದೋಣಿಗಳು ಹೊರಟು, ಕರ್ತನು ದೇವರಿಗೆ ಕೃತಜ್ಞತೆ ಸಲ್ಲಿಸಿ, ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.


ಆಮೇಲೆ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಹಂಚಿದನು. ಅದೇ ರೀತಿ ಮೀನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದನು.


ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು.


“ಇದು ನಿಮಗೋಸ್ಕರವಾಗಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು.


ನಾನು ಕೃತಜ್ಞತೆಯೊಡನೆ ಊಟಮಾಡಿ ದೇವರನ್ನು ಸ್ತುತಿಸಿದ ಮೇಲೆ ಆ ಪದಾರ್ಥಗಳ ನಿಮಿತ್ತ ನನಗೆ ಯಾಕೆ ದೂಷಣೆಯಾಗಬೇಕು?


ಆಕಾಶದ ಕಡೆಗೆ ನೋಡಿ ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ, “ಎಪ್ಫಥಾ” ಎಂದು ಹೇಳಿದನು. ಆ ಶಬ್ದಕ್ಕೆ “ತೆರೆಯಲಿ” ಎಂದರ್ಥ.


ಅವನು ಯಜ್ಞಭೋಜನಕ್ಕೋಸ್ಕರ ಗುಡ್ಡಕ್ಕೆ ಹೋಗುವ ಮೊದಲು ನೀವು ಊರೊಳಕ್ಕೆ ಹೋದರೆ ಸಿಕ್ಕುವನು. ಅವನು ಅಲ್ಲಿಗೆ ಹೋಗುವ ವರೆಗೆ ಜನರು ಊಟಮಾಡುವುದಿಲ್ಲ. ಅವನು ಹೋಗಿ ಯಜ್ಞಾಹಾರವನ್ನು ಆಶೀರ್ವದಿಸುತ್ತಾನೆ. ಅನಂತರ ಕರೆಯಲ್ಪಟ್ಟವರು ಊಟಮಾಡುತ್ತಾರೆ. ಈಗಲೇ ಹೋಗಿರಿ. ಅವನು ಸಿಕ್ಕುವ ಸಮಯ ಇದೇ” ಅಂದರು.


ಅವರು ಅದರಂತೆ ಮಾಡಿ ಎಲ್ಲರನ್ನೂ ಕುಳ್ಳಿರಿಸಿದರು.


ಅವರೆಲ್ಲರು ಊಟಮಾಡಿ ತೃಪ್ತರಾದರು; ನಂತರ ಉಳಿದ ತುಂಡುಗಳನ್ನು ಕೂಡಿಸಲಾಗಿ ಅವು ಹನ್ನೆರಡು ಪುಟ್ಟಿ ಆದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು