ಲೂಕ 9:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವರು, “ನಿನ್ನನ್ನು ಸ್ನಾನಿಕನಾದ ಯೋಹಾನನು ಎಂದೂ, ಕೆಲವರು ಎಲೀಯನು ಎಂದೂ, ಇನ್ನು ಕೆಲವರು ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆ ಎಂದು ಅನ್ನುತ್ತಿದ್ದಾರೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅದಕ್ಕೆ ಅವರು, “ಹಲವರು ತಮ್ಮನ್ನು ‘ಸ್ನಾನಿಕ ಯೊವಾನ್ನ’ ಎನ್ನುತ್ತಾರೆ; ಕೆಲವರು ‘ಎಲೀಯನು’ ಎನ್ನುತ್ತಾರೆ; ಮತ್ತೆ ಕೆಲವರು ‘ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ಮರಳಿ ಜೀವಂತನಾಗಿದ್ದಾನೆ’ ಎನ್ನುತ್ತಾರೆ,” ಎಂದು ಉತ್ತರವಿತ್ತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವರು - ನಿನ್ನನ್ನು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪೂರ್ವದ ಪ್ರವಾದಿಗಳಲ್ಲಿ ಯಾವನೋ ಒಬ್ಬನು ಎದ್ದಿದ್ದಾನೆ ಅನ್ನುತ್ತಾರೆ ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅದಕ್ಕೆ ಶಿಷ್ಯರು, “ಕೆಲವು ಜನರು ನಿನ್ನನ್ನು ‘ಸ್ನಾನಿಕನಾದ ಯೋಹಾನ’ ಎನ್ನುತ್ತಾರೆ. ಇನ್ನು ಕೆಲವರು, ‘ಎಲೀಯ’ ಎನ್ನುತ್ತಾರೆ. ಮತ್ತೆ ಕೆಲವರು, ‘ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ಜೀವಂತವಾಗಿ ಎದ್ದುಬಂದಿದ್ದಾನೆ’ ಎನ್ನುತ್ತಾರೆ” ಎಂದು ಉತ್ತರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವರು ಉತ್ತರವಾಗಿ, “ಸ್ನಾನಿಕನಾದ ಯೋಹಾನನು ಎನ್ನುತ್ತಾರೆ. ಆದರೆ ಕೆಲವರು ಎಲೀಯನು. ಬೇರೆ ಕೆಲವರು ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ಪುನಃ ಜೀವಂತನಾಗಿದ್ದಾನೆ ಎನ್ನುತ್ತಾರೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತನ್ನಾ ಶಿಸಾನಿ ತೆಕಾ “ಅನಿ ಉಲ್ಲಿ ಲೊಕಾ ಜುವಾಂವ್ ಬಾವ್ತಿಸ್ ಮನ್ತ್ಯಾತ್,ಉಲ್ಲಿ ಲೊಕಾ ತಿಯಾ ಎಲಿಯಾ ಮನ್ತ್ಯಾತ್, ಅನಿ ಹುರಲ್ಲೆ ಅದ್ಲ್ಯಾ ಕಾಲಾತ್ಲ್ಯಾ ಪ್ರವಾದ್ಯಾನಿತ್ಲೊ ಎಕ್ಲೊ ಪ್ರವಾದಿ ಅನಿ ಪರ್‍ತುನ್ ಝಿತ್ತೊ ಹೊವ್ನ್ ಯೆಲಾ ಮನ್ತ್ಯಾತ್”, ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |