Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದೇವರ ರಾಜ್ಯದ ವಿಷಯವನ್ನು ಸಾರುವುದಕ್ಕೂ ಅಸ್ವಸ್ಥರಾದವರನ್ನು ಸ್ವಸ್ಥಮಾಡುವುದಕ್ಕೂ ಅವರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅನಂತರ ದೇವರ ಸಾಮ್ರಾಜ್ಯವನ್ನು ಕುರಿತು ಬೋಧಿಸುವುದಕ್ಕೂ ರೋಗಿಗಳನ್ನು ಗುಣಪಡಿಸುವುದಕ್ಕೂ ಅವರನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದೇವರ ರಾಜ್ಯದ ವಿಷಯವನ್ನು ಸಾರುವದಕ್ಕೂ ಅಸ್ವಸ್ಥರಾದವರನ್ನು ಸ್ವಸ್ಥಮಾಡುವದಕ್ಕೂ ಅವರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವರ ರಾಜ್ಯದ ಬಗ್ಗೆ ತಿಳಿಸುವುದಕ್ಕೂ ಅಸ್ವಸ್ಥರಾದವರನ್ನು ವಾಸಿಮಾಡುವುದಕ್ಕೂ ಯೇಸು ಅಪೊಸ್ತಲರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಶಿಷ್ಯರು ದೇವರ ರಾಜ್ಯವನ್ನು ಸಾರುವುದಕ್ಕೂ ರೋಗಿಗಳನ್ನು ಸ್ವಸ್ಥಮಾಡುವುದಕ್ಕೂ ಯೇಸು ಅವರನ್ನು ಕಳುಹಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಮಾನಾ ತೆನಿ ತೆಂಕಾ ದೆವಾಚ್ಯಾ ರಾಜಾಚಿ ಬರಿ ಖಬರ್ ಸಾಂಗುಕ್ ಅನಿ ರೊಗಾತ್ನಿ ಹೊತ್ತ್ಯಾಕ್ನಿ ಗುನ್ ಕರುಕ್ ಬಾರಾ ಜಾನಾ ಶಿಸಾಕ್ನಿ ಧಾಡುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:2
14 ತಿಳಿವುಗಳ ಹೋಲಿಕೆ  

ಅಲ್ಲಿರುವ ರೋಗಿಗಳನ್ನು ವಾಸಿಮಾಡಿ ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ’ ಎಂದು ಹೇಳಿರಿ.


ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.”


ಜನರ ಗುಂಪು ಇದನ್ನು ತಿಳಿದು ಯೇಸುವಿನ ಹಿಂದೆ ಬರಲು ಆತನು ಅವರನ್ನು ಪ್ರೀತಿಯಿಂದ ಸೇರಿಸಿಕೊಂಡು ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ, ಸ್ವಸ್ಥತೆ ಅಗತ್ಯವಿದ್ದವರನ್ನು ಗುಣಪಡಿಸಿದನು.


ಅವರು ಹೊರಟು ಹೋಗಿ ಜನರಿಗೆ, “ನೀವು ನಿಮ್ಮ ಪಾಪಗಳನ್ನು ಬಿಟ್ಟು ಮಾನಸಾಂತರ ಹೊಂದಬೇಕು” ಎಂದು ಸಾರಿ ಹೇಳಿದರು.


ಇದಲ್ಲದೆ ರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು.


ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು.


“ಧರ್ಮಶಾಸ್ತ್ರವೂ ಪ್ರವಾದನೆಗಳೂ ಯೋಹಾನನ ತನಕವೇ. ಆ ನಂತರದ ದಿನಗಳಿಂದ ದೇವರ ರಾಜ್ಯದ ಸುವಾರ್ತೆಯು ಸಾರಲ್ಪಡುತ್ತಲಿದೆ. ಅದರಲ್ಲಿ ಎಲ್ಲರೂ ಬಲವಂತವಾಗಿ ನುಗ್ಗಲು ಯತ್ನಿಸುತ್ತಿದ್ದಾರೆ.


‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ’ ಎಂಬುದಾಗಿ ಹೇಳಿರಿ.


ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.


ಇದಾದ ಮೇಲೆ ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ, ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು.


ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು; ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ, “ಅನ್ಯಜನಗಳಿರುವಲ್ಲಿಗೆ ಹೋಗಬೇಡಿರಿ, ಸಮಾರ್ಯದವರ ಊರೊಳಗೆ ಕಾಲಿಡಬೇಡಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು