Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ, ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಮಹಾಪ್ರಭಾವದೊಡನೆ ಬರುವಾಗ ಅವನ ಕುರಿತು ನಾಚಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ, ತನ್ನ ಪಿತನ ಹಾಗೂ ದೇವದೂತರ ಪ್ರಭಾವದೊಡನೆ ಬರುವಾಗ, ನಾಚಿಕೆಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಪ್ರಭಾವದೊಡನೆ ಬರುವಾಗ ನಾಚಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯಾವನಾದರೂ ನನಗೂ ನನ್ನ ಉಪದೇಶಕ್ಕೂ ನಾಚಿಕೊಳ್ಳುವುದಾದರೆ, ನಾನು ನನ್ನ ಮಹಿಮೆಯೊಡನೆ, ತಂದೆಯ ಮಹಿಮೆಯೊಡನೆ ಮತ್ತು ಪರಿಶುದ್ಧ ದೂತರ ಮಹಿಮೆಯೊಡನೆ ಬಂದಾಗ ಅವನ ವಿಷಯದಲ್ಲಿ ನಾಚಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಯಾರಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವುದಾದರೆ, ಮನುಷ್ಯಪುತ್ರನಾದ ನಾನು ಸಹ ನನ್ನ ತಂದೆಯ ಮಹಿಮೆಯೊಡನೆಯೂ ಪರಿಶುದ್ಧ ದೂತರೊಡನೆಯೂ ಬರುವಾಗ, ಅವರ ವಿಷಯದಲ್ಲಿ ನಾಚಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಜೆ ಕೊನ್ ಮಾಕಾ, ಅನಿ ಮಿಯಾ ಶಿಕ್ವುತಲ್ಯಾಕ್ ಲಜ್ತಾ, ಮಾನ್ಸಾಚೊ ಲೆಕ್‍ಬಿ ಅಪ್ನಾಚ್ಯಾ ಬಾಬಾಚ್ಯಾ ಮಹಿಮೆನ್ ಭರುನ್ ಸರ್‍ಗಾಚ್ಯಾ ಪವಿತ್ರ್ ದುತಾಂಚ್ಯಾ ವಾಂಗ್ಡಾ ಯೆತಾನಾ ತೆಚ್ಯಾ ಸಾಟ್ನಿ ಲಜ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:26
30 ತಿಳಿವುಗಳ ಹೋಲಿಕೆ  

ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.


ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.


ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು” ಎಂದನು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.


ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.


“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;


ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರಿಂದ ಬರುವ ಹೊಗಳಿಕೆ ಅವರಿಗೆ ಇಷ್ಟವಾಗಿತ್ತು.


ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.


ಇಂಥವರ ವಿಷಯದಲ್ಲೇ ಆದಾಮನಿಂದ ಏಳನೆಯ ತಲೆಮಾರಿನವನಾದ ಹನೋಕನು ಸಹ, “ಇಗೋ, ಕರ್ತನು ತನ್ನ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು,


ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.


ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು. ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ, ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.


ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.


ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿಯೇ ಹೊರತು ಬೇರೆ ಯಾವ ವಿಷಯದಲ್ಲಿಯೂ ಹೆಚ್ಚಳಪಡುವುದು ಬೇಕಾಗಿಲ್ಲ. ಆತನ ಮೂಲಕ ನಾನು ಲೋಕಕ್ಕೂ, ಲೋಕವು ನನಗಾಗಿಯೂ ಶಿಲುಬೆಗೆ ಹಾಕಿಕೊಂಡು ಸತ್ತಿತು.


ಯೇಸು ಪ್ರತ್ಯುತ್ತರವಾಗಿ, “ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ” ಅಂದನು.


ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.


ಆದ್ದರಿಂದ ನಾವು ಆತನ ನಿಮಿತ್ತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ, ಪಾಳೆಯದ ಆಚೆ ಆತನ ಬಳಿಗೆ ಹೊರಟುಹೋಗೊಣ.


ಐಗುಪ್ತದೇಶದ ಸರ್ವಐಶ್ವರ್ಯಕ್ಕಿಂತಲೂ, ಕ್ರಿಸ್ತನ ನಿಮಿತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು. ಏಕೆಂದರೆ ಮುಂಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು.


ಆದ್ದರಿಂದ ಕ್ರಿಸ್ತನ ನಿಮಿತ್ತ ನನಗೆ ಬಲಹೀನತೆಯಲ್ಲಿಯೂ, ತಿರಸ್ಕಾರದಲ್ಲಿಯೂ, ಕೊರತೆಯಲ್ಲಿಯೂ, ಹಿಂಸೆಯಲ್ಲಿಯೂ ಮತ್ತು ಇಕ್ಕಟ್ಟೂ ಸಂಭವಿಸಿದಾಗಲೂ ಸಂತುಷ್ಟನಾಗಿದ್ದೇನೆ. ಯಾಕೆಂದರೆ ನಾನು ಯಾವಾಗ ದುರ್ಬಲನಾಗಿರುವೆನೋ, ಆವಾಗಲೇ ಬಲವುಳ್ಳವನೂ ಆಗಿರುತ್ತೇನೆ.


ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನ ಸೇವೆಗೆ ಸಿದ್ಧರಾಗಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು. ನ್ಯಾಯಸಭೆಯವರು ಕುಳಿತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.


ಒಬ್ಬನೇ ದೇವರಿಂದ ಬರುವ ಮಹಿಮೆಯನ್ನು ಅಪೇಕ್ಷಿಸದೇ ನಿಮ್ಮ ನಿಮ್ಮೊಳಗೇ ಪ್ರಶಂಸೆಯನ್ನು ಸ್ವೀಕರಿಸುವವರಾದ ನೀವು ಅದನ್ನು ನಂಬಲು ಹೇಗೆ ಸಾಧ್ಯ?


ಅವರು; “ಕೊರ್ನೆಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ, ದೇವರಿಗೆ ಭಯಪಡುವವನೂ, ಯೆಹೂದ್ಯ ಜನರೆಲ್ಲರಿಂದ ಒಳ್ಳೆಯ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನಿನ್ನಿಂದ ಸುವಾರ್ತೆಯನ್ನು ಕೇಳಬೇಕೆಂದು ಪರಿಶುದ್ಧ ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದ್ದಾನೆ” ಎಂದು ಹೇಳಿದರು.


ನೀನು ವಿಚಾರಿಸುವುದಕ್ಕೆ ಮೊದಲೇ ತಪ್ಪುಹೊರಿಸದೆಯೂ, ಪಕ್ಷಪಾತದಿಂದ ಏನೂ ಮಾಡದೆಯೂ, ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ, ಕ್ರಿಸ್ತ ಯೇಸುವಿನ ಮುಂದೆಯೂ, ಆರಿಸಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು