Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 “ಇಲ್ಲಿರುವವರಲ್ಲಿ ಕೆಲವರು, ದೇವರ ಸಾಮ್ರಾಜ್ಯವನ್ನು ನೋಡದೆ ಸಾವನ್ನು ಸವಿಯುವುದಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣ ಹೊಂದುವದಿಲ್ಲವೆಂದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಾನು ಸತ್ಯವನ್ನು ಹೇಳುತ್ತೇನೆ. ಇಲ್ಲಿ ನಿಂತಿರುವ ಕೆಲವರು ತಾವು ಸಾಯುವುದಕ್ಕಿಂತ ಮೊದಲು ದೇವರ ರಾಜ್ಯವನ್ನು ನೋಡುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವನ್ನು ಕಾಣುವತನಕ ಮರಣವನ್ನು ಹೊಂದುವುದೇ ಇಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಮಿಯಾ ಖರೆಚೆ ಸಾಂಗ್ತಾ, ಹಿತ್ತೆ ಹೊತ್ತ್ಯಾ ತುಮ್ಚ್ಯಾ ಮದ್ಲೆ ಉಲ್ಲೆ ಜಾನಾ, ದೆವಾಚೆ ರಾಜ್ ಬಗಟ್ಲ್ಯಾ ಶಿವಾಯ್ ಮರಿನ್ಯಾತ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:27
11 ತಿಳಿವುಗಳ ಹೋಲಿಕೆ  

“ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಅಂದನು.


ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವು ಪ್ರಬಲವಾಗಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು.


ಇಂದಿನಿಂದ ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ” ಅಂದನು.


ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟವನಾದ ಯೇಸು ಬಾಧೆಯನ್ನುಭವಿಸಿ ಮೃತಪಟ್ಟದ್ದರಿಂದಲೇ ಮಹಿಮೆಯನ್ನೂ ಗೌರವವನ್ನೂ ಕಿರೀಟವಾಗಿ ಹೊಂದಿರುವುದನ್ನು ನಾವು ನೋಡುತ್ತೇವೆ. ಅದಕ್ಕಾಗಿಯೇ ದೇವರ ಕೃಪೆಯಿಂದ ಯೇಸು ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಿದ್ದಾನೆ.


ಇದಲ್ಲದೆ, ಕರ್ತನು ಕಳುಹಿಸಬೇಕಾದ ಕ್ರಿಸ್ತನನ್ನು ಕಾಣುವುದಕ್ಕಿಂತ ಮುಂಚೆ ನೀನು ಸಾಯುವುದಿಲ್ಲವೆಂದು ಪವಿತ್ರಾತ್ಮನ ಮೂಲಕ ಅವನಿಗೆ ದೈವೋಕ್ತಿ ಉಂಟಾಗಿತ್ತು.


ನಿಮಗೆ ಸತ್ಯವಾಗಿ ಹೇಳುತ್ತೇನೆ; ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದೇ ಇಲ್ಲ” ಎಂದನು.


ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮಗೆ ಒಳ್ಳೆಯದು, ಹೇಗೆಂದರೆ ನಾನು ಹೋಗದಿದ್ದರೆ ಆ ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸಿಕೊಡುತ್ತೇನೆ.


ಆಗ ಅವರು ಆತನ ಮೇಲೆ ಎಸೆಯಲು, ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಮರೆಯಾಗಿ ದೇವಾಲಯದೊಳಗಿನಿಂದ ಹೊರಗೆ ಹೊರಟು ಹೋದನು.


ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು