Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯೇಸು ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಪೇತ್ರ ಯೋಹಾನ ಯಾಕೋಬರನ್ನು ಕರೆದುಕೊಂಡು ಪ್ರಾರ್ಥನೆಮಾಡುವುದಕ್ಕೆ ಬೆಟ್ಟವನ್ನು ಹತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಇದನ್ನೆಲ್ಲ ಹೇಳಿ ಸುಮಾರು ಎಂಟು ದಿನಗಳಾದ ಬಳಿಕ ಪೇತ್ರ, ಯೊವಾನ್ನ ಮತ್ತು ಯಕೋಬ ಇವರನ್ನು ತಮ್ಮೊಡನೆ ಕರೆದುಕೊಂಡು ಯೇಸುಸ್ವಾಮಿ ಪ್ರಾರ್ಥನೆಮಾಡಲು ಬೆಟ್ಟವನ್ನು ಹತ್ತಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯೇಸು ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿವಸಗಳಾದ ಮೇಲೆ ಪೇತ್ರ ಯೋಹಾನ ಯಾಕೋಬರನ್ನು ಕರಕೊಂಡು ಪ್ರಾರ್ಥನೆಮಾಡುವದಕ್ಕೆ ಬೆಟ್ಟವನ್ನು ಹತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೇಸು ಈ ಸಂಗತಿಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ನಂತರ, ಪೇತ್ರ, ಯಾಕೋಬ ಮತ್ತು ಯೋಹಾನರನ್ನು ಕರೆದುಕೊಂಡು ಪ್ರಾರ್ಥನೆ ಮಾಡುವುದಕ್ಕೆ ಬೆಟ್ಟದ ಮೇಲೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಯೇಸು, ಪೇತ್ರ, ಯೋಹಾನ ಮತ್ತು ಯಾಕೋಬರನ್ನು ಕರೆದುಕೊಂಡು ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟವನ್ನೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಹೆ ಸಗ್ಳೆ ಸಾಂಗುನ್ ಆಟ್ ದಿಸ್ ಹೊಲ್ಲ್ಯಾ ಮಾನಾ, ಪೆದ್ರುಕ್,ಜುವಾಂವಾಕ್, ಅನಿ ಜಾಕೊಬಾಕ್ ಘೆವ್ನ್ ಜೆಜು ಮಾಗ್ನಿ ಕರುಕ್ ಮನುನ್ ಎಕ್ ಮಡ್ಡಿ ವರ್‍ತಿ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:28
18 ತಿಳಿವುಗಳ ಹೋಲಿಕೆ  

ಆ ದಿನಗಳಲ್ಲಿ ಯೇಸು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋಗಿ ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದನು.


ನಾನು ಅವರನ್ನು ಪ್ರೀತಿಸಿದರೂ, ಅವರು ನನ್ನನ್ನು ವಿರೋಧಿಸುತ್ತಾರೆ; ನಾನಾದರೋ ನಿನಗೆ ಮೊರೆಯಿಡುತ್ತೇನೆ.


ಒಂದು ದಿನ ಯೇಸುವು ಏಕಾಂತವಾಗಿ ಪ್ರಾರ್ಥನೆಮಾಡುತ್ತಿರುವಾಗ ಆತನ ಶಿಷ್ಯರು ಆತನ ಸಂಗಡ ಇದ್ದರು. ಅನಂತರ ಆತನು ಅವರಿಗೆ, “ಜನರು ನನ್ನನ್ನು ಕುರಿತು ಏನು ಹೇಳುತ್ತಾರೆ?” ಎಂದು ಶಿಷ್ಯರನ್ನು ಕೇಳಲು,


ತರುವಾಯ ಆತನು ಆ ಅಧಿಕಾರಿಯ ಮನೆಗೆ ಹೋಗಿ, ಪೇತ್ರ ಯೋಹಾನ ಯಾಕೋಬ ಮತ್ತು ಆ ಹುಡುಗಿಯ ತಂದೆತಾಯಿಯರನ್ನು ಹೊರತು ಬೇರೆ ಯಾರನ್ನೂ ತನ್ನ ಸಂಗಡ ಒಳಕ್ಕೆ ಬರಗೊಡಿಸಲಿಲ್ಲ.


ಆತನು ಜನರನ್ನು ಕಳುಹಿಸಿಕೊಟ್ಟ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟಕ್ಕೆ ಹೋದನು.


ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ನಿರ್ಜನ ಸ್ಥಳಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದನು.


ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು.


ನಾನು ನಿಮ್ಮ ಬಳಿಗೆ ಮೂರನೆಯ ಸಾರಿ ಬರುತ್ತಿದ್ದೇನೆ. “ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,” ಎಂದು ಲಿಖಿತವಾಗಿದೆ.


ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಂಡಾಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥನೆ ಮಾಡುತ್ತಿರುವಾಗ ಆಕಾಶವು ತೆರೆಯಲ್ಪಟ್ಟಿತು


ಯೇಸು ದೊಡ್ಡ ಗುಂಪನ್ನು ಕಂಡು ಬೆಟ್ಟದ ಮೇಲೇರಿ ಕುಳಿತ ತರುವಾಯ ಆತನ ಶಿಷ್ಯರು ಆತನ ಬಳಿಗೆ ಬಂದರು.


ಆತನು ಜನರ ಗುಂಪುಗಳನ್ನು ಕಳುಹಿಸಿಬಿಟ್ಟ ಮೇಲೆ ಪ್ರಾರ್ಥನೆ ಮಾಡುವುದಕ್ಕಾಗಿ ಏಕಾಂಗಿಯಾಗಿ ಬೆಟ್ಟವನ್ನು ಹತ್ತಿದನು. ಮತ್ತು ಸಂಜೆಯಾದಾಗ ಆತನೊಬ್ಬನೇ ಅಲ್ಲಿ ಇದ್ದನು.


ಆದರೆ ಯೇಸು ಜನರಿಂದ ಪ್ರತ್ಯೇಕಿಸಿಕೊಂಡು ನಿರ್ಜನ ಪ್ರದೇಶಗಳಿಗೆ ಹೋಗಿ ಪ್ರಾರ್ಥನೆಯನ್ನು ಮಾಡುತ್ತಿದ್ದನು.


ಆದರೆ ಯೇಸು ಬೆಟ್ಟವನ್ನೇರಿ ಅಲ್ಲಿ ತನ್ನ ಶಿಷ್ಯರೊಂದಿಗೆ ಕುಳಿತುಕೊಂಡನು.


ನಮ್ಮ ಕರ್ತನಾದ ಯೇಸುಕ್ರಿಸ್ತನ ಶಕ್ತಿಯನ್ನೂ, ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕಥೆಗಳನ್ನು ನಾವು ಅನುಸರಿಸಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ಅದನ್ನು ತಿಳಿಯಪಡಿಸಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು