Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಇದಲ್ಲದೆ ಇಬ್ಬರು ಪುರುಷರು ಆತನ ಸಂಗಡ ಮಾತನಾಡುತ್ತಿದ್ದರು. ಅವರು ಯಾರೆಂದರೆ ಮೋಶೆಯೂ ಎಲೀಯನೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಇದ್ದಕ್ಕಿದ್ದ ಹಾಗೆ ಮೋಶೆ ಮತ್ತು ಎಲೀಯ ಎಂಬ ಇಬ್ಬರು ಪ್ರವಾದಿಗಳು ಅವರೊಡನೆ ಮಾತನಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆತನ ಉಡುಪು ಬೆಳ್ಳಗಾಗಿ ವಿುಂಚುತ್ತಾ ಬಂತು. ಇದಲ್ಲದೆ ಇಬ್ಬರು ಪುರುಷರು ಆತನ ಸಂಗಡ ಮಾತಾಡುತ್ತಿದ್ದರು. ಇವರು ಯಾರಂದರೆ ಮೋಶೆಯೂ ಎಲೀಯನೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆಗ ಇಬ್ಬರು ಪ್ರವಾದಿಗಳು ಯೇಸುವಿನೊಡನೆ ಮಾತನಾಡುತ್ತಿದ್ದರು. ಅವರು ಮೋಶೆ ಮತ್ತು ಎಲೀಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಮೋಶೆ ಮತ್ತು ಎಲೀಯನು ಎಂಬ ಇಬ್ಬರು ಪುರುಷರು ಯೇಸುವಿನೊಂದಿಗೆ ಮಾತನಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಎಗ್ದಮ್ ದೊಗ್ ಜಾನಾ ತೆಚೆಕ್ಡೆ ಬೊಲುಕ್‍ಲಾಲೆ. ತೆನಿ ಕೊನ್ ಮಟ್ಲ್ಯಾರ್, ಮೊಯ್ಜೆ ಅನಿ ಎಲಿಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:30
13 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ತರುವಾಯ ಯೇಸು, “ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?” ಅಂದನು.


ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.


ಅವರು, “ನಿನ್ನನ್ನು ಸ್ನಾನಿಕನಾದ ಯೋಹಾನನು ಎಂದೂ, ಕೆಲವರು ಎಲೀಯನು ಎಂದೂ, ಇನ್ನು ಕೆಲವರು ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆ ಎಂದು ಅನ್ನುತ್ತಿದ್ದಾರೆ” ಎಂದು ಹೇಳಿದರು.


ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ ಕರ್ತನ ಮುಂದೂತನಾಗಿ ಹೋಗುವನು. ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ, ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತನಿಗಾಗಿ ಜನರನ್ನು ಸಿದ್ಧಪಡಿಸುವನು” ಎಂದು ಹೇಳಿದನು.


ಆತನು ಪ್ರಾರ್ಥನೆಮಾಡುತ್ತಿರಲಾಗಿ ಆತನ ಮುಖಭಾವವು ಬದಲಾಯಿತು. ಆತನ ಉಡುಪು ಬೆಳ್ಳಗಾಗಿ ಮಿಂಚುತ್ತಾ ಬಂದಿತು.


ಅವರು ವೈಭವದೊಡನೆ ಕಾಣಿಸಿಕೊಂಡು ಯೆರೂಸಲೇಮಿನಲ್ಲಿ ಆತನು ಹೊಂದಬೇಕಾಗಿದ್ದ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು