Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವರು ವೈಭವದೊಡನೆ ಕಾಣಿಸಿಕೊಂಡು ಯೆರೂಸಲೇಮಿನಲ್ಲಿ ಆತನು ಹೊಂದಬೇಕಾಗಿದ್ದ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ದಿವ್ಯ ವೈಭವದಿಂದ ಕಂಗೊಳಿಸುತ್ತಿದ್ದ ಇವರಿಬ್ಬರು ಯೇಸು ಜೆರುಸಲೇಮಿನಲ್ಲಿ ಪ್ರಾಣತ್ಯಾಗಮಾಡಿ ದೈವೇಚ್ಛೆಯನ್ನು ನೆರವೇರಿಸಲಿದ್ದ ವಿಷಯವಾಗಿ ಸಂಭಾಷಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಇವರು ವೈಭವದೊಡನೆ ಕಾಣಿಸಿಕೊಂಡು ಯೆರೂಸಲೇವಿುನಲ್ಲಿ ಆತನು ನೆರವೇರಿಸಬೇಕಾಗಿದ್ದ ಮರಣದ ವಿಷಯವಾಗಿ ಮಾತಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಇವರಿಬ್ಬರು ಸಹ ಪ್ರಕಾಶಮಾನವಾಗಿ ಹೊಳೆಯುತ್ತಿದ್ದರು. ಜೆರುಸಲೇಮಿನಲ್ಲಿ ಸಂಭವಿಸಲಿಕ್ಕಿದ್ದ ಆತನ ಮರಣದ ಬಗ್ಗೆ ಅವರು ಮಾತಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಇವರು ಮಹಿಮೆಯಲ್ಲಿ ಕಾಣಿಸಿಕೊಂಡು, ಯೇಸು ಯೆರೂಸಲೇಮಿನಲ್ಲಿ ಪೂರೈಸುವುದಕ್ಕಿದ್ದ ಅವರ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತೆನಿ ಸರ್‍ಗಾ ವೈಲ್ಯಾ ಮಹಿಮೆನ್ ಭರುನ್, ಜೆಜು ದೆವಾಚಿ ಯವ್ಜನ್ ಪುರಾ ಕರುಕ್, ಕಶೆ ಕಶೆ ಕರುನ್ ಜೆರುಜಲೆಮಾತ್ ಮರ್‍ನಾರ್ ಹಾಯ್, ಮನುನ್ ಬೊಲುಲಾಗಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:31
14 ತಿಳಿವುಗಳ ಹೋಲಿಕೆ  

ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಹೊಂದಿದವನಾಗಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ಪ್ರಭಾವವುಳ್ಳ ತನ್ನ ದೇಹದಂತೆ ರೂಪಾಂತರಪಡಿಸುವನು.


ನೀವು ನನ್ನ ಮರಣಾನಂತರ ಇವುಗಳನ್ನು ಯಾವಾಗಲೂ ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ನಾನು ಆಸಕ್ತಿವಹಿಸುವೆನು.


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.


ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.


ನಿಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನೊಂದಿಗೆ ಮಹಿಮೆಯಲ್ಲಿ ಪ್ರತ್ಯಕ್ಷರಾಗುವಿರಿ.


ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.


ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.


ಯೇಸು ಅವರಿಗೆ, “ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ” ಎಂದು ಹೇಳಿದನು.


ಇದಲ್ಲದೆ ಇಬ್ಬರು ಪುರುಷರು ಆತನ ಸಂಗಡ ಮಾತನಾಡುತ್ತಿದ್ದರು. ಅವರು ಯಾರೆಂದರೆ ಮೋಶೆಯೂ ಎಲೀಯನೂ.


ಯೋಸೇಫನು ತನ್ನ ಮರಣ ಸಮಯದಲ್ಲಿ ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಡುವುದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳನ್ನು ತೆಗೆದುಕೊಂಡು ಹೋಗುವ ವಿಷಯದಲ್ಲಿ ಅಪ್ಪಣೆ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು