Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಇಷ್ಟರಲ್ಲಿ ಪೇತ್ರನಿಗೂ ಅವನ ಸಂಗಡ ಇದ್ದವರಿಗೂ ನಿದ್ರೆಯಿಂದ ಮೈಭಾರವಾಗಿತ್ತು. ಆದರೆ ಎಚ್ಚರವಾದ ಮೇಲೆ ಅವರು ಆತನ ಮಹಿಮೆಯನ್ನೂ ಆತನ ಸಂಗಡ ನಿಂತಿದ್ದ ಆ ಇಬ್ಬರು ಪುರುಷರನ್ನೂ ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಗಾಢ ನಿದ್ರೆಯಲ್ಲಿದ್ದ ಪೇತ್ರ ಮತ್ತು ಸಂಗಡಿಗರು ಎಚ್ಚೆತ್ತಾಗ ಯೇಸುವಿನ ಮಹಿಮೆಯನ್ನೂ ಅವರೊಡನೆ ನಿಂತಿದ್ದ ಆ ಇಬ್ಬರನ್ನೂ ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಇಷ್ಟರಲ್ಲಿ ಪೇತ್ರನಿಗೂ ಅವನ ಸಂಗಡ ಇದ್ದವರಿಗೂ ನಿದ್ರೆಯಿಂದ ಮೈಭಾರವಾಗಿತ್ತು. ಆದರೆ ಎಚ್ಚರವಾದ ಮೇಲೆ ಅವರು ಆತನ ಮಹಿಮೆಯನ್ನೂ ಆತನ ಸಂಗಡ ನಿಂತಿದ್ದ ಆ ಇಬ್ಬರು ಪುರುಷರನ್ನೂ ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಗಾಢನಿದ್ರೆಯಲ್ಲಿದ್ದ ಪೇತ್ರ ಮತ್ತು ಇತರರು ಎಚ್ಚೆತ್ತಾಗ ಯೇಸುವಿನ ಮಹಿಮೆಯನ್ನೂ ಯೇಸುವಿನೊಡನೆ ನಿಂತಿದ್ದ ಅವರಿಬ್ಬರನ್ನೂ ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆದರೆ ಪೇತ್ರನು ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು, ಅವರು ಎಚ್ಚೆತ್ತಾಗ ಯೇಸುವಿನ ಮಹಿಮೆಯನ್ನೂ ಅವರ ಕೂಡ ನಿಂತಿದ್ದ ಇಬ್ಬರು ಪುರುಷರನ್ನೂ ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಪೆದ್ರುಕ್ ಅನಿ ತೆಚ್ಯಾ ವಾಂಗ್ಡಿಯಾಕ್ನಿ ನಿಜ್‍ ಲಾಗಲ್ಲಿ, ಖರೆ ತೆನಿ ಉಟಲ್ಲ್ಯಾ ತನ್ನಾ “ಜೆಜುಚಿ ಮಹಿಮಾ ಅನಿ ತೆಚ್ಯಾ ವಾಂಗ್ಡಾ ಹೊತ್ತ್ಯಾ ದೊಗೆ ಜಾನಾಕ್ನಿ ಬಗಟ್ಲ್ಯಾನಿ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:32
13 ತಿಳಿವುಗಳ ಹೋಲಿಕೆ  

ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.


ಅವನು ನನ್ನೊಡನೆ ಮಾತನಾಡುತ್ತಿರುವಲ್ಲಿ ನಾನು ಮೈಮರೆತು ಬೋರಲು ಬಿದ್ದಿದ್ದೆನು. ಆಗ ಅವನು ನನ್ನನ್ನು ಮುಟ್ಟಿ ನಿಲ್ಲಿಸಿ ನನಗೆ,


ಆದರೂ ಅವನು ಮಾತನಾಡುವ ಶಬ್ದವನ್ನು ಕೇಳಿದೆನು; ಅವನ ಮಾತಿನ ಶಬ್ದವು ನನ್ನ ಕಿವಿಗೆ ಬಿದ್ದಾಗ ನಾನು ಮೈಮರೆತು ಬೋರಲು ಬಿದ್ದಿದ್ದೆನು.


ನಮ್ಮ ಕರ್ತನಾದ ಯೇಸುಕ್ರಿಸ್ತನ ಶಕ್ತಿಯನ್ನೂ, ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕಥೆಗಳನ್ನು ನಾವು ಅನುಸರಿಸಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ಅದನ್ನು ತಿಳಿಯಪಡಿಸಿದೆವು.


ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು, ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.


ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗುಂದುವುದಿಲ್ಲ; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು.


ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.


ಯೇಸು ಹಿಂತಿರುಗಿ ಬಂದಾಗ ಅವರು ಪುನಃ ನಿದ್ರೆ ಮಾಡುವುದನ್ನು ಕಂಡನು ಯಾಕೆಂದರೆ ಅವರ ಕಣ್ಣುಗಳು ಭಾರವಾಗಿದ್ದವು. ಮತ್ತು ಆತನಿಗೆ ಏನು ಉತ್ತರ ಕೊಡಬೇಕೆಂದು ಅವರಿಗೆ ತಿಳಿಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು