ಲೂಕ 9:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅವರು ಯೇಸುವನ್ನು ಬಿಟ್ಟುಹೋಗುತ್ತಿರುವಾಗ ಪೇತ್ರನು ಯೇಸುವಿಗೆ, “ಗುರುವೇ ನಾವು ಇಲ್ಲೇ ಇರುವುದು ಒಳ್ಳೆಯದು, ಮೂರು ಗುಡಾರಗಳನ್ನು ಕಟ್ಟುವೆವು; ನಿನಗೊಂದು ಎಲೀಯನಿಗೊಂದು ಹಾಗೂ ಮೋಶೆಗೊಂದು” ಎಂದು ಹೇಳಿದನು. ತಾನು ಏನು ಹೇಳುತ್ತಿದ್ದೇನೆಂದು ತನಗೇ ಗೊತ್ತಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅವರಿಬ್ಬರೂ ಯೇಸುವನ್ನು ಬಿಟ್ಟುಹೋಗುತ್ತಿರುವಾಗ, ಪೇತ್ರನು ಯೇಸುವಿಗೆ, “ಗುರುದೇವಾ, ನಾವು ಇಲ್ಲೇ ಇರುವುದು ಒಳ್ಳೆಯದು; ಅಪ್ಪಣೆಯಾಗಲಿ, ಮೂರು ಗುಡಾರಗಳನ್ನು ಕಟ್ಟುವೆವು - ತಮಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು,” ಎಂದನು. ತಾನು ಏನು ಹೇಳುತ್ತಿರುವೆನೆಂದೇ ಪೇತ್ರನು ಗ್ರಹಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಇವರು ಆತನನ್ನು ಬಿಟ್ಟುಹೋಗುತ್ತಿರುವಾಗ ಪೇತ್ರನು ಯೇಸುವಿಗೆ - ಗುರುವೇ ನಾವು ಇಲ್ಲೇ ಇರುವದು ಒಳ್ಳೇದು, ಮೂರು ಪರ್ಣಶಾಲೆಗಳನ್ನು ಕಟ್ಟುವೆವು; ನಿನಗೊಂದು ಮೋಶೆಗೊಂದು ಎಲೀಯನಿಗೊಂದು ಎಂದು ಹೇಳಿದನು. ತಾನಂದದ್ದು ತನಗೇ ಗೊತ್ತಾಗಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಮೋಶೆ ಮತ್ತು ಎಲೀಯ ಆತನನ್ನು ಬಿಟ್ಟುಹೋಗುತ್ತಿರುವಾಗ, ಪೇತ್ರನು, “ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು. ಇಲ್ಲಿ ನಾವು ಮೂರು ಗುಡಾರಗಳನ್ನು ಹಾಕುತ್ತೇವೆ. ನಿನಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು” ಎಂದು ಹೇಳಿದನು. (ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂದು ತಿಳಿಯಲಿಲ್ಲ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವರು ಹೋಗುತ್ತಿದ್ದಾಗ ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ನಮಗೆ ಒಳ್ಳೆಯದು, ನಾವು ನಿಮಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು, ಹೀಗೆ ಮೂರು ಗುಡಾರಗಳನ್ನು ಕಟ್ಟುವೆವು,” ಎಂದನು. ತಾನು ಹೇಳಿದ್ದನ್ನು ಅವನು ಅರಿಯದೆ ಇದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ತಿ ಮಾನ್ಸಾ ಜೆಜುಕ್ ಸೊಡುನ್ ಜಾತಾ-ಜಾತಾನಾಚ್ ಪೆದ್ರುನ್ ಗುರುಜಿ , ಹಿತ್ತೆ ಅಮಿ ಹೊತ್ತೆ ಕವ್ಡೆ ಬರೆ ಹಾಯ್ ನ್ಹಯ್? ಅಮಿ ತಿನ್ ಝೊಪ್ಡಿ ಘಾಲ್ತಾಂವ್, ಎಕ್ ತುಕಾ, ಎಕ್ ಮೊಯ್ಜೆಕ್,ಅನಿ ಅನಿ ಎಕ್ ಎಲಿಯಾಕ್. ಮಟ್ಲ್ಯಾನ್ ತೊ ಕಾಯ್ ಬೊಲಿ ಮನುನ್ ತೆಕಾಚ್ ಗೊತ್ತ್ ನತ್ತೆ. ಅಧ್ಯಾಯವನ್ನು ನೋಡಿ |